ಕೋಲಾರ

ಮಾಲೂರಿಗೆ ಹೊಸ ಬಸ್ ನಿಲ್ದಾಣ ಶೀಘ್ರ: ಶಾಸಕ

Published On :

ಮಾಲೂರು: ಪಟ್ಟಣದಲ್ಲಿ ಹಾಲಿ ಇರುವ ಬಸ್ ನಿಲ್ದಾಣ ಕಿರಿದಾಗಿದ್ದು, ನೂತನ ಬಸ್ ನಿಲ್ದಾಣವನ್ನು ರೇಲ್ವೆ ಸೇತುವೆ ಬಳಿಯ ಸರ್ಕಾರಿ ಜಾಗದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಶಾಸಕ ಮಂಜುನಾಥ್ ಗೌಡ ಹೇಳಿದರು.
  ಕೆಎಸ್‌ಆರ್‌ಟಿಸಿ ಅಧಿಕಾರಿಯೂಡನೆ ನೂತನ ಬಸ್ ನಿಲ್ದಾಣಕ್ಕಾಗಿ ಪಟ್ಟಣದ ವಾಲ್ಮೀಕಿ ವೃತ್ತದ ಬಳಿಯ ರೇಲ್ವೆ ಸೇತುವೆ ಬಳಿಯ ಲೋಕೋಪಯೋಗಿ ಇಲಾಖೆಯ 4.5 ಎಕರೆ ಜಾಗವನ್ನು ಪರಿಶೀಲಿಸಿದ ನಂತರ ಪತ್ರಕರ್ತರಿಗೆ ಈ ಮಾಹಿತಿ ನೀಡಿದರು. ಮುಂದಿನ 25 ವರ್ಷವನ್ನು ಗಮನದಲ್ಲಿಟ್ಟುಕೊಂಡು ಸುಸಜ್ಜಿತ ನಿಲ್ದಾಣ ನಿರ್ಮಾಣ ಮಾಡಲಾಗುವುದು. ಇದಕ್ಕೆ ಪೂರಕವಾಗಿ ಬೇಕಾಗಿರುವ ಅಂಡರ್ ಪಾಸ್ ಹಾಗೂ ರಸ್ತೆ ಅಗಲೀಕರಣವನ್ನು ಶೀಘ್ರವಾಗಿ ಕೈಗೊಳ್ಳಲಾಗುವುದು. ಈಗಿರುವ ಬಸ್ ನಿಲ್ದಾಣ ಜಾಗದಲ್ಲಿ ಪುರಸಭೆ ವತಿಯಿಂದ ಬೃಹತ್ ವಾಣಿಜ್ಯ ಸಂಕೀರ್ಣ ನಿರ್ಮಿಸಲಾಗುವುದು  ಎಂದು ಅವರು ತಿಳಿಸಿದರು.
 ತಹಸೀಲ್ದಾರ್ ಶಿವುಕುಮಾರ್ ಮಾತನಾಡಿ, ಈ ಜಾಗದ ಸುತ್ತಮುತ್ತಲೂ ಇರುವ ಒತ್ತುವರಿಯನ್ನು ಶೀಘ್ರ ತೆರವುಗೊಳಿಸುವ ಭರವಸೆ ನೀಡಿದರು. ಕ.ರಾ.ರ.ಸಾ.ಸಂಸ್ಥೆಯ ಚೀಫ್ ಇಂಜಿನಿಯರ್ ಜಗದೀಶ್ ಮಾತನಾಡಿದರು. ಸಂಸ್ಥೆಯ ಅಭಿಯಂತರ ನಾಗರಾಜ್, ಕೋಲಾರ ಕ.ರಾ.ರ.ಸಾ.ಸಂಸ್ಥೆಯ ಜಿಲ್ಲಾಧಿಕಾರಿ ಲಿಂಗರಾಜ್, ಲೋಕೋಪಯೋಗಿ ಎಇಇ ಬಸವರಾಜ್, ಪುರಸಭೆ ಅಭಿಯಂತರ ಮಂಜುನಾಥ್, ಮುಖಂಡರಾದ ರಾಮಚಂದ್ರ, ಪ್ರದೀಪ್ ರೆಡ್ಡಿ, ಹೊಸಕೋಟೆ ರಮೇಶ್ ಇದ್ದರು.

ಸಿ.ಎಂ.ಮುನಿಯಪ್ಪ ಚೇತರಿಕೆ
ಕೋಲಾರ: ಹಿರಿಯ ದಲಿತ ಮುಖಂಡ ಹಾಗೂ ಸಂಚಿಕೆ ಪತ್ರಿಕೆ ಸಂಪಾದಕ ಸಿ.ಎಂ.ಮುನಿಯಪ್ಪ ಅವರು ಮೇ 15ರಂದು ಲಘು ಹೃದಯಾಘಾತಕ್ಕೊಳಗಾಗಿ ನಗರ ಹೊರವಲಯದ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈಗ ಚೇತರಿಸಿಕೊಂಡಿದ್ದಾರೆ. ಇನ್ನು ಎರಡುಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಲಿದ್ದಾರೆಂದು ಅವರ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.