ದೂರು ದಾಖಲು: ಪ್ರತಿಭಟನೆ ಮೊಟಕುಗೊಳಿಸಿ ಪಲಾಯನ
ಕುಣಿಗಲ್: ಅರಣ್ಯಇಲಾಖೆಯ ದಿನಗೂಲಿ ನೌಕರರ ಮೇಲೆ ನಡೆಯುತ್ತಿರುವ ದೌರ್ಜನ್ಯ ವಿರೋಧಿಸಿ ಮೂರು ದಿನಗಳಿಂದ ಪ್ರತಿಭಟನೆ ನಡೆಸುತಿದ್ದ ಅರಣ್ಯ ಇಲಾಖೆ ದಿನಗೂಲಿ ನೌಕರರ ಸಂಘದ ರಾಜ್ಯಾಧ್ಯಕ್ಷನೆಂಬ ವ್ಯಕ್ತಿ, ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗುತ್ತಿದ್ದಂತೆ ಪ್ರತಿಭಟನೆ ಮೊಟಕುಗೊಳಿಸಿ ಪಲಾಯನ ಮಾಡಿರುವ ಘಟನೆ ನಡೆದಿದೆ.
ತಾಲೂಕಿನ ಹುಲಿಯೂರುದುರ್ಗದಲ್ಲಿರುವ ವಲಯ ಅರಣ್ಯಧಿಕಾರಿಗಳ ಕಚೇರಿ ಮುಂದೆ, ದಿನಗೂಲಿ ನೌಕರರನ್ನು ವಿನಾಕಾರಣ ಕೆಲಸದಿಂದ ತೆಗೆದುಹಾಕಿ, ನೌಕರರಿಗೆ ಬರಬೇಕಾದ ಹಣ ದುರುಪಯೋಗ ಪಡಿಸಿಕೊಂಡಿದ್ದಾರೆಂದು ಆರೋಪಿಸಿ. ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಬೇಕು ಎಂದು ಅರಣ್ಯ ಇಲಾಖೆ ದಿನಗೂಲಿ ನೌಕರರ ಸಂಘದ ರಾಜ್ಯಾಧ್ಯಕ್ಷ ನಾಗರಾಜ್ ಎಂಬಾತನ ಅಧ್ಯಕ್ಷತೆಯಲ್ಲಿ, ಇತರೆಡೆಯಿಂದ ಬಂದಂತಹವರು ಮತ್ತು ಹುಲಿಯೂರುದುರ್ಗ ವಲಯದಲ್ಲಿನ ಕೆಲವರು ಕಳೆದ ಮೂರು ದಿನಗಳಿಂದಲೂ ವಲಯ ಅರಣ್ಯಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸುತಿದ್ದರು. ರಾಜ್ಯಾಧ್ಯಕ್ಷ ನಾಗರಾಜ್ ಮೈಸೂರಿನಲ್ಲಿರುವ ಕಮರ್ಷಿಯಲ್ ಟ್ಯಾಕ್ಸ್ ವ್ಯಾಪ್ತಿಯಲ್ಲಿ ಬರುವಂತಹ ಪ್ರೊಪೇಷನಲ್ ಟ್ಯಾಕ್ಸ್ ಕಚೇರಿಯ ಹಿರಿಯ ಸಹಾಯಕಞಜಗಿ ಕರ್ತವ್ಯ ನಿರ್ವಹಿಸುತ್ತಿರುವುದು ತಿಳಿಯಿತು.
ಸರ್ಕಾರಿ ನೌಕರನಾಗಿ ಅರಣ್ಯ ಇಲಾಖೆ ವಿರುದ್ಧ ಸಾರ್ವಜನಿಕರಿಗೆ ಸುಳ್ಳು ಮಾಹಿತಿ ನೀಡಿ, ಮುಷ್ಕರ ಮಾಡುವುದರ ಜೊತೆಗೆ ಶಾಂತಿ ಭಂಗ ಉಂಟು ಮಾಡುತ್ತಿದ್ದಾನೆಂದು ರಮೇಶ್, ಹುಲಿಯೂರು ದುರ್ಗಠಾಣೆಗೆ ದೂರು ನೀಡಿದರು. ಹುಲಿಯೂರುದುರ್ಗ ಪೊಲೀಸರು ಪ್ರಕರಣ ದಾಖಲಿಸಿ, ವಿಚಾರಣೆಗೆ ಕರೆಸಲು ಮುಂದಾದಾಗ, ರಾಜ್ಯಾಧ್ಯಕ್ಷ ನಾಗರಾಜ್ ಪ್ರತಿಭಟನೆ ಮೊಟಕುಗೊಳಿಸಿ, ಪಲಾಯನ ಮಾಡಿದ್ದಾನೆ. ಇತರರು ಪ್ರತಿಭಟನೆ ಮುಂದುವರೆಸಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

