ಕೋಲಾರ

ಸ್ವಾತಂತ್ರ್ಯ ಹೋರಾಟಗಾರ ಚಂಗಲರಾವ್‌ಗೆ ಶ್ರದ್ಧಾಂಜಲಿ

Published On :

ಶಿಡ್ಲಘಟ್ಟ: ತಾಲೂಕಿನ ಬಚ್ಚಹಳ್ಳಿಯ ಸ್ವಾತಂತ್ರ್ಯ ಹೋರಾಟಗಾರರಾದ ದಿವಂಗತ ಬಿ.ಕೆ.ಚಂಗಲರಾವ್ ಅವರ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಪಟ್ಟಣದ ಶಂಕರಮಠದಲ್ಲಿ ವಿಪ್ರ ಬಾಂಧವರು ಮಂಗಳವಾರ ಸಂಜೆ ಹಮ್ಮಿಕೊಂಡಿದ್ದರು.
ದಿವಂಗತರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ ಪೂಜೆ ಸಲ್ಲಿಸಿ ಅವರ ಆತ್ಮಕ್ಕೆ ಶಾಂತಿ ಕೋರಿ ಮೌನಾಚರಣೆ ಮಾಡಿದರು. ಜಿಲ್ಲಾ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಎಂ.ವಾಸುದೇವರಾವ್ ಮಾತನಾಡಿ, ಚಂಗಲರಾಯರು ಸ್ವಾತಂತ್ರ್ಯ ಹೋರಾಟದಲ್ಲಿ ಪೊಲೀಸ್ ಅಧಿಕಾರಿಗಳಿಂದ ಹಲ್ಲೆಗೊಳಗಾದವರ ಪರವಾಗಿ ಹೋರಾಟ ನಡೆಸಿ ಸುಮಾರು 50 ದಿನಗಳ ಕಾಲ ಸೆರೆವಾಸ ಅನುಭವಿಸಿದ್ದರು. ಪ್ರತಿಭಾವಂತ ಮಕ್ಕಳನ್ನು ದತ್ತು ಪಡೆದು ಅವರ ವಿದ್ಯಾಭ್ಯಾಸದ ವೆಚ್ಚವನ್ನು ಭರಿಸುತ್ತಿದ್ದರು ಎಂದು ತಿಳಿಸಿದರು. ಡಾ.ಡಿ.ಟಿ.ಸತ್ಯನಾರಾಯಣರಾವ್, ಕಸಾಪ ತಾಲೂಕು ಅಧ್ಯಕ್ಷ ವಿ.ಕೃಷ್ಣ ದಿವಂಗತ ಬಿ.ಕೆ.ಚಂಗಲರಾವ್ ಅವರೊಂದಿಗಿನ ತಮ್ಮ ಒಡನಾಟವನ್ನು ನೆನಪಿಸಿಕೊಂಡರು. ಬಿ.ಆರ್.ಅನಂತಕೃಷ್ಣ, ಅನಂತ, ಶ್ಯಾಮಸುಂದರ್, ಪಿ.ಶ್ರೀಕಾಂತ್, ಎನ್.ಶ್ರೀಕಾಂತ್, ವೆಂಕಟಾಚಲಪತಿರಾವ್, ಡಿ.ವಿ.ಭಾಸ್ಕರ್, ಕೆ.ವಿಶ್ರೀನಿವಾಸಯ್ಯ, ಶ್ರೀಪತಿ, ಗೋಪಾಲಕೃಷ್ಣ, ನಟರಾಜ್, ಸತ್ಯನಾರಾಯಣರಾವ್, ಶಶಿಕಾಂತ, ಸಂದೀಪ್, ಮುರಳೀಧರ, ಶಂಕರ್, ಲಕ್ಷ್ಮಣರಾವ್ ಸೇರಿ ಅನೇಕರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.