ಕೋಲಾರ

ಅದ್ಧೂರಿ ದ್ರೌಪದಮ್ಮ ಹೂವಿನ ಕರಗ ಮಹೋತ್ಸವ

Published On :

ಬಂಗಾರಪೇಟೆ: ಪಟ್ಟಣದ ಪುರಾಣ ಪ್ರಸಿದ್ಧ ಧರ್ಮರಾಯಸ್ವಾಮಿ ದ್ರೌಪದಮ್ಮ ಹೂವಿನ ಕರಗ ಗುರುವಾರ ರಾತ್ರಿ ವಿಜೃಂಭಣೆಯಿಂದ ಸಾವಿರಾರು ಭಕ್ತಾಧಿಗಳ ಸಮ್ಮುಖದಲ್ಲಿ ನಡೆಯಿತು. ಕೃಷ್ಣಮೂರ್ತಿ ಅವರು ಕರಗ ಹೊತ್ತಿದ್ದರು. ಕರಗ ದೇವಾಲಯದಿಂದ ಹೊರ ಬರುತ್ತಿದ್ದಂತೆ, ನೆರೆದಿದ್ದ ಭಕ್ತಾಧಿಗಳು ಪುಳಿಕಿತರಾಗಿ ಗೋವಿಂದಾ ಗೋವಿಂದಾ ಎಂದು ಘೋಷಣೆ ಕೂಗಿ ಸ್ವಾಗತಿಸಿದರು. ನಂತರ ದೇವಾಲಯ ಪಕ್ಕದಲ್ಲೇ ನಿರ್ಮಿಸಿದ್ದ ವಿಶೇಷ ವೇದಿಕೆ ಮೇಲೆ ಕರಗ ಅರ್ಧಗಂಟೆ ಕಾಲ ವಿವಿಧ ಭಂಗಿಗಳಲ್ಲಿ ತಮಟೆಗಳ ತಾಳಕ್ಕೆ ತಕ್ಕಂತೆ ನರ್ತಿಸಿ, ಭಕ್ತಾಧಿಗಳನ್ನು ರಂಜಿಸಿತು.  ಕರಗ ವೀಕ್ಷಣೆಗೆ ಪಕ್ಕದ ಆಂಧ್ರ, ತಮಿಳುನಾಡಿನಿಂದಲೂ ಅಪಾರ ಸಂಖ್ಯೆಲ್ಲಿ ಭಕ್ತರು ಆಗಮಿಸಿದ್ದರು. ಪಟ್ಟಣದ ಎಲ್ಲಾ ದೇಗುಲಗಳಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು. ಗುರುವಾರ ರಾತ್ರಿ ಹತ್ತಕ್ಕೂ ಹೆಚ್ಚಿನ ದೇವಲ ಪಲ್ಲಕಿ ಉತ್ಸವ ನಡೆಯಿತು. ಶುಕ್ರವಾರ ಪಟ್ಟಣದ ಎಲ್ಲ ಬಡಾವಣೆಗಳಲ್ಲಿ ಕರಗ ಸಾಗಿ ಜನರ ಮನ ಸೂರೆಗೊಂಡಿತು. ಸಂಜೆ ಅಗ್ನಿಕುಂಡ ಪ್ರವೇಶ ಮಾಡಿತು. ಶನಿವಾರ ವಸಂತೋತ್ಸವ ನಡೆದು, ಕರಗ ಉತ್ಸವಕ್ಕೆ ತೆರೆ ಬೀಳಲಿದೆ. ಈ ವೇಳೆ, ಶಾಸಕ ಎಸ್.ಎನ್.ನಾರಾಯಣಸ್ವಾಮಿ, ಪುರಸಭೆ ಅಧ್ಯಕ್ಷ ಗಂಗಮ್ಮ, ಕನ್ನಡ ಸಂಘದ ಅಧ್ಯಕ್ಷ ಪಲ್ಲವಿಮಣಿ, ತಹಸೀಲ್ದಾರ್ ಉಷಾ, ಕೆ.ಚಂದ್ರಾರೆಡ್ಡಿ ಸೇರಿ ಅನೇಕರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.