ಕೋಲಾರ

ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಸಲು ಆಗ್ರಹ

Published On :

ಕೋಲಾರ: ಕಟ್ಟಡಗಳ ನಿರ್ಮಾಣ ಕಾರ್ಯದಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಕಾರ್ಮಿಕರ ಫೆಡರೇಷನ್ ಜಿಲ್ಲಾ ಗೌರವಾಧ್ಯಕ್ಷ ಹಾಗೂ ನಗರಸಭಾ ಸದಸ್ಯರಾದ ಗಾಂಧಿನಗರ ನಾರಾಯಣಸ್ವಾಮಿ ಆರೋಪಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಅವರು ಸುದ್ದಿಗಾರರ ಜತೆ ಮಾತನಾಡಿ, ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸಿಐಟಿಯು ನಡೆಸಿದ ಹೋರಾಟದ ಫಲದಿಂದಾಗಿ 2006ರಲ್ಲಿ ಮಂಡಳಿ ರಚನೆ ಆಗಿದೆ. ಸಾಕಷ್ಟು ಹಣ ಮಂೈಡಳಿಯಲ್ಲಿ ಇದ್ದರೂ ಕಟ್ಟಡ ಕಾರ್ಮಿಕರಿಗೆ ಸವಲತ್ತುಗಳನ್ನು ಕಲ್ಪಿಸಲು ಕಾರ್ಮಿಕ ಇಲಾಖೆಯ ಅಧಿಕಾರಿಗಳು ಮುಂದಾಗುತ್ತಿಲ್ಲ. ಸೌಲಭ್ಯಗಳಿಗಾಗಿ ಸಲ್ಲಿಸಿರುವ ಅರ್ಜಿಗಳನ್ನು ವಿಲೇವಾರಿ ಮಾಡಲು ವಿಳಂಬ ನೀತಿ ಅನುಸರಿಸುತ್ತಿದ್ದಾರೆಂದು ಅವರು ಟೀಕಿಸಿದರು.
ಮೇ 31 ರೊಳಗೆ ಬೇಡಿಕೆ ಈಡೇರಿಸದಿದ್ದರೆ ಜೂ.2ರಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು.
ಕಟ್ಟಡ ಕಾರ್ಮಿಕರ ಫೆಡರೇಷನ್ ಜಿಲ್ಲಾ ಕಾರ್ಯದರ್ಶಿ ಹೊನ್ನೇನಹಳ್ಳಿ ಯಲ್ಲಪ್ಪ ಮಾತನಾಡಿ, ಮೇಸ್ತ್ರಿ ನಾಗರಾಜಪ್ಪ ಅವರ ಮಗ ಪ್ರದೀಪ್ ಎಂಬಿಎ ಮುಗಿಸಿದ್ದು, ಈವರೆಗೆ ವಿದ್ಯಾಭ್ಯಾಸಕ್ಕೆ ಸಹಾಯಧನ ಮಂಜೂರು ಮಾಡಿಲ್ಲ ಎಂದು ಆರೋಪಿಸಿದರು.
ಸಂಘದ ಖಜಾಂಚಿ ಆನಂದ್, ಮಾದಮಂಗಲ ಶ್ರೀನಿವಾಸ್, ಕೃಷ್ಣಪ್ಪ, ನರಸಿಂಹರಾಜು, ಹೊನ್ನೇನಹಳ್ಳಿ ನಾಗರಾಜ, ಮೇಸ್ತ್ರಿ ನಾಗರಾಜಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.