ಕೋಲಾರ

'ಕ್ರೀಡಾ ಮನೋಭಾವ ಬೆಳೆಸಿಕೊಳ್ಳಿ'

Published On :

ಮಾಲೂರು: ಕ್ರೀಡಾಪಟುಗಳು ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಚಲನಚಿತ್ರ ನಟ ಶ್ರೀನಗರ ಕಿಟ್ಟಿ ಹೇಳಿದರು.
ತಾಲೂಕಿನ ಲಕ್ಕೂರು ಹೋಬಳಿಯ ಜಯಮಂಗಲ ಪಂಚಾಯ್ತಿ ವ್ಯಾಪ್ತಿಯ ಗೋಣೂರು ಗ್ರಾಮದ ನ್ಯೂಫ್ರೆಂಡ್ಸ್ ಆಯೋಜಿಸಿದ್ದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯ ಹರೀಶ್ ಕಪ್‌ಗೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.
ಜನಪ್ರಿಯ ಕ್ರೀಡೆಗಳ ಜತೆಯಲ್ಲಿ ದೇಶಿಯ ಕ್ರೀಡೆಗಳನ್ನು ಗ್ರಾಮೀಣ ಭಾಗಗಳಲ್ಲಿ ಹೆಚ್ಚು ಹೆಚ್ಚಾಗಿ ಆಯೋಜಿಸಬೇಕು. ಇದರಿಂದ ಗ್ರಾಮೀಣ ಪ್ರತಿಭೆ ಹೊರಬರಲು ಸಹಕಾರಿಯಾಗಲಿದೆ ಎಂದರು.
ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಜಿ.ಇ.ರಾಮೇಗೌಡ ಮಾತನಾಡಿದರು. ಇದೇ ವೇಳೆ, ಪಂದ್ಯಾವಳಿಯಲ್ಲಿ ಭಾಗವಹಿಸಿದ 30 ತಂಡಗಳಿಗೆ ಸಮವಸ್ತ್ರ ಹಾಗೂ ಕ್ರಿಕೆಟ್ ಸೆಟ್‌ಗಳನ್ನು ವಿತರಿಸಲಾಯಿತು.
ಅಶ್ವಥ್ ನಾರಾಯಣ ಗೌಡ, ಆರ್.ಶರತ್, ಅಶೋಕ್, ತರುಣ್, ಅಭೀಷೇಕ್ ನಾಯ್ಡು, ಹೂಡಿ ವಿಜಯಕುಮಾರ್ ಕೆ. ಗಜೇಂದ್ರ, ಅಭಿಲಾಷ್ ರೆಡ್ಡಿ, ಎನ್.ಕೆ.ಲೋಹಿತ್, ಸುಹಾಸ್ ಪಿ. ಅವಾಟಿ, ಅಪ್ಪಿ ರಾಜು, ದಿನೇಶ್‌ಗೌಡ, ಆಂಜಿನಪ್ಪ, ವೆಂಕಟೇಶ್, ಹರೀಶ್ ಗೌಡ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.