ವಿಜ್ಞಾನ, ತಂತ್ರಜ್ಞಾನಕ್ಕೆ ಮೋದಿ ಆದ್ಯತೆ: ಕಸ್ತೂರಿರಂಗನ್ ವಿಶ್ವಾಸ
ಕ.ಪ್ರ. ವಾರ್ತೆ ಟಿ ಕೋಲಾರ ಟಿ ಮೇ 27
ಬಾಹ್ಯಾಕಾಶ, ವಿಜ್ಞಾನ ಮತ್ತು ತಂತ್ರಜ್ಢಆನ ಅಭಿವೃದ್ಧಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹೆಚ್ಚಿನ ಆದ್ಯತೆ ನೀಡುವ ಸಂಪೂರ್ಣ ವಿಶ್ವಾಸವಿದೆ ಎಂದು ಭಾರತ ಯೋಜನಾ ಆಯೋಗದ ಸದಸ್ಯ ಹಾಗೂ ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷ ಡಾ.ಕೆ.ಕಸ್ತೂರಿರಂಗನ್ ತಿಳಿಸಿದರು.
ನಗರದ ಇಟಿಸಿಎಂ ಆಸ್ಪತ್ರೆಯಲ್ಲಿ ನೈಟಿಂಗೇಲ್ಸ್ ಮೆಡಿಕಲ್ ಟ್ರಸ್ಟ್ವತಿಯಿಂದ ಆರಂಭಿಸಲಾಗಿರುವ ಭಾರತದ ಮೊದಲ ಹಾಗೂ ದೂರವೈದ್ಯದಿಂದ ಸಮರ್ಥಗೊಳಿಸುವ ಡಿಮೆನ್ಷಿಯಾ ಕೇರ್ ಸೆಂಟರ್ ಉದ್ಘಾಟಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ನರೇಂದ್ರ ಮೋದಿ ಕೇವಲ ರಾಜತಾಂತ್ರಿಕ ಮಾತ್ರವಲ್ಲ ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಹೆಚ್ಚಿನ ಅಭಿರುಚಿ ಮತ್ತು ಆಸಕ್ತಿಯನ್ನು ಹೊಂದಿರುವ ರಾಜಕಾರಣಿ ಆಗಿರುವುದರಿಂದ ಗುಜರಾತ್ ಮಾದರಿಯಲ್ಲಿ ಇಡೀ ಭಾರತವನ್ನು ಹೆಚ್ಚಿನ ರೀತಿಯಲ್ಲಿ ಅಭಿವೃದ್ಧಿಪಡಿಸಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.
ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿ ಆಗಿದ್ದಾಗ ವಿಜ್ಞಾನಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದರು. ಅದೇ ಹಾದಿಯಲ್ಲಿ ಮೋದಿ ಅವರು ಮುಂದುವರೆಯುತ್ತಾರೆಂಬ ನಂಬಿಕೆ ತಮಗಿದೆ ಎಂದರು.
ಕೇಂದ್ರ ಸರ್ಕಾರವು ಆರೋಗ್ಯ ವಿಜ್ಞಾನದ ಬಗ್ಗೆ ಹೆಚ್ಚು ಗಮನ ಹರಿಸಬೇಕಾದ ಅನಿವಾರ್ಯತೆ ಈಗ ಹೆಚ್ಚಾಗಿದೆ ಎಂದು ಒತ್ತಿ ಹೇಳಿದ ಅವರು, ದೇಶದ ಅಭಿವೃದ್ಧಿ ಬಗ್ಗೆ ಕೇಂದ್ರ ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು. ಇದು ನನ್ನೊಬ್ಬನ ಅಭಿಪ್ರಾಯವಲ್ಲ. ಭಾರತದ ಸಮಸ್ತ ಜನತೆಯ ಹಾಗೂ ವಿಜ್ಞಾನಿಗಳ ಆಶಯವಾಗಿದೆ ಎಂದು ಹೇಳಿದರು.
ದೊಡ್ಡ ದೊಡ್ಡ ನಗರಗಳಲ್ಲಿ ಆರೋಗ್ಯ ಸೇವೆ ಕಷ್ಟವಲ್ಲ. ಆದರೆ, ಗ್ರಾಮೀಣ ಪ್ರದೇಶ ಅದರಲ್ಲೂ ಅತ್ಯಂತ ಹಿಂದುಳಿದ ಪ್ರದೇಶಗಳಲ್ಲಿ ಜನರಿಗೆ ಅಗತ್ಯವಾಗಿ ಬೇಕಾದ ಆರೋಗ್ಯ ಸೇವೆ ದುರ್ಬಲವಾಗಿದೆ. ಈ ನಿಟ್ಟಿನಲ್ಲಿ ನೈಟಿಂಗೇಲ್ಸ್ ಮೆಡಿಕಲ್ ಟ್ರಸ್ಟ್ವತಿಯಿಂದ ನರಗಳ ಅಶಕ್ತತೆಯಿಂದ ಬಳಲುವ ವಯಸ್ಸಾದವರ ಅನುಕೂಲಕ್ಕಾಗಿ ನೈಟಿಂಗೇಲ್ಸ್ ಮತ್ತೆ ಕೆಲವು ಸ್ಯಾಟ್ಲೈಟ್ ಯುನಿಟ್ಗಳನ್ನು ದೇಶದ ವಿವಿಧ ಕಡೆ ಸ್ಥಾಪಿಸಿ ಅಗ್ಗವಾದ ಮತ್ತು ಸಮರ್ಥನೆಯಾದ ಡಿಮೆಂಶಿಯಾ ಕೇಂದ್ರಗಳನ್ನು ಸ್ಥಾಪಿಸಲು ಮುಂದಾಗಿರುವುದು ಶ್ಲಾಘನೀಯ ಎಂದು ತಿಳಿಸಿದರು.
ಡಿಮೆನ್ಷಿಯಾ ಕೇರ್ ಸೆಂಟರ್ ಉದ್ಘಾಟನಾ ಸಮಾರಂಭದಲ್ಲಿ ಮೆಥೋಡಿಸ್ಟ್ ಚರ್ಚ್ನ ಬಿಷಪ್ ಡಾ.ತಾರಾನಾಥ್ ಸಾಗರ್, ಪಾದ್ರಿ ಕ್ರೀಸ್ಟೋಫರ್ ಡೆವಿಡ್, ಎಆರ್ಡಿಎಸ್ಐ ಮುಖ್ಯಸ್ಥೆ ಮೀರಾ ಪಟ್ಟಾಭಿರಾಮನ್, ನೈಟಿಂಗೇಲ್ಸ್ ಮೆಡಿಕಲ್ ಟ್ರಸ್ಟ್ನ ವ್ಯವಸ್ಥಾಪಕ ಟ್ರಸ್ಟಿ ಡಾ.ರಾಧಾಮೂರ್ತಿ, ಇಟಿಸಿಎಂ ಆಸ್ಪತ್ರೆಯ ಪ್ರೇಮಕುಮಾರ್ ರಾಜ್ ಇದ್ದರು. ರಮಣಿ ಸುಂಧರ್ ನಿರೂಪಿಸಿ, ಡಾ.ಪಾಲ್ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

