ಕೋಲಾರ

ನರೇಗಾ ಅವ್ಯವಹಾರ: 30 ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ದಾವೆಗೆ ಶಿಫಾರಸು

Published On :

ಕೋಲಾರ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನದಲ್ಲಿ ಅವ್ಯವಹಾರ ನಡೆಸಿದ್ದ 30 ಜನರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ ಎಂದು ಒಂಬುಡ್ಸ್‌ಮನ್ ಕೆ.ಜಿ.ಗೋವಿಂದಪ್ಪ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೋಲಾರ ಜಿಲ್ಲೆಯಲ್ಲಿ 221 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 163 ಪ್ರಕರಣಗಳು ಇತ್ಯರ್ಥವಾಗಿವೆ. ನರೇಗಾ ಅವ್ಯವಹಾರ ಕುರಿತಂತೆ ವಿಚಾರಣೆ ನಡೆಸಿರುವ ನ್ಯಾಯಾಲಯವು 30 ಅಧಿಕಾರಿಗಳು ಮತ್ತು ಚುನಾಯಿತ ಪ್ರತಿನಿಧಿಗಳ ವಿರುದ್ಧ ಕ್ರಿಮಿನಲ್ ದಾವೆ ಹಾಗೂ ಕೆಲವರ ವಿರುದ್ಧ ಇಲಾಖಾ ಕ್ರಮ ಜರುಗಿಸುವಂತೆ ಶಿಫಾರಸು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ತಾವು ಅಧಿಕಾರ ವಹಿಸಿಕೊಂಡ ಬಳಿಕ ಇದುವರೆಗೂ ದುರುಪಯೋಗವಾಗಿದ್ದ 41.38 ಲಕ್ಷ ಸಂಬಂಧಪಟ್ಟವರಿಂದ ವಸೂಲಿ ಮಾಡಲು ಆದೇಶಿಸಲಾಗಿದೆ.
 ಜಿಲ್ಲೆಯಲ್ಲಿ ಒಂಬುಡ್ಸ್‌ಮನ್ ನಿಯೋಜನೆ ನಂತರ ನರೇಗಾ ಯೋಜನೆಯ ಅನುಷ್ಠಾನದಲ್ಲಿ ಅವ್ಯವಹಾರ ಕಡಿಮೆಯ ಜೊತೆಗೆ ಕಾಮಗಾರಿಗಳು ಪರಿಣಾಮಕಾರಿಯಾಗಿ ನಡೆಯುತ್ತಿರುವುದರಿಂದ ಜಿಲ್ಲೆ ನರೇಗಾ ಯೋಜನೆಯಲ್ಲಿ ಈ ಹಿಂದಿಗಿಂತ ಅಗ್ರಸ್ಥಾನದಲ್ಲಿದೆ ಎಂದು ವಿವರಿಸಿದ್ದಾರೆ.  
ಎಲ್ಲಾ ಗ್ರಾಮಗಳಲ್ಲಿ ನರೇಗಾ ಕಾಮಗಾರಿಗಳು ಕಂಡು ಬಂದರೂ ಅವುಗಳ ಗುಣಮಟ್ಟ ಸುಧಾರಿಸಬೇಕಾಗಿದೆ.  ಯಂತ್ರಗಳನ್ನು ಬಳಸಿ ಕಳಪೆ ಕಾಮಗಾರಿಗಳನ್ನು ನಡೆಸುವವರ ವಿರುದ್ಧ ದಿಟ್ಟ ಕ್ರಮ ಕೈಗೊಂಡಲ್ಲಿ ಸರ್ಕಾರಕ್ಕೆ ಮತ್ತು ಮಾನವ ಶಕ್ತಿ ಅಭಿವೃದ್ಧಿಗೆ ಅನುಕೂಲವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಕೋಲಾರ ಜಿಲ್ಲೆಯಲ್ಲಿ ಈವರೆಗೆ 36 ಲಕ್ಷ ಮಾನವ ದಿನಗಳ ಸೃಜನೆಯಾಗಿದೆ. ಅರ್ಧಕ್ಕಿಂತಲೂ ಹೆಚ್ಚು ಮಹಿಳೆಯರಿಗೆ ಉದ್ಯೋಗ ಸಿಕ್ಕಿದ್ದು, ಪ್ರಸಕ್ತ ಸಾಲಿನಲ್ಲಿ ಕೂಲಿ ದರ ದಿನಕ್ಕೆ 174ರಿಂದ 192ಕ್ಕೆ  ಏರಿಕೆಯಾಗಿದೆ. ಇದರ ಜೊತೆಗೆ ಉದ್ಯೋಗದಾರರ ಬ್ಯಾಂಕ್ ಖಾತೆಗಳಿಗೆ ಕೂಲಿ ಹಣ ನೇರವಾಗಿ ವರ್ಗಾವಣೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಅವ್ಯವಹಾರಗಳ ಬಗ್ಗೆ ದೂರುಗಳನ್ನು ಕೆ.ಜಿ.ಗೋವಿಂದಪ್ಪ,  ಒಂಬುಡ್ಸ್‌ಮನ್, ನರೇಗಾ ಯೋಜನೆ, ಜಿಲ್ಲಾ ಪಂಚಾಯತ್ ಕಚೇರಿ, ಕೋಲಾರ. ಕಚೇರಿ ದೂರವಾಣಿ: 08151-240647,  ಮೊಬೈಲ್-9480870009 ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.