ಲೋಕಕಲ್ಯಾಣಾರ್ಥ ದೇಗುಲದಲ್ಲಿ ವಿಶೇಷ ಪೂಜೆ
ಚಿಂತಾಮಣಿ: ಶ್ರೀಲಕ್ಷ್ಮಿನರಸಿಂಹಸ್ವಾಮಿ ಜಯಂತಿ ಪ್ರಯುಕ್ತ ಲೋಕ ಕಲ್ಯಾಣಾರ್ಥಕ್ಕಾಗಿ ಉತ್ತಮ ಮಳೆ ಬೆಳೆಗಾಗಿ ನಾಯಿಂದ್ರಹಳ್ಳಿ ಕಾಲೋನಿ ಗ್ರಾಮದಲ್ಲಿ ನೆಲೆಸಿರುವ ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆಯನ್ನು ಹಮ್ಮಿಕೊಳ್ಳಲಾಗಿದೆ.
ತಾಲೂಕಿನ ಪೆರಮಾಚನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನಾಯಿಂದ್ರಹಳ್ಳಿ ಕಾಲೋನಿಯಲ್ಲಿ ನೆಲೆಸಿರುವ ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಾಲಯದಲ್ಲಿ ನರಸಿಂಹಸ್ವಾಮಿ ಜಯಂತಿ ಪ್ರಯುಕ್ತ ಲೋಕ ಕಲ್ಯಾಣಾರ್ಥಕ್ಕಾಗಿ ಉತ್ತಮ ಮಳೆ ಬೆಳೆಗಾಗಿ ಪ್ರಾರ್ಥಿಸಿ ಗ್ರಾಮಸ್ಥರು, ಅಭಿಜಿನ್ ಲಗ್ನದಲ್ಲಿ ಮೇ 13ರಂದು ಮಂಗಳವಾರ ಬೆಳಿಗ್ಗೆ 10 ರಿಂದ 11 ಗಂಟೆಯವರೆಗೆ ಲಕ್ಷ್ಮಿನರಸಿಂಹಸ್ವಾಮಿ ಸಮೇತ ಮಹಾಲಕ್ಷ್ಮಿ ಅಮ್ಮನವರ ಜೊತೆ ಕಲ್ಯಾಣೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದೇ ಸಂದರ್ಭದಲ್ಲಿ ಪಂಚಾಮೃತ ಅಭಿಷೇಕ, ವಿಶೇಷ ಹೂವಿನ ಅಲಂಕಾರ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ, ಅನ್ನ ಸಂತರ್ಪಣೆಯನ್ನು ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ. ಮಂಗಳವಾರ ಸಂಜೆ ಸುತತಮುತ್ತಲಿನ ಗ್ರಾಮಸ್ಥರಿಂದ ದೀಪೋತ್ಸವ, ತಮಟೆ ವಾದ್ಯ ಸೇರಿದಂತೆ ಉತ್ಸವ ಮೂರ್ತಿಯೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ವಿಜೃಂಭಣೆಯಿಂದ ಮೆರವಣಿಗೆ ಮಾಡಲಾಗುತ್ತದೆ.
ನಾದಸುಧಾರಸದಲ್ಲಿ ಶಾಸ್ತ್ರೀಯ ಸಂಗೀತ
ತಾಲೂಕಿನ ಕೈವಾರದ ಶ್ರೀ ಯೋಗಿನಾರೇಯಣ ಮಠದ ನಾದಸುಧಾರಸ ಸಾಂಸ್ಕೃತಿಕ ವೇದಿಕೆಯಲ್ಲಿ ಚಿಕ್ಕಬಳ್ಳಾಪುರದ ನಿಖಿತಾ ಮೋಕ್ಷಗುಂಡಂ ಮತ್ತು ಚಂದ್ರಿಕಾ ಅವರ ದ್ವಂದ್ವ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಇವರಿಗೆ ಪಕ್ಕ ವಾದ್ಯದಲ್ಲಿ ವಿದ್ವಾನ್ ಶ್ಯಾಮಸುಂದರ್ ಇಟೀಲು, ವಿದ್ವಾನ್ ಕೆ.ರಾಮಕುಮಾರ್ ಮತ್ತು ವಿದ್ವಾನ್ ಚಿಂತಪಲ್ಲಿ ಸೋಮಶೇಖರ್ ಖಂಜಿರ ಸಹಕಾರ ನೀಡಿದರು. ಕಾರ್ಯಕ್ರಮದಲ್ಲಿ ತ್ಯಾಗರಾಜಸ್ವಾಮಿ, ಪುರಂದರದಾಸರು, ಕನಕದಾಸರು, ಯೋಗಿನಾರೇಯಣ ತಾತಯ್ಯನವರ ಕೃತಿಗಳನ್ನು ಸುಮದುರವಾಗಿ ಹಾಡಿ ನೆರೆದಿದ್ದ ಭಕ್ತರ ಮನ ತಣಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

