ಕೋಲಾರ

ಭಾರತ ಸೇವಾ ದಳದ ಕಾರ್ಯಾಧ್ಯಕ್ಷರಾಗಿ ಗಣೇಶ್

Published On :

ಕೋಲಾರ: ಭಾರತ ಸೇವಾ ದಳದ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಪ್ರಮಾಣಿಕವಾಗಿ ಕರ್ತವ್ಯ ನಿರ್ವಹಿಸುವುದಾಗಿ ನೂತನ ಕಾರ್ಯಾಧ್ಯಕ್ಷ ಕೆ.ಎಸ್. ಗಣೇಶ್ ತಿಳಿಸಿದರು.
ಸಂಸ್ಥೆಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಗಣೇಶ್ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದ ಸಂದರ್ಭದಲ್ಲಿ ಅವರು ಮಾತನಾಡಿ, ಭಾರತ ಸೇವಾ ದಳದ ಎಲ್ಲಾ ಚಟುವಟಿಕೆಗಳನ್ನು ಕಾರ್ಯರೂಪಕ್ಕೆ ತರಲು ಸಮಿತಿಯ ಎಲ್ಲಾ ಪದಾಧಿಕಾರಿಗಳ ಹಾಗೂ ಸದಸ್ಯರ ಸಹಕಾರ ಅತಿ ಮುಖ್ಯವೆಂದರು.
ಸಂಸ್ಥೆಯ ಜಿಲ್ಲಾಧ್ಯಕ್ಷ ಬಿ.ಎಂ. ಮುಬಾರಕ್ ಮಾತನಾಡಿ, ಜಿಲ್ಲೆಯಲ್ಲಿ ಸೇವಾದಳ ಚಟುವಟಿಕೆಗಳು ಹೆಚ್ಚಿನ ರೀತಿಯಲ್ಲಿ ಸುಸೂತ್ರವಾಗಿ ನಡೆಯಲು, ಒಬ್ಬ ಕಾರ್ಯಾಧ್ಯಕ್ಷ ಅವಶ್ಯಕತೆ ಇದೆ ಎಂದು ಪ್ರಸ್ತಾವನೆ ಇಟ್ಟಾಗ. ಜಿಲ್ಲಾ ಸಮಿತಿ ಸದಸ್ಯ ಕೆ.ಎಸ್. ಗಣೇಶ್ ಅವರನ್ನು ಈ ಹುದ್ದೆಗೆ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಜಿಲ್ಲಾ ಸಮಿತಿ ಸದಸ್ಯ ವೈ. ಶಿವಕುಮಾರ್ ಅವರನ್ನು ಜಿಲ್ಲಾ ಉಪಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಕೇಂದ್ರ ಸಮಿತಿ ಸದಸ್ಯ ಬಿ.ಕೆ. ವೆಂಕಟನಾರಾಯಣ್. ಜಿಲ್ಲಾ ಸಮಿತಿ ಸದಸ್ಯ ಪಲ್ಲವಿ ಮಣಿ, ಜಿಲ್ಲಾ ಕಾರ್ಯದರ್ಶಿ ವಿ.ಪಿ. ಸೋಮಶೇಖರ್, ಕೋಶಾಧ್ಯಕ್ಷ ಎಸ್. ಸುಧಾಕರ್, ಸಂಘಟನಾ ಕಾರ್ಯದರ್ಶಿ ಡಿ. ವೆಂಕಟೇಶ್, ಸಂಚಾಲಕ ಆರ್. ರವಿಕುಮಾರ್, ಬಹದ್ದೂರ್ ಸಾಬ್, ಎಂ. ನಾಗರಾಜ್, ಕಾರ್ಯದರ್ಶಿ ಎಲ್. ಶ್ರೀನಿವಾಸ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.