ದುಬಾರಿ ಶುಲ್ಕ ವಸೂಲಿ: ಎಸ್‌ಎಫ್‌ಐ ಪ್ರತಿಭಟನೆ
ಶಿಡ್ಲಘಟ್ಟ: ಖಾಸಗಿ ಶಾಲೆಗಳಲ್ಲಿ ದುಬಾರಿ ಶುಲ್ಕವನ್ನು ವಸೂಲಿ ಮಾಡುತ್ತಿದ್ದರೂ ಕೂಡಾ ಸ್ಥಳೀಯ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲವೆಂದು ಎಸ್‌ಎಫ್‌ಐ ಕಾರ್ಯಕರ್ತರು ಶಿಕ್ಷಣಾಧಿಕಾರಿಗಳ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದರು.
ಪಟ್ಟಣದ ಕೋಟೆ ವೃತ್ತದಲ್ಲಿರುವ ಶಿಕ್ಷಣಾಧಿಕಾರಿಗಳ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದ ಅವರು, ತಾಲೂಕಿನಾದ್ಯಂತ ಖಾಸಗಿ ಶಾಲೆಗಳಲ್ಲಿ ಡೊನೇಷನ್ ಹಾವಳಿ ಹೆಚ್ಚಾಗಿದೆ. ಈ ಬಗ್ಗೆ ಶಿಕ್ಷಣಾಧಿಕಾರಿಗಳಿಗೆ ದೂರು ಕೊಟ್ಟರೆ, ಅದೇ ದೂರಿನ ಪ್ರತಿಯನ್ನು ತೆಗೆದುಕೊಂಡು ಖಾಸಗಿ ಶಾಲೆಗಳ ಆಡಳಿತ ಮಂಡಳಿಯ ಮುಂದೆ ಪ್ರದರ್ಶನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರತಿಭಟನಾ ಸ್ಥಳಕ್ಕೆ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಅಜಿತ್‌ಪ್ರಸಾದ್ ಭೇಟಿ ನೀಡಿ, ದೂರು ಬಂದರೆ ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದರು. ಶಿಕ್ಷಣಾಧಿಕಾರಿ ರಘುನಾಥರೆಡ್ಡಿ ಮಾತನಾಡಿ, ಡೊನೇಷನ್ ಪಡೆಯುವ ಶಾಲೆಗಳಿಗೆ ಈಗಾಗಲೇ ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿಸಿದರು. ಕುಂದಲಗುಕರ್ ಮುನೀಂದ್ರ, ಗೆಜ್ಜಿಗಾನಹಳ್ಳಿ ರವಿಕುಮಾರ್, ಶಶಿಕಲಾ, ಬಾಬು, ಸದಾನಂದ, ಅಪ್ಪು, ಮಕ್ಸೂದ್ಹುಸೇನ್, ಮುಂತಾದವರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

