ಕೋಲಾರ

ಕೆ.ಎಚ್. ಮುನಿಯಪ್ಪ ವಿರುದ್ಧ ಮಾತಾಡಿಲ್ಲ: ನಾರಾಯಣಸ್ವಾಮಿ

Published On :

ಕೋಲಾರ: ಬಂಗಾರಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕೆ.ಹೆಚ್. ಮುನಿಯಪ್ಪನವರಿಗೆ ಹೆಚ್ಚು ಲೀಡ್ ಸಿಗದಿರುವುದಕ್ಕೆ ಯುವಕರು ನರೇಂದ್ರ ಮೋದಿ ಪರವಾಗಿ ಮತ ಚಲಾಯಿಸಿರುವುದು ಕಾರಣವೆಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ತಾವು ಬುಧವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಹೆಚ್. ಮುನಿಯಪ್ಪನವರಿಗೆ ಕ್ಷೇತ್ರದಲ್ಲಿ ವಿರೋಧಿ ಅಲೆ ಇತ್ತು ಎಂದು ಹೇಳಲಿಲ್ಲ, ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಿದ್ದರೂ ಮತದಾರರು ಅದರಲ್ಲೂ ವಿಶೇಷವಾಗಿ ಯುವಕರು ನರೇಂದ್ರ ಮೋದಿಯ ಮೇಲಿನ ನಂಬಿಕೆಯಿಂದ ಮುನಿಯಪ್ಪ ವಿರುದ್ಧ ಮತ ಹಾಕಿದ್ದಾರೆಂದು ಹೇಳಿದ್ದೆ. ಆದರೆ, ಕೆಲ ಮಾಧ್ಯಮಗಳಲ್ಲಿ ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ತಿಳಿಸಿದ್ದಾರೆ.  ತಾವು ಶಾಸಕರಾಗಲು ಕೆ.ಹೆಚ್. ಮುನಿಯಪ್ಪನವರೇ ಕಾರಣ, ರಾಜಕೀಯ ಗುರುಗಳ ಬಗ್ಗೆ ತಪ್ಪಾಗಿ ಮಾತನಾಡುವ ಅಗತ್ಯವಿಲ್ಲ, ಮುನಿಯಪ್ಪನವರ ಬಗ್ಗೆ ಜನತೆಯಲ್ಲಿ ಅಸಮಾಧಾನವಿದ್ದಲ್ಲಿ 7ನೇ ಬಾರಿಗೂ ಅವರನ್ನೇ ಗೆಲ್ಲಿಸುತ್ತಿರಲಿಲ್ಲವೆಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.