ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕ್ರಿಯಾ ಯೋಜನೆ
ಗುಬ್ಬಿ: ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಜೊತೆಗೆ ಜಿಲ್ಲೆಯಲ್ಲಿ ನೆನೆಗುದಿಗೆ ಬಿದ್ದಿರುವ ಅಗತ್ಯ ಮೂಲಭೂತ ಸಮಸ್ಯೆಗಳ ಸುಧಾರಣೆಗೆ 5 ವರ್ಷಗಳ ಕ್ರಿಯಾ ಯೋಜನೆ ರೂಪಿಸಿ ಆ ಮೂಲಕ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ನೂತನ ಸಂಸದ ಮುದ್ದಹನುಮೇಗೌಡ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜನಸಾಮಾನ್ಯರ ಅಗತ್ಯ ಮೂಲಭೂತ ಸಮಸ್ಯೆಗಳನ್ನು ಖುದ್ದಾಗಿ ಅವಲೋಕಿಸಲು ಜಿಲ್ಲೆ ಪ್ರತಿಗ್ರಾಮ ಪಂಚಾಯ್ತಿಗಳಿಗೆ ಭೇಟಿ ನೀಡಿ ಅತ್ಯಗತ್ಯವಾದ ಕುಡಿಯುವ ನೀರು, ಗ್ರಾಮೀಣ ರಸ್ತೆ, ವಸತಿ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅನುದಾನವನ್ನು ಬಳಸಿಕೊಳ್ಳುವುದಾಗಿ ತಿಳಿಸಿದರು.
ಗುಬ್ಬಿ ತಾಲೂಕಿನಲ್ಲಿ ನೆನೆಗುದಿಗೆ ಬಿದ್ದಿರುವ ಶಾಶ್ವತ ಕುಡಿಯುವ ನೀರು ಮತ್ತು ನೀರಾವರಿ ಯೋಜನೆಗಳಿಗೆ ಪ್ರಥಮ ಆದ್ಯತೆ ನೀಡುವುದಾಗಿ ತಿಳಿಸಿದ ಅವರು ಹೇಮಾವತಿ ನೀರನ್ನು ತಾಲೂಕಿನ ಎಲ್ಲಾ ಕೆರೆಗಳಿಗೂ ಸಮರ್ಪಕವಾಗಿ ಹರಿಸುವುದರ ಜೊತೆಗೆ ತೆಂಗು ಮತ್ತು ಅಡಕೆ ಉತ್ಪನ್ನಗಳಿಗೆ ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಿ ಘೋರಕ್ ಸಮಿತಿಯ ವರದಿಯನ್ನು ಅನುಷ್ಠಾನಗೊಳಿಸಿ ಬೆಂಬಲ ಬೆಲೆ ನಿಗದಿಗೊಳಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಪ್ರಥಮ ಆದ್ಯತೆ: ಮುಂಬರುವ ದಿನಗಳಲ್ಲಿ ಜಿಲ್ಲೆಯಾದ್ಯಂತ ಪ್ರವಾಸ ಕೈಗೊಂಡು ಸ್ಥಳೀಯ ಸಮಸ್ಯೆಗಳಿಗೆ ಪ್ರಥಮ ಆದ್ಯತೆ ನೀಡುವುದರ ಜೊತೆಗೆ ಅಗತ್ಯ ಮೂಲಭೂತ ಸಮಸ್ಯೆಗಳನ್ನು ತ್ವರಿತವಾಗಿ ಬಗೆ ಹರಿಸಲು ತುರ್ತುಕ್ರಮಗಳನ್ನು ಕೈಗೊಳ್ಳಲಾಗುವುದು. ಗ್ರಾಮೀಣ ಜನರಿಗೆ ಸರ್ಕಾರದಿಂದ ದೊರೆಯಬೇಕಾದ ಸವಲತ್ತುಗಳನ್ನು ನಿಯಮಾನುಸಾರ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದ ಅವರು ರಾಜ್ಯ ಸರ್ಕಾರ ಹಲವಾರು ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿದ್ದು ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳು ಪ್ರಸಕ್ತ ಚುನಾವಣೆಯಲ್ಲಿ ಹೆಚ್ಚು ಸಹಕಾರಿಯಾದವೆಂದು ತಿಳಿಸಿದರು.
ಸಹಕರಿಸಿದ್ದಾರೆ: ಜಿಲ್ಲೆಯ ಜನತೆ ಈ ಬಾರಿ ಬದಲಾವಣೆ ಬಯಸಿದ್ದರಿಂದಾಗಿ ಅತ್ಯಧಿಕ ಮತಗಳ ಅಂತರದಿಂದ ನನ್ನನ್ನು ಗೆಲ್ಲಿಸಲು ಸಹಕಾರ ನೀಡಿದ್ದಾರೆ. ಅವರ ತಿರ್ಪಿನಂತೆ ಮುಂಬರುವ ದಿನಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಅತಿ ಹೆಚ್ಚಿನ ಅನುದಾನ ತಂದು ಜಿಲ್ಲೆಯನ್ನು ಮತ್ತಷ್ಟು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವುದಾಗಿ ಭರವಸೆ ನೀಡಿದ ಅವರು ನನ್ನ ಗೆಲವಿಗೆ ಸಂಪೂರ್ಣ ಸಹಕಾರ ನೀಡಿದ ಜಿಲ್ಲೆಯ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಸಮಸ್ತ ಮತದಾರರನ್ನು ತುಂಬು ಹೃದಯದಿಂದ ಅಭಿನಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

