ಕೋಲಾರ

ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಬೋಧನಾ ತರಬೇತಿ

Published On :

ಚಿಂತಾಮಣಿ: ತಾಲೂಕು ಕನ್ನಡ ಸಾಹಿತ್ಯ ವೇದಿಕೆ, ಚುಟುಕು ಸಾಹಿತ್ಯ ಪರಿಷತ್ತು ಹಾಗೂ ಸಿರಿಗನ್ನಡ ವೇದಿಕೆಯ ಸಂಯುಕ್ತಾಶ್ರಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ತಾಲೂಕಿನ ವಿದ್ಯಾರ್ಥಿಗಳಿಗೆ ಉಚಿತ ಬೋಧನಾ ತರಗತಿಗಳನ್ನು ನಗರದ ಮಹಾತ್ಮ ಗಾಂಧಿ ಬಾಲಕರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮೇ 23ರಿಂದ ಆರಂಭಿಸಲಾಗುವುದು ಎಂದು ಚುಸಾಪ ಪ್ರಧಾನ ಸಂಚಾಲಕ ಎಸ್.ಸಿ.ಶ್ರೀನಿವಾಸರೆಡ್ಡಿ ಅವರು ತಿಳಿಸಿದ್ದಾರೆ.  
ಆಸಕ್ತ ವಿದ್ಯಾರ್ಥಿಗಳು ಮೇ 23 ರಂದು ಬೆಳಿಗ್ಗೆ 10 ಗಂಟೆಗೆ ಅಂಕಪಟ್ಟಿಯ ಇಂಟರ್‌ನೆಟ್ ಪ್ರತಿಯ ಸಹಿತ ತಮ್ಮ ಪೋಷಕರೊಂದಿಗೆ ಹಾಜರಾಗಿ ಹೆಸರನ್ನು ನೊಂದಾಯಿಸಿಕೊಳ್ಳಬೇಕು. ತರಗತಿಗಳು ಬೆಳಿಗ್ಗೆ 10.30 ರಿಂದ ಸಂಜೆ 4 ಗಂಟೆಯವರೆಗೂ ನಡೆಯಲಿದ್ದು, ನುರಿತ ಹಾಗೂ ಅನುಭವಿ ಶಿಕ್ಷಕರು ಬೋಧಿಸಲಿದ್ದು, ಅನುತ್ತೀರ್ಣ ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಂಡು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಹೇಳಿದರು. ಹೆಚ್ಚಿನ ಮಾಹಿತಿಗೆ 9449378416,8553932228 ಗೆ ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.