ಕೋಲಾರ

ಒಡಿಶಾದ 32 ಮಕ್ಕಳ ರಕ್ಷಣೆ

Published On :

ಚಿಕ್ಕಬಳ್ಳಾಪುರ: ಶಿಕ್ಷಣ ಕೊಡಿಸುವುದಾಗಿ ಹೇಳಿ ಸ್ವಯಂ ಸೇವಾ ಸಂಸ್ಥೆಯೊಂದು ಒಡಿಶಾದಿಂದ 32 ಮಕ್ಕಳನ್ನು ಕರೆತಂದು, ಚಿಂತಾಮಣಿ ತಾಲೂಕಿನ ಊಳವಾಡಿಯಲ್ಲಿ ದುಡಿಸಿಕೊಳ್ಳಲಾಗುತ್ತಿತ್ತು. ಈ ಮಕ್ಕಳನ್ನು ರಕ್ಷಿಸಿ ಪುನಾ ಅವರನ್ನು ಪೋಷಕರ ಬಳಿ ಕಳುಹಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಅಧ್ಯಕ್ಷ ಸುಧಾಕರ್ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರಿಗೆ ವಿಷಯ ತಿಳಿಸಿದ ಅವರು, ಚಿಂತಾಮಣಿ ತಾಲೂಕಿನ ಊಲವಾಡಿಯ ಬಾರ್ನ್ ಫೌಂಡೇಷನ್ ಒಡಿಶಾ ಮೂಲದ 32 ಮಕ್ಕಳನ್ನು ಶಿಕ್ಷಣ ಕೊಡಿಸುವ ಭರವಸೆ ನೀಡಿ ಚಿಂತಾಮಣಿಗೆ ಕರೆ ತಂದಿತ್ತು. ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸುತ್ತಿತ್ತು. ಈ ನಡುವೆ ಒಡಿಶಾದಲ್ಲಿ ಮಾನವ ಹಕ್ಕುಗಳ ಹೋರಾಟಗಾರರೊಬ್ಬರು ಅಲ್ಲಿನ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿ, ಬಾರ್ನ್ ಫೌಂಢೇಷನ್  ಸೇವಾ ಸಂಸ್ಥೆ ಮಕ್ಕಳನ್ನು ಬಾಲಕಾರ್ಮಿಕರನ್ನಾಗಿ ದುಡಿಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದರು. ಈ ದೂರಿನ ಅನ್ವಯ ಒಡಿಶಾ ಸರ್ಕಾರ, ಪರಿಶೀಲಿಸಿ ವರದಿ ನೀಡಬೇಕು ಎಂದು ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಅಲ್ಲಿನ ಅಧಿಕಾರಿಗಳ ತಂಡ ಇಲ್ಲಿಗೆ ಆಗಮಿಸಿದ್ದರು. ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮತ್ತು ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳ ಸಂಸ್ಥೆಯ ಕಚೇರಿಗೆ ತೆರಳಿ 20 ಬಾಲಕಿಯರು ಹಾಗೂ 12 ಬಾಲಕರನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.