ಮಕ್ಕಳಿಗೆ ಬೇಸಿಗೆ ಶಿಬಿರಗಳಿಂದ ಉಪಯೋಗ
ಕೋಲಾರ: ಬೇಸಿಗೆ ಶಿಬಿರಗಳಲ್ಲಿ ಮಕ್ಕಳು ಪಾಲ್ಗೊಳ್ಳುವುದರಿಂದ ಮಕ್ಕಳಲ್ಲಿ ವ್ಯಕ್ತಿತ್ವ ವಿಕಸನಗೊಳ್ಳುವುದರ ಜೊತೆಗೆ ಕಲಿಕೆಗೆ ಸಹಕಾರಿಯಾಗುತ್ತದೆ ಎಂದು ಗಾನಸುಧಾ ಸಾಂಸ್ಕೃತಿಕ ಕಲಾ ಸಂಸ್ಥೆಯ ಅಧ್ಯಕ್ಷ ಕೆ.ಗೌತಮ್ ಹೇಳಿದರು. ಮಾಲೂರು ತಾಲೂಕಿನ ಜಯಮಂಗಲ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಬೇಸಿಗೆ ಶಿಬಿರದಲ್ಲಿ ಆಯೋಜಿಸಿಲಾಗಿದ್ದ ಉಪನ್ಯಾಸ ನೀಡಿ, ಈ ಹಿಂದೆ ಬೇಸಿಗೆ ಶಿಬಿರಗಳು ಎಂದರೆ ಏನೋ ಅಂತ ಆಶ್ಚರ್ಯಕರವಾಗಿ ನೋಡುತ್ತಿದ್ದವರು ಈಗ ಮಕ್ಕಳನ್ನು ಬೇಸಿಗೆ ಶಿಬಿರಗಳಿಗೆ ಕಳುಹಿಸುತ್ತಿದ್ದಾರೆ ಎಂದರು. ಕಾರ್ಯಕ್ರಮ ಉದ್ಘಾಟಸಿ ಮಾತನಾಡಿದ ಗ್ರಾಪಂ ಕಾರ್ಯದರ್ಶಿ ರಮೇಶ್, 'ಸಂಗೀತಕ್ಕೆ ತನ್ನದೇ ಆದ ಮಹತ್ವವಿದೆ. ಸಂಗೀತಕ್ಕೆ ಜಾತಿ, ಮತ ಬೇಧವಿಲ್ಲದೆ ಎಲ್ಲರನ್ನೂ ಒಂದೆಡೆ ಸೇರಿಸುವ ಮಹತ್ತರವಾದ ಶಕ್ತಿಯಿದೆಟ ಎಂದರು. ಶಿಬಿರದಲ್ಲಿ ಆದಿಮ ಹರೀಶ್ ಕುಮಾರ್ ಅವರು ಮಕ್ಕಳಿಗೆ ಜಾನಪದ ಕಲೆಗಳ ಬಗ್ಗೆ ಅರಿವು ಮೂಡಿಸಿದರು. ಮುಖ್ಯೋಪಾಧ್ಯಾಯ ಸಿದ್ದಪ್ಪ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಬಾಬು, ಎಸ್.ಆನಂದ್, ಸುನೀಲ್, ಕುಮಾರ್, ಅಂಬೇಡ್ಕರ್ ಯುವಕ ಸಂಘದ ಪದಾಧಿಕಾರಿಗಳು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

