ನಿಗದಿತ ಸಮಯದಲ್ಲಿ ಸಾಲ ಮರುಪಾವತಿಸಿ
ಶಿಡ್ಲಘಟ್ಟ: ಸಹಕಾರಿ ಬ್ಯಾಂಕುಗಳ ಮೂಲಕ ಪಡೆದ ಸಾಲವನ್ನು ನಿಗದಿತ ಸಮಯದಲ್ಲಿ ಮರು ಪಾವತಿ ಮಾಡಿ ಸಹಕಾರಿ ಬ್ಯಾಂಕ್‌ಗಳನ್ನು ಅಭಿವೃದ್ಧಿಪಡಿಸಲು ರೈತರು ಸಹಕರಿಸಬೇಕು ಎಂದು ಜಿಲ್ಲಾ ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದೇಗೌಡ ಹೇಳಿದರು.
ತಾಲೂಕಿನ ಜಂಗಮಕೋಟೆ ಗ್ರಾಮದ ಸಮುದಾಯ ಭವನದಲ್ಲಿ ಸಾಲವಿತರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಹಕಾರ ಸಂಘಗಳು ರೈತರ ಪರವಾಗಿ ಕೆಲಸ ಮಾಡಿದರೆ, ರೈತರು ಪಡೆದುಕೊಂಡ ಸಾಲಗಳನ್ನು ಮರುಪಾವತಿ ಮಾಡಲು ಆಸಕ್ತಿ ತೋರಿಸುತ್ತಿದ್ದರು. ದಿನಕ್ಕೆ ಎರಡು ಬಾರಿ ಬಾಗಿಲು ತೆಗೆದು, ಪಡಿತರ ಧಾನ್ಯಗಳನ್ನು ವಿತರಣೆ ಮಾಡುವುದು ಬಿಟ್ಟರೆ, ರೈತಾಪಿ ವರ್ಗಗಳಿಗೆ ಅನುಕೂಲವಾಗುವಂಥ ಯಾವುದೇ ಕಾರ್ಯಕ್ರಮಗಳನ್ನು ಸಹಕಾರ ಸಂಘಗಳು ಮಾಡುತ್ತಿಲ್ಲ. ಆದ್ದರಿಂದ ಸಾಲ ವಸೂಲಿಯಲ್ಲಿ ಬ್ಯಾಂಕುಗಳು ಹಿಂದುಳಿದಿವೆ ಎಂದರು.
ಡಿಸಿಸಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟೇಶಪ್ಪ ಮಾತನಾಡಿ, ಸಹಕಾರಿ ಬ್ಯಾಂಕುಗಳ ಮುಖಾಂತರ ರೈತರಿಗೆ ಮೂರು ವರ್ಷದವರೆಗೂ ಶೇ.0 ಬಡ್ಡಿ, ಮೂರು ವರ್ಷದಿಂದ ಹತ್ತು ವರ್ಷದ ವರೆಗೂ ಶೇ. 3 ಬಡ್ಡಿ ಧರದಲ್ಲಿ ಸಾಲ ವಿತರಣೆ ಮಾಡಲು ಕ್ರಮ ತೆಗೆದುಕೊಳ್ಳಲಾಗಿದೆ. ರೈತರಿಗೆ ಲಭ್ಯವಿರುವ ಭೂಮಿ, ಅಗತ್ಯಾನುಸಾರ ಸಾಲ ಕೊಡುವಂಥ ವ್ಯವಸ್ಥೆ ಕಲ್ಪಿಸಲಾಗಿದೆ. ಸಾಲದ ಮಿತಿಯನ್ನು 10 ಲಕ್ಷ ರೂ. ವರೆಗೂ ನಿಗದಿಪಡಿಸಲಾಗುತ್ತದೆ ಎಂದರು.
ಹಸುಗಳ ಖರೀದಿ, ಸ್ವಸಹಾಯ ಸಂಘಗಳು, ಬ್ಯಾಂಕುಗಳ ಮುಖಾಂತರ ನಡೆಸುವಂಥ ವ್ಯವಹಾರಕ್ಕನುಗುಣವಾಗಿ ಸಾಲವನ್ನು ಮಂಜೂರು ಮಾಡಲಾಗುತ್ತದೆ. ಜಂಗಮಕೋಟೆಯ ರೇಷ್ಮೆ ಬೆಳಗಾರರ ಹಾಗೂ ರೈತರ ಸೇವಾ ಸಹಕಾರ ಸಂಘವು ಪಡೆದುಕೊಂಡಿದ್ದ ಸುಮಾರು 03 ಕೋಟಿ ರೂಪಾಯಿಗಳ ಸಾಲವನ್ನು ನ ನಿಗದಿತ ಅವಧಿಯಲ್ಲಿ ಶೇ 100 ರಷ್ಟು ಫಾವತಿ ಮಾಡಿದೆ ಎಂದರು. ಕಾರ್ಯಕ್ರಮದಲ್ಲಿ ತಾಲೂಕಿನ ವಿವಿಧ ಗ್ರಾಮಗಳ ರೈತರುಗಳಿಗೆ ಸಾಲದ ಚೆಕ್‌ಗಳನ್ನು ವಿತರಣೆ ಮಾಡಲಾಯಿತು.
ಜಿಲ್ಲಾ ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕರಾದ ಪಿ.ವಿ.ನಾಗರಾಜ್, ಶಿವಾರೆಡ್ಡಿ, ಜಂಗಮಕೋಟೆ ಸಹಕಾರ ಸಂಘದ ಅಧ್ಯಕ್ಷ ಟಿ.ರವಿಕುಮಾರ್, ತಾಲೂಕಿನ ಡಿ.ಸಿ.ಸಿ.ಬ್ಯಾಂಕ್ ವ್ಯವಸ್ಥಾಪಕ ಲಿಂಗರಾಜು ಮುಂತಾದವರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

