ಕೈಕೊಟ್ಟವರ ವಿರುದ್ಧ ದೂರು ಕೊಟ್ಟಿಲ್ಲ
ಕೋಲಾರ: ಲೋಕಸಭಾ ಚುನಾವಣೆಯಲ್ಲಿ ತಮ್ಮ ವಿರುದ್ಧ ಕೆಲಸ ಮಾಡಿರುವವರ ವಿರುದ್ಧ ಹೈಕಮಾಂಡ್ ಇಲ್ಲವೇ ಕೆಪಿಸಿಸಿಗೆ ದೂರು ಕೊಟ್ಟಿಲ್ಲವೆಂದು ಸಂಸದ ಕೆ.ಹೆಚ್. ಮುನಿಯಪ್ಪ ಸ್ಪಷ್ಟಪಡಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತಮ್ಮ ಗೆಲುವಿಗೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಪಕ್ಷಾತೀತವಾಗಿ ಅನೇಕರು ಸಹಕರಿಸಿದ್ದಾರೆ. ಶೀಘ್ರವೇ ಎಲ್ಲಾ ತಾಲೂಕುಗಳಿಗೆ ಭೇಟಿ ನೀಡಿ ತಮ್ಮ ಗೆಲುವಿಗೆ ಕಾರಣರಾಗಿರುವವರಿಗೆ ಕೃತಜ್ಞತೆ ಅರ್ಪಿಸುತ್ತೇನೆಂದರು.
ಈ ಬಾರಿ ತಮ್ಮನ್ನು ಸೋಲಿಸಲು ಸ್ವಪಕ್ಷದವರೇ ಕೆಲವು ಕಡೆ ಕೆಲಸ ಮಾಡಿದ್ದಾರೆಂಬ ದೂರುಗಳ ಬಗ್ಗೆ ಪತ್ರಕರ್ತರು ಕೇಳಿದಾಗ, ನನ್ನಂತೂ ಯಾರ ವಿರುದ್ಧವೂ ದೂರು ನೀಡಿಲ್ಲ, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಪಕ್ಷವಿರೋಧಿ ಚಟುವಟಿಕೆ ನಡೆಸಿರುವವರ ಬಗ್ಗೆ ಮಾಹಿತಿ ಸಂಗ್ರಹಣೆ ಮಾಡುತ್ತಿದ್ದಾರೆ.
ಕೆಪಿಸಿಸಿ ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿಗೆ ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಬಹುದೆಂದರು.
ಪ್ರತಿ ಚುನಾವಣೆಯಲ್ಲೂ ತನ್ನನ್ನು ಸೋಲಿಸಲು ವಿರೋಧಿಗಳು ಸವಾಲು ಹಾಕುತ್ತಾ ಬಂದಿದ್ದಾರೆ, ಇದರಿಂದ ಲೀಡೆ ಹೆಚ್ಚಾಗುತ್ತಿದೆಯೇ ಹೊರತು ವಿರೋಧಿಗಳಿಗೆ ಯಶಸ್ಸು ಸಿಕ್ಕಿಲ್ಲ ಎಂದು ವ್ಯಂಗ್ಯವಾಡಿದರು.
ಕೋಲಾರ ಜಿಲ್ಲೆಯಲ್ಲಿ ಕಾಂಗ್ರೆಸ್ ಬಲಗೊಳಿಸುವುದು ನನ್ನ ಕರ್ತವ್ಯ. ಜಿಲ್ಲೆಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ಸಿಗಬೇಕಾಗಿದೆ. ಮೂವರು ಶಾಸಕ ಪೈಕಿ ಒಬ್ಬರಿಗೆ ಸಚಿವ ಸ್ಥಾನ ಸಿಗಬಹುದೆಂದು ವಿಶ್ವಾಸ ವ್ಯಕ್ತಪಡಿಸಿದರಾದರೂ ಯಾರ ಹೆಸರನ್ನು ಪ್ರಸ್ತಾಪಿಸಲಿಲ್ಲ.
ಕೋಚಿಮುಲ್ ಆಡಳಿತ ಮಂಡಳಿ ಮತ್ತು ಜಿಪಂ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ವಿಚಾರದಲ್ಲಿ ಸ್ಥಳೀಯ ಮುಖಂಡರ ಅಭಿಪ್ರಾಯಕ್ಕೆ ಸ್ಪಂಧಿಸುವೆ, ಪಕ್ಷದ ಗೆಲುವಿಗಾಗಿ ಶ್ರಮಿಸುತ್ತೇನೆಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

