ಮಳೆಯಿಂದ ಬೆಳೆ ಹಾನಿ, ಮುಖ್ಯಮಂತ್ರಿ ಬಳಿಗೆ ರೈತರ ನಿಯೋಗ: ಶಾಸಕ ಎಂ. ರಾಜಣ್ಣ ಭರವಸೆ
ಶಿಡ್ಲಘಟ್ಟ: ಆಲಿಕಲ್ಲು ಮಳೆಯಿಂದಾಗಿ ನೂರಾರು ಎಕರೆ ಬೆಳೆ ನಾಶವಾಗಿದ್ದು, ಪರಿಹಾರಕ್ಕೆ ಆಗ್ರಹಿಸಿ ಮುಂದಿನ ಮೂರು ದಿನದಲ್ಲಿ ರೈತರ ನಿಯೋಗವನ್ನು ಮುಖ್ಯಮಂತ್ರಿ ಬಳಿ ಕರೆದೊಯ್ಯಲಾಗುವುದು ಎಂದು ಶಾಸಕ ಎಂ.ರಾಜಣ್ಣ ಹೇಳಿದರು.
ತಾಲೂಕಿನ ಮೇಲೂರು, ಮಳ್ಳೂರು ಗ್ರಾಪಂ ವ್ಯಾಪ್ತಿಯ ಮುತ್ತೂರು, ಗಂಗನಹಳ್ಳಿ ಗ್ರಾಮಗಳಲ್ಲಿ ಸುರಿದ ಮಳೆಯಿಂದಾಗಿ ದ್ರಾಕ್ಷಿ, ಹಿಪ್ಪುನೇರಳೆ, ಟೊಮೆಟೊ, ದಾಳಿಂಬೆ, ಪಪ್ಪಾಯ, ಬಾಳೆತೋಟದ ಬೆಳೆಗಳು ಸಂಪೂರ್ಣವಾಗಿ ನಾಶವಾಗಿದೆ. ರೈತರು ಲಕ್ಷಾಂತರ ರೂಪಾಯಿಗಳು ನಷ್ಟ ಅನುಭವಿಸಿದ್ದಾರೆ. ರೈತರ ಸಾಲಸೋಲ ಮಾಡಿ ಬೆಳೆ ಬೆಳೆದಿದ್ದರು. ಆದರೆ, ಮಳೆಯಿಂದಾಗಿ ಎಲ್ಲ ವ್ಯರ್ಥವಾಗಿದೆ. ಈ ಬಗ್ಗೆ ಸಿಎಂ ಬಳಿಗೆ ನಿಯೋಗ ಕರೆದೊಯ್ಯುದು ಚರ್ಚಿಸಲಾಗುವುದು ಎಂದು ತಿಳಿಸಿದರು.
ಮಳೆಯಿಂದ ಹಾನಿಯಾಗಿರುವ ಹೊಲಗಳಿಗೆ ಶಾಸಕ ರಾಜಣ್ಣ ಭೇಟಿ ನೀಡಿ ಪರಿಶೀಲಿಸಿದರು. ಅಲ್ಲದೆ, ನಷ್ಟ ಅಂದಾಜು ಪಟ್ಟಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕೋಚಿಮುಲ್ ನಿರ್ದೇಶಕ ಬಂಕ್ಮುನಿಯಪ್ಪ, ತಹಸೀಲ್ದಾರ್ ಜಿ.ಎ.ನಾರಾಯಣಸ್ವಾಮಿ, ಜಿಪಂ ಸದಸ್ಯ ಕಂಬದಹಳ್ಳಿ ಸತೀಶ್, ತೋಟಗಾರಿಕಾ ಸಹಾಯಕ ನಿರ್ದೇಶಕ ರಮೇಶ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ರಾಘವೇಂದ್ರ, ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕ ಚಂದ್ರಪ್ಪ ಸೇರಿದಂತೆ ರೈತ ಮುಖಂಡರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

