ಕೋಲಾರ

ಮಳೆ: ಲಕ್ಷಾಂತರ ರುಪಾಯಿ ಮೌಲ್ಯದ ಗೃಹೋಪಯೋಗಿ ವಸ್ತುಗಳು ನಾಶ

Published On :

ಚಿಂತಾಮಣಿ: ತಾಲೂಕು ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಬಾರಿ ಗುಡುಗು ಮಿಂಚಿನಿಂದ ಲಕ್ಷಾಂತರ ರುಪಾಯಿ ಮೌಲ್ಯದ ಗೃಹಪಯೋಗಿ ವಸ್ತುಗಳು ನಾಶವಾಗಿವೆ. ಅಲ್ಲದೆ, ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ, ಜನಜೀವನ ಅಸ್ತವ್ಯವಸ್ತವಾಗಿದೆ.
ಕಾಚಹಳ್ಳಿ, ನಾಯಿಂದ್ರಹಳ್ಳಿ, ಊಲವಾಡಿ, ಕೆಂಚಾರ್ಲಹಳ್ಳಿ, ಬಟ್ಲಹಳ್ಳಿ, ಕೈವಾರ ಸುತ್ತಮುತ್ತಲಿನಲ್ಲಿ ಮಂಗಳವಾರ ಸಂಜೆ ಭಾರಿ ಮಳೆ  ಸುರಿದಿದೆ. ಗ್ರಾಮೀಣ ಹಾಗೂ ನಗರದ ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗಿ ಸಾಕಷ್ಟು ನಷ್ಟ ಸಂಭವಿಸದೆ.
ಚಿಂತಾಮಣಿ ನಗರದ ಅಶ್ವಿನಿ ಬಡಾವಣೆಯ ಪಿಡಿಒ ಲಕ್ಷ್ಮಿನಾರಾಯಣ ಮನೆಯಲ್ಲಿ ಸಾವಿರಾರು ಬೆಲೆ ಬಾಳುವ ಟಿವಿ ನಾಶವಾಗಿದೆ. ಇನ್ನೂ ಹಲವು ಬಡಾವಣೆಗಳ ಮನೆಗಳಲ್ಲಿನ ಕಂಪ್ಯೂಟರ್, ಟಿ.ವಿ, ರೆಪ್ರಿಜರೇಟರ್ ಸೇರಿದಂತೆ ಲಕ್ಷಾಂತರ ರುಪಾಯಿ ಬೆಲೆ ಬಾಳುವ ವಸ್ತುಗಳು ಹಾನಿಯಾಗಿವೆ. ಅಲ್ಲದೆ, ತಗ್ಗು ಪ್ರದೇಶದಲ್ಲಿರುವ ಮನೆಗಳಿಗೂ ನೀರು ನುಗ್ಗಿದೆ. ಹಾಗಾಗಿ, ಬಹುತೇಕ ಬಡಾವಣೆಗಳಲ್ಲಿ ರಾತ್ರಿ ಪೂರ್ತಿ ವಿದ್ಯುತ್ ಇರಲಿಲ್ಲ.
ಮಕ್ಕಳು, ಮಹಿಳೆಯರು ರಾತ್ರಿಯಲ್ಲಾ ನೀರನ್ನು ಹೊರ ಹಾಕುತ್ತಾ ಜಾಗರಣೆ ಮಾಡುವ ಪರಿಸ್ಥಿತಿ ಎದುರಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.