ಲೈಂಗಿಕ ಕಿರುಕುಳ ಆರೋಪಿ ಅಧ್ಯಾಪಕ ಪರ ಹೋರಾಡಲ್ಲ
ಕೋಲಾರ: ಪಿಎಚ್ಡಿ ವಿದ್ಯಾರ್ಥಿನಿಗೆ ಲೈಂಗಿಕ ಕಿರಕುಳ ನೀಡಿರುವ ಆರೋಪ ಹೊತ್ತಿರುವ ಸ್ನಾತಕೋತ್ತರ ಕೇಂದ್ರದ ಸಹಪ್ರಾಧ್ಯಾಪಕ ಕಾ. ವೆಂ. ಶ್ರೀನಿವಾಸಮೂರ್ತಿ ಅವರ ಪರವಾಗಿ ಎಸ್.ಎಫ್.ಐ ಹೋರಾಡುವುದಿಲ್ಲ. ಅನ್ಯಾಯಕ್ಕೊಳಗಾದವರ ಪರವಾಗಿ ಕೆಲಸ ಮಾಡುತ್ತೇವೆಂದು ಎಸ್ಎಫ್ಐ ರಾಜ್ಯಾಧ್ಯಕ್ಷ ವಿ. ಅಂಬರೀಶ್ ಸ್ಪಷ್ಟಪಡಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಿಎಚ್.ಡಿ ವಿದ್ಯಾರ್ಥಿನಿ ಮೇಲೆ ನಡೆದಿರುವ ಲೈಂಗಿಕ ಕಿರಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಎಫ್ಐ ಮತ್ತು ಜೆಎಂಎಸ್ ಸಂಘಟನೆ ಮುಖಂಡರು ವಿದ್ಯಾರ್ಥಿನಿಯ ಕುಟುಂಬದವರನ್ನು ಭೇಟಿ ಮಾಡಿ ಮಾಹಿತಿ ಪಡೆದಿದ್ದಾರೆ. ಯಾವುದೇ ಕಾರಣಕ್ಕೂ ಆರೋಪಿ ಪರವಾಗಿ ಹೋರಾಡುವುದಿಲ್ಲ ಎಂದರು.
ಮೇ.12ರಂದು ವಿಧಾನ ಪರಿಷತ್ ಸದಸ್ಯ ವೈ. ಎ. ನಾರಾಯಣಸ್ವಾಮಿ ಅವರು ಪಿ.ಜಿ. ಕೇಂದ್ರಕ್ಕೆ ಭೇಟಿ ನೀಡಿದ್ದ ಸಂದರ್ಭವನ್ನು ಬಳಸಿಕೊಂಡು ಎಬಿವಿಪಿ ಮುಖಂಡ ಮುರಳಿ ಮತ್ತು ಆತನ ಸಹಚರರು ಕೇಂದ್ರದೊಳಗೆ ಅಕ್ರಮವಾಗಿ ಪ್ರವೇಶಿಸಿ, ತರಗತಿಗಳಿಗೆ ನುಗ್ಗಿ ಲೈಂಗಿಕ ಕಿರುಕುಳ ನೀಡಿರುವ ಸಹ ಪ್ರಾಧ್ಯಾಪಕರೆನಾದರೂ ನಮ್ಮ ಕೈಗೆ ಸಿಕ್ಕಿದರೆ ಅವನ ಕೈಕಾಲು ಕತ್ತರಿಸಿ, ತಲೆ ತೆಗೆದು ಬಿಡುತ್ತಿದ್ದೆವು. ನೀವು ಕೈಲಾಗದವರು ಸುಮ್ಮನಿದ್ದೀರಿ ಎಂದು ವಿದ್ಯಾರ್ಥಿಗಳನ್ನು ಕೆರಳಿಸುವಂತೆ ಪ್ರಚೋದನಾಕಾರಿಯಾಗಿ ಮಾತನಾಡಿದ್ದರಿಂದ ಗಲಾಟೆ ನಡೆಯಿತು ಎಂದರು.
ಈ ಮೊದಲೇ ವಿದ್ಯಾರ್ಥಿನಿಯ ಕುಟುಂಬದವರು ಮನವಿ ಮಾಡಿದ ಹಿನ್ನೆಲೆಯಲ್ಲಿ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡುವುದಕ್ಕೆ ಸ್ನಾತಕೋತ್ತರ ವಿದ್ಯಾರ್ಥಿಯೂ ಆಗಿರುವ ಎಸ್ಎಫ್ಐ ಜಿಲ್ಲಾಧ್ಯಕ್ಷ ವಾಸುದೇವರೆಡ್ಡಿ ತಡೆಯಲು ಪ್ರಯತ್ನಿಸಿದಾಗ ಮುರಳಿ ಮತ್ತು ಆತನ ಸಹಚರರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದಾರೆಂದು ಆರೋಪಿಸಿದರು.
ಘಟನೆ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾದಂತೆ ಎಸ್ಎಪ್ಐ ಪ್ರಾಧ್ಯಾಪಕರ ಪರವಾಗಿ ಇರುವದು ಸತ್ಯಕ್ಕೆ ದೂರವಾದ ಸಂಗತಿಯಾಗಿದ್ದು, ವಿದ್ಯಾರ್ಥಿಗಳ ಹಿತಾಸಕ್ತಿ ಹಾಗೂ ಕಾನೂನಾತ್ಮಕ ಕ್ರಮಗಳ ಪರವಾಗಿ ಇರುತ್ತದೆ ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಜಿಲ್ಲಾ ಸಹಕಾರ್ಯದರ್ಶಿ ಸಿ. ಅಮರೇಶ್, ಜಿಲ್ಲಾ ಉಪಾಧ್ಯಕ್ಷ ಮುಸ್ತಾಫ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

