ಬಂಗಾರಪೇಟೆಯಲ್ಲಿ ಸಂಭ್ರಮ
ಬಂಗಾರಪೇಟೆ: ಲೋಕಸಭೆ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಕೆ.ಎಚ್.ಮುನಿಯ ಗೆಲ್ಲುತ್ತಿದ್ದಂತೆ ಬಂಗಾಪೇಟೆ ಪಟ್ಟಣದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಪಟ್ಟಣದ ಕುವೆಂಪು ವೃತ್ತದಲ್ಲಿ ಸೇರಿದ ನೂರಾರು ಕಾರ್ಯಕರ್ತರು, ಸಿಹಿ ಹಂಚಿದರು. ಬಳಿಕ ಮಾತನಾಡಿದ ಶಾಸಕ ಎಸ್.ಎನ್.ನಾರಾಯಣಸ್ವಾಮಿ, 'ದೇಶದಲ್ಲಿ ನರೇಂದ್ರ ಮೋದಿ ಅಲೆ ಕೆಲಸ ಮಾಡಿದ್ದರೂ ಕೋಲಾರದಲ್ಲಿ ಮಾತ್ರ ಮೋದಿ ಅಲೆ ಇಲ್ಲ ಎಂಬುದು ಸಾಬೀತಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ 7ನೇ ಬಾರಿ ಸತತವಾಗಿ ಜಯಗಳಿಸಲು ಕಾರಣ ಅವರು ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ಧಿ. ಜನರ ತೀರ್ಪುನಿಂದ ಜಿಲ್ಲೆ ಮತ್ತಷ್ಟು ಅಭಿವೃದ್ಧಿಗೆ ಶಕ್ತಿ ನೀಡಿದಂತಿದೆ' ಎಂದು ಹೇಳಿದರು.
ಕಾಂಗ್ರೆಸ್ ಶಾಸಕರಿರುವ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ 4 ಸಾವಿರ ಮತಗಳ ಅಂತರ ಪಡೆದಿರುವುದಕ್ಕೆ ಮೋದಿ ಅಲೆ ಕಾರಣವಲ್ಲ. ಬಿಜೆಪಿ ಅಭ್ಯರ್ಥಿ ಎಂ.ನಾರಾಯಣಸ್ವಾಮಿ ಸ್ಥಳೀಯರಾಗಿರುವುದರಿಂದ ಅನುಕಂಪದ ಮೇಲೆ ಅಲ್ಪಮತಗಳ ಅಂತರ ದೊರಕಿವೆ. ವಿನಾ ಇದು ಯಾವುದೇ ಮುಂದಿನ ಚುನಾವಣೆ ಮೇಲೆ ಪರಿಣಾಮ ಬೀರುವುದಿಲ್ಲ. ಯಾರೂ ಈ ಬಗ್ಗೆ ಮೀಸೆ ತಿರುವ ಅಗತ್ಯವಿಲ್ಲ ಎಂದು ಹೆಸರು ಹೇಳದೆ ಮಾಜಿ ಶಾಸಕರೊಬ್ಬರನ್ನು ಟೀಕಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಕಳಪೆ ಸಾಧನೆಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಕುರ್ಚಿಗೆ ಯಾವುದೇ ಕಂಟಕವಿಲ್ಲ. ಮುಂದಿನ 4ವರ್ಷ ಅವರೇ ಮುಖ್ಯಮಂತ್ರಿಗಳಾಗಿರುತ್ತಾರೆ ಎಂದು ತಿಳಿಸಿದರು.
ಈ ವೇಳೆ ಪುರಸಭೆ ಅಧ್ಯಕ್ಷರಾದ ಗಂಗಮ್ಮ, ಕೆ.ಚಂದ್ರಾರೆಡ್ಡಿ, ಭಾಗ್ಯಮ್ಮ, ಶಂಷುದ್ದಿನ್ಬಾಬು, ಉಪಾಧ್ಯಕ್ಷ ರಮೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಾರ್ಥಸಾರಥಿ, ಮಂಜುನಾಥಗೌಡ, ದೇಶಿಹಳ್ಳಿ ವೆಂಕಟರಾಮ್, ನರಸಪ್ಪ, ನಂಜಪ್ಪ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

