ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ
ಟೇಕಲ್: ಟೇಕಲ್ನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಹಳೆಯ ವಿದ್ಯಾರ್ಥಿಗಳು ಸೇರಿದ್ದರು.
2007-08ನೇ ಸಾಲಿನ ಎಸ್ಎಸ್ಎಲ್ಸಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು ಈ ಕಾರ್ಯಕ್ರಮ ಆಯೋಜಿಸಿದ್ದರು. ಕಾರ್ಯಕ್ರಮದಲ್ಲಿ ತಮ್ಮ ಸಹಪಾಠಿಗಳನ್ನು ಭೇಟಿಯಾಗಿ ಕುಶಲೋಪರಿ ವಿಚಾರಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಪ್ರಶಸ್ತಿ ವಿಜೇತೆ ಶಿಕ್ಷಕಿ ಡಿ.ಎಸ್.ರತ್ನಮ್ಮ ಮಾತನಾಡಿ, 'ಜೀವನದಲ್ಲಿ ಮುನ್ನುಗ್ಗುವ ಛಲವನ್ನು ಅಳವಡಿಸಿಕೊಂಡು, ಉತ್ತಮ ಗುಣಮಟ್ಟದಿಂದ ನಾನು ಈ ಮಟ್ಟಕ್ಕೆ ಬಂದೆ' ಎಂದರು.
ನಮ್ಮ ವಿದ್ಯಾರ್ಥಿಗಳು ಇಂಥ ಕಾರ್ಯಕ್ರಮದಿಂದ ಹಳೆಯ ನೆನಪುಗಳನ್ನು ಮತ್ತೆ ಮರುಕಳುಹಿಸುವಂತೆ ಮಾಡಿದಂತಾಗಿದೆ ಎಂದರು. ಇದೇ ಸಂದರ್ಭದಲ್ಲಿ ಹಳೆಯ ವಿದ್ಯಾರ್ಥಿಗಳಲ್ಲಿ ಒಬ್ಬನಾದ ಮಂಜುನಾಥ ಮಾತನಾಡಿ, ನಾವು ಆಟವಾಡಿದ ಜಾಗ, ಓದಿದ ಸ್ಥಳ, ವಿದ್ಯೆ ಕಲಿಸಿದ ಗುರುವನ್ನು ಮರೆಯಲು ಸಾಧ್ಯವೆ ಇಲ್ಲ. ಯಾವಾಗಲಾದರೂ ಇಂತಹ ಕಾರ್ಯಕ್ರಮ ಆಯೋಜನೆ ನಡೆಸಿದಾಗ ನಮ್ಮ ಗುರುಗಳು ನಮ್ಮ ಶಾಲೆಯನ್ನು ನೋಡುವ ಭಾಗ್ಯ ಸಿಗುವಂತಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಈ ಕಾರ್ಯಕ್ರಮದಲ್ಲಿ ಶಿಕ್ಷಕಿ ಎಂ.ಆರ್. ಗಾಯತ್ರಿ, ಮುಖ್ಯಶಿಕ್ಷಕ ಬಿ.ಎಂ.ಚಂದ್ರಪ್ಪ ಮತ್ತು ಹಳೆಯ ವಿದ್ಯಾರ್ಥಿ ವೃಂದ ಭಾಗವಹಿಸಿದ್ದು, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಅವರ ಅಭಿಪ್ರಾಯಗಳನ್ನು ಹಂಚಿಕೆ ಮಾಡಿಕೊಂಡರು.
ಪಾಳುಬಾವಿಯಲ್ಲಿ ಶವ ಪತ್ತೆ
ಶಿಡ್ಲಘಟ್ಟ: ಮನೆಯಿಂದ ಹೊರಗೆ ಹೋಗಿದ್ದ ವ್ಯಕ್ತಿಯೊಬ್ಬನ ಶವ ಪಾಳುಬಾವಿಯಲ್ಲಿ ಪತ್ತೆಯಾಗಿದೆ. ತಾಲೂಕಿನ ತಿಪ್ಪೇನಹಳ್ಳಿ ಗ್ರಾಮದ ತಿಮ್ಮರಾಯಪ್ಪ(55) ಮೃತಪಟ್ಟವರು. ಕಳೆದ ರಾತ್ರಿ ಮನೆಯಿಂದ ಹೊರಗೆ ಹೋದವರು ರಾತ್ರಿ 12 ಘಂಟೆಯಾದರೂ ಮನೆಗೆ ವಾಪಸ್ಸು ಬಾರದ ಕಾರಣ ಕುಟುಂಬದವರು ಹುಡುಕಾಟ ನಡೆಸಿದ್ದು, ಬೆಳಗ್ಗೆ ಪಾಳುಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಿಲಿಂಡರಿಗೆ ಬೆಂಕಿ- ಹಾನಿ
ಶಿಡ್ಲಘಟ್ಟ: ಜೆ.ವೆಂಕಟಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಿತ್ತನಹಳ್ಳಿ ಗ್ರಾಮದ ಮುನಿಕೃಷ್ಣ ಎಂಬುವವರ ಮನೆ ಸಿಲಿಂಡರಿನಲ್ಲಿ ಬೆಂಕಿಹೊತ್ತಿಕೊಂಡ ಪರಿಣಾಮ ಮನೆ ಮೇಲ್ಛಾವಣಿ ಶಿಥಿಲವಾಗಿದ್ದು ಎಲೆಕ್ಟ್ರಾನಿಕ್ ಉಪಕರಣಗಳು ಸುಟ್ಟುಹೋಗಿದೆ. ಶಬ್ದವನ್ನು ಕೇಳಿದ ಕೂಡಲೇ ಧಾವಿಸಿ ಬಂದ ನೆರೆಮನೆಯವರು ಸಿಲಿಂಡರನ್ನು ಹೊರಗೆಸೆದಿದ್ದು ಭಾರಿ ಅನಾಹುತ ತಪ್ಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

