ಇಂದು ಕೋಚಿಮುಲ್ ನಿರ್ದೇಶಕರ ಚುನಾವಣೆ
ಕೋಲಾರ: ಹಾಲು ಉತ್ಪಾದಕರ ದೇಗುಲವಾದ ಕೋಲಾರ- ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ನಿರ್ದೇಶಕರ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ.
ಒಕ್ಕೂಟದ 13 ಸ್ಥಾನಗಳಿಗೆ ಮೇ 25ರಂದು ಚುನಾವಣೆ ನಡೆಯಲಿದ್ದು, ಮತದಾನಕ್ಕಾಗಿ ನಗರದ ಗೋಕುಲ್ ಕಾಲೇಜನ್ನು ಸಜ್ಜುಗೊಳಿಸಲಾಗಿದೆ. ಒಟ್ಟು 1644 ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಮತದಾನದ ಹಕ್ಕು ಹೊಂದಿದ್ದಾರೆ. ಕೋಲಾರ ತಾಲೂಕಿನಲ್ಲಿ 215, ಮುಳಬಾಗಿಲು-143, ಮಾಲೂರು-128, ಬಂಗಾರಪೇಟೆ-109,ಶ್ರೀನಿವಾಸಪುರ-150, ಜಿಲ್ಲೆಯ ಮಹಿಳಾ ಸಂಘಗಳು-52, ಚಿಕ್ಕಬಳ್ಳಾಪುರ-155, ಬಾಗೇಪಲ್ಲಿ-78, ಚಿಂತಾಮಣಿ-196, ಗುಡಿಬಂಡೆ-41, ಗೌರಿಬಿದನೂರು-107, ಶಿಡ್ಲಘಟ್ಟ ತಾಲೂಕಿನಲ್ಲಿ 165 ಹಾಗೂ ಮಹಿಳಾ ಸಂಘಗಳ 105 ಮಂದಿ ಅಧ್ಯಕ್ಷರು ಮತದಾನ ಮಾಡಬಹುದಾಗಿದೆ. ಚುನಾವಣಾ ಕಾರ್ಯಕ್ಕೆ 13 ಕೊಠಡಿಗಳನ್ನು ಬಳಸಿಕೊಳ್ಳಲಾಗಿದ್ದು ಪ್ರತಿ ಕೊಠಡಿಗೆ ತಲಾ ನಾಲ್ವರಂತೆ ಒಟ್ಟು 52 ಮಂದಿ ಸಿಬ್ಬಂದಿ ನೇಮಿಸಲಾಗಿದೆ. ಚುನಾವಣಾಧಿಕಾರಿಯಾಗಿ ಉಪವಿಭಾಗಾಧಿಕಾರಿ ಸಿ.ಎನ್. ಮಂಜುನಾಥ್ ಕಾರ್ಯ ನಿರ್ವಹಿಸುತ್ತಿದ್ದು ಕೋಚಿಮುಲ್ ಅಧಿಕಾರಿಗಳು ಸಹ ಚುನಾವಣಾ ಕಾರ್ಯದಲ್ಲಿ ತಮ್ಮನ್ನು ತೋಡಗಿಸಿಕೊಂಡಿದ್ದಾರೆ. ಮತದಾನ ಬೆಳಿಗ್ಗೆ 8ರಿಂದ ಮಧ್ಯಾಹ್ನ 3ಗಂಟೆಯವರೆಗೆ ನಡೆಯಲಿದ್ದು ಸಂಜೆ 5ಗಂಟೆಯೊಳಗೆ ಎಲ್ಲಾ ತಾಲೂಕುಗಳ ಫಲಿತಾಂಶ ಪ್ರಕಟಗೊಳ್ಳುವ ನಿರೀಕ್ಷೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

