ಹಲ್ಲೆ ಪ್ರಕರಣ: ಆರೋಪಿ ವಿರುದ್ಧ ಕ್ರಮಕ್ಕೆ ಆಗ್ರಹ
ಕೋಲಾರ: ಜಿಲ್ಲಾ ಸರ್ಕಾರಿ ವಾಹನ ಚಾಲಕರ ಸಂಘದ ಅಧ್ಯಕ್ಷ ಮಾರುತಿ ಕುಮಾರ್ ಮೇಲೆ ಹಲ್ಲೆ ನಡೆಸಿರುವ ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಮಂಗಳವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಕೆ.ಎನ್.ಮಂಜುನಾಥ್ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳ ನಿಯೋಗ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ, ಸರ್ಕಾರಿ ವಾಹನ ಚಾಲಕರ ಸಂಘದ ಅಧ್ಯಕ್ಷರ ಮೇಲೆ ಹಲ್ಲೆ ನಡೆಸಿರುವ ವೆಂಕಟರಮಣ ಅಲಿಯಾಸ್ ರಮಣ ಎಂಬುವರ ವಿರುದ್ಧ ದೂರು ನೀಡಲಾಗಿದೆ. ಆದರೆ ಪೊಲೀಸರು ಕ್ರಮಕ್ಕೆ ವಿಳಂಬ ಮಾಡುತ್ತಿದ್ದಾರೆ. ಶೀಘ್ರ ಕ್ರಮಕೈಗೊಳ್ಳದಿದ್ದರೆ ಸರ್ಕಾರಿ ನೌಕರರು ಬೀದಿಗಿಳಿದು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಕ್ರಮಕ್ಕೆ ಡಿಸಿ ಸೂಚನೆ: ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಡಿ.ಕೆ.ರವಿ. ದೂರವಾಣಿಯಲ್ಲಿ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಸಂಪರ್ಕಿಸಿ ಕೂಡಲೇ ಆರೋಪಿಯಿಂದ ಅಂಗಡಿ ಖಾಲಿ ಮಾಡಿಸಿ ಕಾನೂನು ರೀತ್ಯ ಕ್ರಮ ಜರುಗಿಸಿ ಎಂದು ಸೂಚಿಸಿದರು. ಮನವಿ ಸಲ್ಲಿಕೆ ಸಂದರ್ಭದಲ್ಲಿ ಜಿಲ್ಲಾ ನೌಕರರ ಸಂಘದ ಉಪಾಧ್ಯಕ್ಷ ಮುನಿರಾಜು, ಪ್ರಧಾನ ಕಾರ್ಯದರ್ಶಿ ಅಶೋಕ್, ಖಜಾಂಚಿ ರಂಗಯ್ಯ, ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಎಂ.ನಾಗರಾಜ್, ಜಿಲ್ಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ವೆಂಕಟಶಿವಪ್ಪ, ಚಾಲಕರ ಸಂಘದ ಅಧ್ಯಕ್ಷ ಮಾರುತಿಕುಮಾರ್ ಹಾಗೂ ವಾಹನ ಚಾಲಕರ ಸಂಘದ ಪದಾಧಿಕಾರಿಗಳು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

