ಕೋಲಾರ

31ಕ್ಕೆ ಯೋಗಿನಾರೇಯಣ ತಾತಯ್ಯರ179ನೇ ಆರಾಧನಾ ಮಹೋತ್ಸವ

Published On :

ಚಿಂತಾಮಣಿ: ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳ ಶ್ರೀ ಕ್ಷೇತ್ರ ಕೈವಾರದಲ್ಲಿ ತ್ರಿಕಾಲಜ್ಞಾನಿ ಸದ್ಗುರು ಶ್ರೀ ಯೋಗಿನಾರೇಯಣ ತಾತಯ್ಯನವರ 179 ನೇ ಆರಾಧನಾ ಮಹೋತ್ಸವವನ್ನು ಮೇ 31 ರಂದು ನಡೆಯಲಿದೆ ಎಂದು ಶ್ರೀ ಯೋಗಿನಾರೇಯಣ ಮಠದ ಧರ್ಮಾಧಿಕಾರಿ ಡಾ.ಎಂ.ಆರ್.ಜಯರಾಮು ತಿಳಿಸಿದ್ದಾರೆ.  ಈ ಶುಭ ದಿನದಂದು ಸದ್ಗುರು ತಾತಯ್ಯನವರಿಗೆ ವಿಶೇಷ ಅಭಿಷೇಕ,ಅಷ್ಟವಧಾನ ಸೇವೆ, ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಗುತ್ತದೆ. ಸಮಾರಂಭದಲ್ಲಿ ಭಾಗವಹಿಸುವ ಎಲ್ಲಾ ಸಾಧು-ಸತ್ಪುರುಷರಿಗೆ ಕಾಷಾಯ ವಸ್ತ್ರವನ್ನು ಉಚಿತವಾಗಿ ನೀಡಲಾಗುತ್ತದೆ. ಸದ್ಗುರು ತಾತಯ್ಯನವರಿಗೆ ವಿಶೇಷ 2013-14 ನೇ ಸಾಲಿನ ವಾರ್ಷಿಕ ವರದಿಯನ್ನು ಸಮರ್ಪಿಸಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಮುದ್ರಾಲ ಲಕ್ಷ್ಮಯ್ಯರವರು ಭಾಗವಹಿಸಿ ಉಪನ್ಯಾಸವನ್ನು ನೀಡಲಿದ್ದಾರೆ.
ಸಾಮೂಹಿಕ ವಿವಾಹಗಳು: ಜೂನ್ 1ರಂದು ಉಚಿತ ಸಾಮೂಹಿಕ ವಿವಾಹಗಳನ್ನು ಏರ್ಪಡಿಸಲಾಗಿದೆ. ವಧು-ವರರು ತಮ್ಮ ಹೆಸರುಗಳನ್ನು ಮಠದ ಕಚೇರಿಯಲ್ಲಿ ನೋಂದಾಯಿಸಬಹುದು. ನಿಗದಿತ ಅರ್ಜಿ ನಮೂನೆಗಳನ್ನು ಮಠದ ಕಚೇರಿಯಿಂದ ಪಡೆಯಬಹುದು ಎಂದು ಧರ್ಮಾಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.