ಖಾಸಗಿ ಶಾಲೆಗಳಲ್ಲಿ ದುಬಾರಿ ಶುಲ್ಕ ತಡೆಗೆ ಡಿವೈಎಫ್ಐ ಆಗ್ರಹ
ಶಿಡ್ಲಘಟ್ಟ: ಖಾಸಗಿ ಶಾಲೆಗಳಲ್ಲಿ ವಸೂಲಿ ಮಾಡುತ್ತಿರುವ ದುಬಾರಿ ಶುಲ್ಕವನ್ನು ತಡೆಗಟ್ಟಬೇಕು. ಅವಧಿಗೂ ಮುಂಚೆ ಪ್ರವೇಶ ಮಾಡಿಕೊಳ್ಳುತ್ತಿರುವ ಖಾಸಗಿ ಶಾಲೆಗಳ ಮೇಲೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಡಿವೈಎಫ್ಐ ಕಾರ್ಯಕರ್ತರು ಶಿಕ್ಷಣಾಧಿಕಾರಿಗೆ ಮನವಿ ಸಲ್ಲಿಸಿದರು.
ಕೋಟೆ ವೃತ್ತದಲ್ಲಿರುವ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಮನವಿ ಸಲ್ಲಿಸಿದ ನಂತರ ಮಾತನಾಡಿದ ಡಿವೈಎಫ್ಐ ರಾಜ್ಯ ಮುಖಂಡ ಕುಂದಲಗುಕರ್ ಮುನೀಂದ್ರ, 'ಖಾಸಗಿ ಶಾಲೆಗಳಲ್ಲಿ ಜೂನ್ ಮೊದಲ ವಾರದಲ್ಲಿ ಪ್ರವೇಸ ಆರಂಭವಾಗಬೇಕು. ಆದರೆ, ಮುಂಚಿತವಾಗಿ ಪ್ರವೇಶಗಳನ್ನು ನೀಡಲಾಗುತ್ತಿದ್ದು, ಶಿಕ್ಷಣಾಧಿಕಾರಿಗಳು ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಖಾಸಗಿ ಶಾಲೆಗಳು ಸರ್ಕಾರದ ಆದೇಶವನ್ನು ದಿಕ್ಕರಿಸುತ್ತಿವೆ. ನಿಯಮ ಉಲ್ಲಂಘಿಸುತ್ತಿರುವ ಖಾಸಗಿ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ, ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು. ಮನವಿಯನ್ನು ಸ್ವೀಕರಿಸಿ ಮಾತನಾಡಿದ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ, ಖಾಸಗಿ ಶಾಲೆಗಳಲ್ಲಿ ಪ್ರವೇಶಗಳಾಗುತ್ತಿರುವುದು ನಮ್ಮ ಗಮನಕ್ಕೆ ಬಂದಿಲ್ಲ, ಕೂಡಲೇ ಎಲ್ಲಾ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತೇವೆ ಎಂದು ಹೇಳಿದರು. ಸದಾನಂದ, ಬಾಬು, ವಾಸು, ಅಪ್ಪು, ವೆಂಕಟೇಶ್, ಮನೋಹರ್, ವೆಂಕಟೇಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

