ಕೋಲಾರ

ಬೆಂಕಿ ಆಕಸ್ಮಿಕ: ಕೃಷಿ ಉಪಕರಣಗಳು ಭಸ್ಮ

Published On :

ತುರುವೇಕೆರೆ: ವಾಸದ ಮನೆ ಹಾಗೂ ಪಕ್ಕದಲ್ಲೇ ಇದ್ದ ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಕೃಷಿ ಉಪಕರಣಗಳು, ಎತ್ತಿನ  ಟೈರ್ ಗಾಡಿ ಸಂಪೂರ್ಣವಾಗಿ ಭಸ್ಮವಾದರೆ  ಒಂದು ಜೊತೆ ಎತ್ತು ಬೆಂಕಿಗೆ ಸಿಲುಕಿ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಹಿಂಡುಮಾರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹಿಂಡುಮಾರನಹಳ್ಳಿಯ ಹೆಚ್.ಎಲ್.ರಂಗಪ್ಪ  ಎಂಬುವವರಿಗೆ ಸೇರಿದ ಮನೆ ಹಾಗೂ ಗುಡಿಸಲಿಗೆ ಇದ್ದಕ್ಕಿದ್ದಂತೆ ಬೆಂಕಿ ಹತ್ತಿಕೊಂಡಿತು. ಗ್ರಾಮಸ್ಥರು ಧಾವಿಸಿ ಬಂದು ಬೆಂಕಿ ನಂದಿಸಲು ಪ್ರಯತ್ನಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಕೂಡಲೇ ತುರುವೇಕೆರೆಯ ಅಗ್ನಿಶಾಮಕದಳ ಸ್ಥಳಕ್ಕೆ ಆಗಮಿಸಿ ಮುಂದಾಗಬಹುದಾದ ಅನಾಹುತವನ್ನು ತಪ್ಪಿಸಿತು. ಘಟನೆಯಲ್ಲಿ ಕೃಷಿ ಉಪಕರಣಗಳು, ದಿನಸಿ ಪದಾರ್ಥಗಳು, ಮಂಚ, ಎತ್ತಿನ ಟೈರ್ ಗಾಡಿ, 25 ಚೀಲ ಬತ್ತ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಕೊಟ್ಟಿಗೆಯಲ್ಲಿ ಕಟ್ಟಿ ಹಾಕಲಾಗಿದ್ದ ಒಂದು ಜೊತೆ ಎತ್ತಿಗೆ ಬೆಂಕಿ ತಗುಲಿದ ಪರಿಣಾಮ ತೀವ್ರವಾಗಿ ಗಾಯಗೊಂಡು ಪ್ರಾಣಾಪಾಯದ ಭೀತಿಯಲ್ಲಿದೆ. ಸುಮಾರು ಒಂದೂವರೆ ಲಕ್ಷ ರು.ಗಳ ನಷ್ಟ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.