ಹದಗೆಟ್ಟ ಚಿಂತಾಮಣಿ ಎಪಿಎಂಸಿ ಮಾರುಕಟ್ಟೆ
-ಎನ್.ಬಾಬು
ಚಿಂತಾಮಣಿ: ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಸ್ವಚ್ಛತೆಯಿಲ್ಲದೆ ಹದಗೆಟ್ಟು ಹೋಗಿದೆ.
ರೈತರು ಮತ್ತು ಸಾರ್ವಜನಿಕರು ಮಾರುಕಟ್ಟೆಗೆ ಬರಬೇಕಿದ್ದರೆ ಮೂಗಿ ಮುಚ್ಚಿಕೊಂಡು ಬರಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಮಾರುಕಟ್ಟೆಯ ಈ ದುಸ್ಥಿತಿಗೆ ಎಪಿಎಂಸಿ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳೇ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಈ ಮಾರುಕಟ್ಟೆಗೆ ದಿನ ನಿತ್ಯ ನೂರಾರು ರೈತರು ತಮ್ಮ ಉತ್ಪನ್ನಗಳನ್ನು ತರುತ್ತಾರೆ. ಆದರೆ ಸಮರ್ಪಕ ನಿರ್ವಹಣೆಯಿಂದಾಗಿ ಮಾರುಕಟ್ಟೆ ಕೊಳೆತ ತೊಟ್ಟಿಯಾಗಿದೆ. ತರಕಾರಿಗಳು ಕೊಳೆತು ಮಳೆ ನೀರು ಸರಾಗವಾಗಿ ಹೋಗದೆ ದುರ್ವಾಸನೆ ಬೀರುತ್ತಿದೆ. ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದು ಗೊತ್ತಿದ್ದರೂ ಗುತ್ತಿಗೆದಾರರು ಹಾಗೂ ಅಧಿಕಾರಿಗಳು ಮಾತ್ರ ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ.
ಮಾರುಕಟ್ಟೆ ಇಷ್ಟೊಂದು ಕೆಟ್ಟು ಹೋಗಿದ್ದರೂ ಗುತ್ತಿಗೆದಾರ ರಮೇಶ್ ಮತ್ತು ಎಪಿಎಂಸಿ ಅಧಿಕಾರಿ ನಾಗರಾಜ್ ಅವರು ಕೇವಲ ನಾಮಕೇವಾಸ್ತೆಗೆ ಕೆಲಸ ಮಾಡುತ್ತಿರುವುದು ರೈತರು ಸಿಟ್ಟಾಗಲು ಕಾರಣವಾಗಿದೆ. ಮಾರುಕಟ್ಟೆ ಸ್ವಚ್ಛತೆಗಾಗಿ ಗುತ್ತಿಗೆದಾರರು ವರ್ಷಕ್ಕೆ 1.5 ಲಕ್ಷಕ್ಕೆ ಗುತ್ತಿಗೆ ಪಡೆದಿದ್ದಾರೆ. ಆದರೆ, ಕೆಲಸ ಮಾತ್ರ ಶೂನ್ಯ. ಮಾರುಕಟ್ಟೆ ಹಂದಿಗಳ ಗೂಡಾ ಮಾರ್ಪಟ್ಟಿದ್ದರೂ ಅಧಿಕಾರಿಗಳು ತುಟಿ ಪಿಟಿಕ್ ಎನ್ನುತ್ತಿಲ್ಲ. ಹೀಗಾಗಿ ಸ್ಥಳೀಯ ಎಪಿಎಂಸಿ ಕಾರ್ಯವೈಖರಿ ವಿರುದ್ಧ ಎಪಿಎಂಸಿ ಸದಸ್ಯರೂ ಕೂಡಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರೈತರು ಶ್ರಮದಿಂದ ರಾತ್ರಿ ಹಗಲು ಕಷ್ಟಪಟ್ಟು ದುಡಿದು ತರಕಾರಿಯನ್ನು ಮಾರುಕಟ್ಟೆಗೆ ತರುತ್ತಾರೆ. ಅವರು ವಿಶ್ರಾಂತಿ ಪಡೆಯಲು ತಂಗುದಾಣ, ಕುಡಿಯುವ ನೀರು, ಶೌಚಾಲಯ ಹಾಗೂ ಉಪಹಾರ ಕೇಂದ್ರಗಳು ಇದ್ದೂ ಇಲ್ಲದಂತಾಗಿವೆ.
ರೈತರ ಖಂಡನೆ: ಜಿಲ್ಲೆಯಲ್ಲಿಯೇ ಎಪಿಎಂಸಿ ಮಾರುಕಟ್ಟೆ ವಹಿವಾಟವೂ ಕೋಟ್ಯಾಂತರ ರುಪಾಯಿ ಲೆಕ್ಕದಲ್ಲಿ ನಡೆಯುತ್ತಿದೆ. ರೈತರಿಂದ ಯಾವುದೇ ದಲ್ಲಾಳಿಯನ್ನು ಪಡೆಯುವಂತಿಲ್ಲ ಎಂಬ ನಿಯಮವಿದ್ದರೂ ಹಲವು ದಲ್ಲಾಳಿಗಳು ರೈತರಿಗೆ ವಂಚಿಸಿ ಕಮೀಷನ್ ರೂಪದಲ್ಲಿ ಹಣವನ್ನು ಲೂಟಿ ಮಾಡುತ್ತಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ. ಇನ್ನು ಮುಂದಾದರೂ ಸಂಬಂಧಪಟ್ಟ ಎಪಿಎಂಸಿ ಅಧಿಕಾರಿಗಳು ಜನಪ್ರತಿನಿಧಿಗಳು ಇತ್ತ ಗಮನ ಹರಿಸಿ ಸ್ವಚ್ಛತೆ ಕಾಪಾಡಬೇಕಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

