ಗಡಿದಂ ಲಕ್ಷ್ಮೀವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವ
ಬಾಗೇಪಲ್ಲಿ: ತಾಲೂಕಿನ ಐತಿಹಾಸಿಕ ಪ್ರಸಿದ್ಧ ದೇವರಗುಡಿಪಲ್ಲಿ(ಗಡಿದಂ) ಶ್ರೀ ಲಕ್ಷ್ಮೀವೆಂಕಟರಮಣ ಸ್ವಾಮಿಯ ಬ್ರಹ್ಮರಥೋತ್ಸವ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.
ಪಟ್ಟಣದ ಹೊರವಲಯದಲ್ಲಿರುವ ಐತಿಹಾಸಿಕ ದೇವರಗುಡಿಪಲ್ಲಿ(ಗಡಿದಂ) ಶ್ರೀ ಲಕ್ಷ್ಮೀವೆಂಕಟರಮಣಸ್ವಾಮಿ ದೇವಾಲಯದಲ್ಲಿ ಅಂಕುರಾರ್ಪಣ, ಧ್ವಜಾರೋಹಣ, ಗರುಡ ವಾಹನೋತ್ಸವ, ಹನುಮಂತ ವಾಹನೋತ್ಸವ, ಸಿಂಹ, ಶೇಷ ವಾಹನೋತ್ಸವ, ದೀಪೋತ್ಸವ, ಪಲ್ಲಕ್ಕಿ ಉತ್ಸವ ಸೇರಿದಂತೆ ವಿವಿಧ ಪೂಜಾ ವಿಧಿವಿಧಾನಗಳು ದೇವಾಲಯದ ಪ್ರಧಾನ ಅರ್ಚಕ ಕೆ. ಪ್ರಕಾಶ್ ರಾವ್ ನೇತೃತ್ವದಲ್ಲಿ ನಡೆಯಿತು.
ಬ್ರಹ್ಮರಥೋತ್ಸವದ ಅಂಗವಾಗಿ ಶ್ರೀ ಲಕ್ಷ್ಮೀವೆಂಕಟರಮಣಸ್ವಾಮಿ ದೇವಾಲಯದಲ್ಲಿ ದೇವರಿಗೆ ವಿಶೇಷ ಪೂಜೆ, ಅಲಂಕಾರ, ದೀಪಾಲಂಕಾರ ಹಮ್ಮಿಕೊಳ್ಳಲಾಗಿತ್ತು. ಬೆಳಿಗ್ಗೆಯಿಂದಲೇ ಭಕ್ತರು ಸರತಿಯಲ್ಲಿ ನಿಂತು ದೇವರ ದರ್ಶನ ಮಾಡಿದರು. ವಿವಿಧ ಗ್ರಾಮಗಳಿಂದ ಜನ ಬಂದು ಪಾನಕ, ಕುಡಿಯುವ ನೀರನ್ನು ನೀಡಿದರು. ಪಟ್ಟಣದ ಮುಖ್ಯರಸ್ತೆಯ ಉರ್ದು ಶಾಲೆಯ ಬಳಿ ಇರುವ ಗುರು ಎಲೆಕ್ಟ್ರಿಕಲ್ಸ್ ಮಾಲೀಕ ಚಂದ್ರಪ್ಪ ನೇತೃತ್ವದಲ್ಲಿ ಕೆಲ ಅಂಗಡಿ ಮಾಲೀಕರು ಅನ್ನದಾನ ಮಾಡಿದರು.
ಬ್ರಹ್ಮರಥೊತ್ಸವ ಕಾರ್ಯಕ್ರಮಕ್ಕೆ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ, ತಹಶೀಲ್ದಾರ್ ಎಂ.ಎ. ಪದ್ಮ ಚಾಲನೆ ನೀಡಿದರು.
ಕಾರ್ಯಕ್ರಮ ಸಂದರ್ಭದಲ್ಲಿ ನಡೆದ ದನಗಳ ಜಾತ್ರೆಯಲ್ಲಿ ನಾಟಿಹಸು, ಸೀಮೆಹಸು ಸೇರಿದಂತೆ ವಿವಿಧ ತಳಿಗಳ ಮಾರಾಟ ಮತ್ತು ಕೊಂಡುಕೊಳ್ಳುತ್ತಿದ್ದುದು ಕಂಡು ಬಂತು. ಬಾಗೇಪಲ್ಲಿ ದೇವರಗುಡಿಪಲ್ಲಿ(ಗಡಿದಂ)ಶ್ರೀಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಹಾಗೂ ಭಾರಿ ದನಗಳ ಜಾತ್ರೆಯಲ್ಲಿ ಹಸು ಕೊಳ್ಳಲು ಮತ್ತು ಮಾರಲು ಬಂದಿದ್ದವರಿಗೆ ಜೇಬುಗಳ್ಳರು ತಮ್ಮ ಕೈ ಚಳಕ ತೋರಿಸಿದರು.
ಆಂಧ್ರಪ್ರದೇಶದ ಗೋರಂಟ್ಲದ ನಾಗೇಶ್ವರ ಎಂಬ ರೈತನ 12 ಸಾವಿರ, ಬಾಗೇಪಲ್ಲಿ ತಾಲೂಕಿನ ಮುದ್ದಲಪಲ್ಲಿ ಗ್ರಾಮದ ಚಿನ್ನೀರಪ್ಪ ಎಂಬ ರೈತನ 6,500 ರು. ಗಳನ್ನು ಜೇಬುಗಳ್ಳರು ಕಳವು ಮಾಡಿದ್ದಾರೆ. ಎಚ್ಚೆತ್ತುಕೊಂಡ ರೈತರು ಕೂಡಲೇ ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದಾರೆ. ತಕ್ಷಣ ಕಾರ್ಯ ಪ್ರವೃತ್ತರಾದ ಪೊಲೀಸರು ಒಬ್ಬ ಜೇಬುಗಳ್ಳನ್ನು ಹಿಡಿದು ವಶಕ್ಕೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

