ಸಿದ್ಧತೆ ಪರಿಶೀಲನೆ
ಕೋಲಾರ: ಕೋಲಾರ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ನಡೆಯುವ ನಗರದ ಸರ್ಕಾರಿ ಬಾಲಕರ ಕಾಲೇಜಿಗೆ ಜಿಲ್ಲಾ ಚುನಾವಣಾಧಿಕಾರಿ ಡಿ.ಕೆ. ರವಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಎಂಟು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಚಲಾವಣೆಗೊಂಡಿರುವ 11,25,529 ಮತಗಳ ಎಣಿಕೆಗೆ 14 ಕೊಠಡಿಗಳಲ್ಲಿ 112 ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದೆ.
10 ಸಹಾಯಕ ಮತ ಎಣಿಕೆ ಅಧಿಕಾರಿಗಳು ಸೇರಿ 419 ಮಂದಿ ಕೆಲಸ ನಿರ್ವಹಿಸಲಿದ್ದಾರೆಂದು ಜಿಲ್ಲಾಧಿಕಾರಿಯೂ ಆಗಿರುವ ಜಿಲ್ಲಾ ಚುನಾವಣಾಧಿಕಾರಿ ಡಿ.ಕೆ. ರವಿ ತಿಳಿಸಿದರು. ಮತ ಎಣಿಕೆ ಕೇಂದ್ರಕ್ಕೆ ಯಾವುದೇ ಕಾರಣಕ್ಕೂ ಮೊಬೈಲ್ ಕೊಂಡೊಯ್ಯುವಂತಿಲ್ಲ, ಸಿಸಿಟಿವಿ ಅಳವಡಿಸಲಾಗಿತ್ತದೆ, ಶಾಂತಿಯುತ ಮತ ಎಣಿಕೆ ಕಾರ್ಯಕ್ಕೆ ಯಾರಾದರೂ ಅಡ್ಡಿಪಡಿಸಿದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರಂಗಾರೆಡ್ಡಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

