ಕೋಲಾರ

ಕೋಚಿಮುಲ್ ಆಡಳಿತಕ್ಕೆ ಕಾಂಗ್ರೆಸ್, ಜೆಡಿಎಸ್ ಕಸರತ್ತು

Published On :

 ಪಾ.ಶ್ರೀ.ಅನಂತರಾಮ್
ಕೋಲಾರ: ಕೋಚಿಮುಲ್ ಚುನಾವಣೆಯಲ್ಲಿ ಕೇವಲ 5 ಸ್ಥಾನಗಳನ್ನು ಗೆದ್ದಿರುವ ಕಾಂಗ್ರೆಸ್ ಸರ್ಕಾರಿ ನಾಮ ನಿರ್ದೇಶಕರ ಬಲಗೊಂದಿಗೆ ಅಧ್ಯಕ್ಷ ಸ್ಥಾನ ಗಿಟ್ಟಿಸಿಕೊಳ್ಳಳು ಯತ್ನಿಸುತ್ತಿದ್ದರೆ, ಜೆಡಿಎಸ್ ಕುದುರೆ ವ್ಯಾಪಾರದ ಮೂಲಕ ಅಧಿಕಾರ ಚುಕ್ಕಾಣಿ ಹಿಡಿಯಲು ತಂತ್ರ ರೂಪಿಸುತ್ತಿದೆ! 13 ನಿರ್ದೇಶಕರ ಬಲ ಹೊಂದಿರುವ ಕೋಚಿಮುಲ್‌ಗೆ ಕಾಂಗ್ರೆಸ್ 5, ಜೆಡಿಎಸ್‌ನ 7 ಹಾಗೂ ಪಕ್ಷೇತರರೊಬ್ಬರು ಆಯ್ಕೆಯಾಗಿದ್ದಾರೆ. ಪಕ್ಷೇತರ ಸದಸ್ಯ ಚಿಂತಾಮಣಿ ತಾಲೂಕಿನ ಊಲವಾಡಿ ಗ್ರಾಮದ ವೈ.ಬಿ.ಅಶ್ವಥನಾರಾಯಣ ಮಾಜಿ ಶಾಸಕ ಸುಧಾಕರರೆಡ್ಡಿ ಅವರ ಬೆಂಬಲಿಗರು. ಹಾಗಾಗಿ ಅವರು ಕಾಂಗ್ರೆಸ್‌ಗೆ ಬೆಂಬಲ ನೀಡುವುದು ಅನುಮಾನ. ಜೆಡಿಎಸ್‌ಗೆ ಅಧಿಕಾರ ಹಿಡಿಯಲು 9 ಸದಸ್ಯರು ಬೇಕು. ಪಕ್ಷೇತರ ಸದಸ್ಯರು ಸೇರಿ ಈಗ 8 ಮಂದಿ ಸದಸ್ಯರ ಬಲವಿದೆ. ಕಾಂಗ್ರೆಸ್ ಬೆಂಬಲದಿಂದ ಗೆದ್ದಿರುವ 5 ಐವರಲ್ಲಿ ಒಬ್ಬರು ಜೆಡಿಎಸ್ ಕಡೆ ವಾಲಿದರೆ ಜೆಡಿಎಸ್ ಹಾದಿ ಸುಗಮವಾಗಲಿದೆ. ಕುದುರೆ ವ್ಯಾಪಾರಕ್ಕೆ ಕಾಂಗ್ರೆಸ್‌ನಿಂದ ಗೆದ್ದವರು ಅವಕಾಶ ಮಾಡಿಕೊಡದಿದ್ದರೆ ಸರ್ಕಾರದಿಂದ ನೇಮಿಸುವ ನಾಮ ನಿರ್ದೇಶಿತ ನಿರ್ದೇಶಕ ಹಾಗೂ ಮತದಾನಕ್ಕೆ ಹಕ್ಕು ಹೊಂದಿರುವ ಮೂವರು ಅಧಿಕಾರಿಗಳ ಸಹಾಯದಿಂದ ಕಾಂಗ್ರೆಸ್ ಅಧಿಕಾರ ಹಿಡಿಯಲು ಸಾಧ್ಯವಾಗುತ್ತದೆ. ಅಧಿಕಾರ ಹಿಡಿಯುವ ತಂತ್ರದಲ್ಲಿ ಯಾರು ಯಶಸ್ವಿಯಾಗುತ್ತಾರೆ ಎಂಬುದನ್ನು ಕಾದು ನೋಡಬೇಕು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.