ಕೋಲಾರ

ಪ್ರತ್ಯೇಕ ಅಪಘಾತ: ಆರು ಜನರ ಸಾವು

Published On :

ಚಿಕ್ಕಬಳ್ಳಾಪುರ: ಅತಿ ವೇಗವಾಗಿ ಬಂದು ಕಾರಿಗೆ ಡಿಕ್ಕಿ ಹೊಡೆದ ಟಿಪ್ಪರ್ ಲಾರಿ ಬಾಲಕಿ ಸಮೇತ ದಂಪತಿಗಳಿಬ್ಬರನ್ನು ಬಲಿ ತೆಗೆದುಕೊಂಡಿರುವ ಘಟನೆ ತಾಲೂಕಿನ ದೇವಿಶೆಟ್ಟಿಹಳ್ಳಿ ಸಮೀಪ ಸಂಭವಿಸಿದೆ. ಅದೃಷ್ಟವಶಾತ್ ಮತ್ತೊಬ್ಬ ಬಾಲಕಿ ದುರ್ಘಟನೆಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.
ಅಪಘಾತದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಹಳಿಯೂರು ಗ್ರಾಮದ ಜಯರಾಮ್ ( 42) ಮತ್ತು ಈತನ ಪತ್ನಿ ನಾಗರತ್ನ ( 38) ಮತ್ತು ಮಗಳು ಮೊನಿಷಾ (10) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ನಯನಾಳನ್ನು ಸ್ಥಳೀಯ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ಕೊಡಿಸಿದ ನಂತರ ಬೆಂಗಳೂರಿನ ಆಸ್ಪತ್ರೆಗೆ ಕಳುಹಿಸಲಾಗಿದೆ.
ಜಯರಾಮ್ ದಂಪತಿ ತಮ್ಮ ಮಕ್ಕಳಾದ ನಯನಾ ಮತ್ತು ಮೊನಿಷಾರವರನ್ನು ಶಾಲೆಗೆ ಸೇರಿಸಿದ ಹಿನ್ನೆಲೆಯಲ್ಲಿ  ತಾಲೂಕಿನ ನಂದಿಯ ಶ್ರೀ ಭೋಗ ನಂದೀಶ್ವರ ಸ್ವಾಮಿ ದೇವಾಲಯಕ್ಕೆ ಪೂಜೆ ಸಲ್ಲಿಸಲು ತೆರಳುತ್ತಿದ್ದರು. ಆಗ ಕಾರು ನಂದಿ ಕ್ರಾಸ್  ಸಮೀಪದ ದೇವಿಶೆಟ್ಟಿಹಳ್ಳಿ ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ನಂದಿ ಕಡೆಯಿಂದ ಅತಿ ವೇಗವಾಗಿ ಬಂದ ಟಿಪ್ಪರ್ ಲಾರಿ ಕಾರಿಗೆ ಡಿಕ್ಕಿ ಹೊಡೆದಿದೆ. ಇದರ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು ಸ್ಥಳದಲ್ಲಿಯೇ ಮೂವರು ಮೃತಪಟ್ಟಿದ್ದಾರೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸುತ್ತಮುತ್ತಲ ಗ್ರಾಮಸ್ಥರು ಸ್ಥಳಕ್ಕೆ ಬಂದು ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು.
ಸಿಮೆಂಟ್ ಸಾಗಾಣಿಕೆ, ಕಲ್ಲು ಮತ್ತು ಮರಳು ಸಾಗಾಣಿಕೆಯ ವಾಹನಗಳು ಈ ರಸ್ತೆಯಲ್ಲಿ ಅತಿ ವೇಗವಾಗಿ ಸಂಚರಿಸುತ್ತವೆ. ಸಿಮೆಂಟ್  ಟಿಪ್ಪರ್ ಲಾರಿಗಳು ಅನೇಕ ಸಂದರ್ಭದಲ್ಲಿ ಎದುರಿಗೆ ಬರುವ ವಾಹನಗಳ ಮೇಲೆಯೇ ಬೀಳುವ ರೀತಿಯಲ್ಲಿ ಸಂಚರಿಸುತ್ತವೆ. ಈ ಬಗ್ಗೆ ಅನೇಕ ಬಾರಿ ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ದೂರು ಕೊಟ್ಟರೂ ಏನೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.
ಜಿಲ್ಲಾ ರಕ್ಷಣಾಧಿಕಾರಿ ದಿವ್ಯ ಗೋಪಿನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.