ಕೋಲಾರ

ಲೋಕಾಯುಕ್ತರ ಅಹವಾಲು ಸಭೆಗೆ ನೀರಸ ಪ್ರತಿಕ್ರಿಯೆ

Published On :

ಬಂಗಾರಪೇಟೆ: ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸುವ ಸಲುವಾಗಿ ಪಟ್ಟಣದ ತಾಪಂ ಕಚೇರಿ ಆವರಣದಲ್ಲಿ ಜಿಲ್ಲಾ ಲೋಕಾಯುಕ್ತ ಪೊಲೀಸರು ಸಭೆಯನ್ನು ಆಯೋಜಿಸಿದ್ದರು. ಆದರೆ ಸಭೆ ಬಗ್ಗೆ ಮಾಹಿತಿ ಹಾಗೂ ಪ್ರಚಾರದ ಕೊರತೆಯಿಂದಾಗಿ ಕೇವಲ ಬೆರಳೆಣಿಕೆಷ್ಟು ದೂರುಗಳು ಮಾತ್ರ ಸಲ್ಲಿಕೆಯಾಗಿದ್ದು ಲೋಕಾಯುಕ್ತ ಪೊಲೀಸರ ಅಸಮಾಧಾನಕ್ಕೆ ಕಾರಣವಾಯಿತು.
ಮೂರು ತಿಂಗಳಿಗೊಮ್ಮೆ ಪಟ್ಟಣದಲ್ಲಿ ಜಿಲ್ಲಾ ಲೋಕಾಯುಕ್ತ ಪೊಲೀಸರು ಸಭೆ ಕರೆದು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುತ್ತಾರೆ. ಆದರೆ ಪ್ರಚಾರ ಕೊರತೆಯ ಹಿನ್ನೆಲೆಯಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಸಾಕಷ್ಟು ಸಂಖ್ಯೆಯಲ್ಲಿ ಭಾಗವಹಿಸಿರಲಿಲ್ಲ.
ಗುರುವಾರ ಸಹ ಜಿಲ್ಲಾ ಲೋಕಾಯುಕ್ತ ಡಿವೈಎಸ್ಪಿ ರಾಮಮೂರ್ತಿ ನೇತೃತ್ವದಲ್ಲಿ ಅಧಿಕಾರಿಗಳು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವಿಕರಿಸಲು ಸಭೆ ನಡೆಸಿದರು. ಮೂರು ಗಂಟೆಗಳ ಕಾಲ ಕಾದರೂ ಬಂದಿದ್ದು ಮಾತ್ರ 6 ದೂರುಗಳು ಮಾತ್ರ. ಅದರಲ್ಲಿ ಮೂರು ಪುರಸಭೆ ಮತ್ತು ಮೂರು ತಾಪಂ ವಿರುದ್ಧ.
ಪುರಸಭೆಯ ವ್ಯಾಪ್ತಿಯಲ್ಲಿ ನಿವೇಶನ ನೀಡಲು ಕಾಯ್ದಿಟ್ಟ ಜಾಗವನ್ನು ಪ್ರಭಾವಿಗಳು ಮುಂದಾಗಿದ್ದಾರೆ. ಇದನ್ನು ತಡೆಯಬೇಕೆಂದು ಆಶ್ರಯ ಸಮಿತಿಯ ಮಾಜಿ ಸದಸ್ಯ ಸುಗೇಂದ್ರನ್ ಅವರು ಈ ಹಿಂದೆ ಅನೇಕ ಬಾರಿ ಲೋಕಾಯುಕ್ತರಿಗೆ ದೂರು ನೀಡಿದ್ದರು. ಆದರೆ, ಈ ಬಗ್ಗೆ ಯಾವುದೇ ಕ್ರಮವಾಗಿರಲಿಲ್ಲ. ಅವರು ಗುರುವಾರ ಮತ್ತೆ ಈ ವಿಷಯಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತರಿಗೆ ದೂರು ಸಲ್ಲಿಸಿದರು.
ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಲೋಕಾಯುಕ್ತರು, ಕೂಡಲೆ ಪುರಸಭೆ ಮುಖ್ಯಾಧಿಕಾರಿಯನ್ನು ಕರೆಸಿ, ಸರ್ಕಾರಿ ಜಾಗವನ್ನು ಗುರುತಿಸಿ ಬೌಂಡ್ರಿ ಹಾಕಬೇಕೆಂದು ತಾಕೀತು ಮಾಡಿದರು.
ನಂತರ ಲೋಕಾಯುಕ್ತ ಡಿವೈಎಸ್‌ಪಿ ರಾಮಮೂರ್ತಿ ಮಾತನಾಡಿದರು. ಸಭೆಯಲ್ಲಿ ತಹಸೀಲ್ದಾರ್ ಉಷಾ, ಸಿಐಗಳಾದ ವೆಂಕಟಾಚಲಪತಿ, ಅಶ್ವತ್ಥನಾರಾಯಣ,ಇಒ ಕೆ.ಎಸ್.ಭಟ್ ಸೇರಿದಂತೆ ಅನೇಕ ಅಧಿಕಾರಿಗಳು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.