ಕೋಲಾರ

ಅಂತರ್ಜಲ ವೃದ್ಧಿಗೆ ಹೊಸ ವಿಧಾನಗಳ ಬಳಸಿ

Published On :

ಚಿಕ್ಕಬಳ್ಳಾಪುರ: ಬಯಲುಸೀಮೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಪಾತಾಳಕ್ಕಿಳಿದು ಕುಡಿಯುವ ನೀರಿನ ಸಮಸ್ಯೆ ತೀವ್ರಗೊಳ್ಳುತ್ತಿರುವುದರ ಬಗ್ಗೆ ಆತಂಕ ವ್ಯಕ್ತಪಡಿಸಿದ ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಕೌಶಿಕ್  ಮುಖರ್ಜಿ, ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ಸಲುವಾಗಿ ನೂತನ ವಿಧಾನಗಳನ್ನು ಬಳಕೆ ಮಾಡಲು ಮುಂದಾಗಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು,ಕುಡಿಯುವ ನೀರು ಮತ್ತು ಮೇವಿನ ಸಮಸ್ಯೆಯ ಬಗ್ಗೆ ಪ್ರಮುಖವಾಗಿ ಚರ್ಚಿಸಿ ಅಧಿಕಾರಿಗಳಿಗೆ ಸಲಹೆ ನೀಡಿದರು.
ಸರ್ಕಾರವು ಅನುದಾನವನ್ನು ಬಿಡುಗಡೆ ಮಾಡುತ್ತದೆ. ಈ ಹಣವನ್ನು ಅಧಿಕಾರಿಗಳು ಸಮಸ್ಯೆಗಳ ಪರಿಹಾರ ಮತ್ತು ಅಭಿವೃದ್ಧಿ ಕೆಲಸಗಳಿಗೆ ಸಕಾಲದಲ್ಲಿ ಬಳಸಿಕೊಳ್ಳಬೇಕು.ಕೇವಲ ಅನುದಾನವನ್ನು ಖರ್ಚು ಮಾಡಿದ ಮಾತ್ರಕ್ಕೆ ಸಮಸ್ಯೆಗಳು ದೂರವಾಗುವುದಿಲ್ಲ. ಸೂಕ್ತ ಯೋಜನೆಯಲ್ಲಿ ಕಾರ್ಯ ನಿರ್ವಹಿಸಿದಾಗ ಅನುದಾನ ಸದ್ಬಳಕೆಯಾಗಿ ಸಮಸ್ಯೆ ದೂರವಾಗುತ್ತದೆ ಎಂದರು.
ದಿನೇ ದಿನೇ ಅಂತರ್ಜಲ ಮಟ್ಟ ಪಾತಾಳಕ್ಕೆ ಕುಸಿಯುತ್ತಿದೆ. ಕೊಳವೆ ಬಾವಿಗಳು ವಿಫಲವಾಗುತ್ತಿವೆ. ಇದರಿಂದ ಅಂತರ್ಜ ಮಟ್ಟವನ್ನು ಹೆಚ್ಚಿಸಲು ಚೆಕ್  ಡ್ಯಾಮ್  ಗಳ ನಿರ್ಮಾಣ, ಕಾಲುವೆಗಳು ಒತ್ತುವರಿ ತೆರವು. ಕೆರೆಗಳ ಪುನಶ್ಚೇತನ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು. ತಾತ್ಕಾಲಿಕವಾಗಿ ಇಂಗು ಗುಂಡಿಗಳಲ್ಲಿ ಪ್ಲಾಸ್ಟಿಕ್  ಪೇಪರ್ಹಾಕಿ ನೀರನ್ನು ಸಂಗ್ರಹಿಸಿ ಅದನ್ನು ಬಳಸಿಕೊಳ್ಳಲು ರೈತರಿಗೆ ತಿಳಿಸಬೇಕೆಂದರು. ಈ ಬಾರಿ ಶೇ.75 ರಷ್ಟು ಮಳೆ ಕೊರತೆ ಕಂಡು ಬಂದಿದ್ದು ಬರಕ್ಕೆ 465 ಹಳ್ಳಿಗಳು ತೀವ್ರವಾದ ಸಮಸ್ಯೆಗಳಿಗೆ ತುತ್ತಾಗಿವೆ. ಜಿಲ್ಲಾ ಪಂಚಾಯತ್  ಗೆ ಈಗಾಗಲೇ 2 ಕೋಟಿ ಬಿಡುಗಡೆ ಮಾಡಿದ್ದು 168 ಹಳ್ಳಿಗಳಲ್ಲಿ 25 ಲಕ್ಷ ವೆಚ್ಚದಲ್ಲಿ ಟ್ಯಾಂಕರ್  ನೀರು ಸರಬರಾಜು ಮಾಡಲಾಗುತ್ತಿದೆ. ನಗರಸಭೆ, ಪುರಸಭೆ, ಪಪಂಗಳಿಗೆ ನೀರಿಗಾಗಿ 270 ಲಕ್ಷ ರೂ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವಿಶಾಲ್ ತಿಳಿಸಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.