ಬರ ಹಿನ್ನೆಲೆ: ಕೆಂಪೇಗೌಡರ ಜಯಂತಿ ಸರಳ ಆಚರಣೆ
ಕೋಲಾರ: ಜಿಲ್ಲೆಯಲ್ಲಿ ಬರಗಾಲ ಇರುವುದರಿಂದ ಜೂ.14 ರಂದು ನಾಡಪ್ರಭು ಕೆಂಪೇಗೌಡರ 504ನೇ ಜಯಂತಿಯನ್ನು ಸರಳವಾಗಿ ಆಚರಿಸುವ ಮೂಲಕ ಶಾಶ್ವತ ನೀರಾವರಿಗಾಗಿ ಸರ್ಕಾರವನ್ನು ಒತ್ತಾಯಿಸುವುದಾಗಿ ಕೋಲಾರ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಹಾಗೂ ಹಿರಿಯ ವಕೀಲರಾದ ಕೆ.ವಿ.ಶಂಕರಪ್ಪ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಅವರು, ಜೂ.14ರಂದು ಬೆಳಿಗ್ಗೆ 9 ಗಂಟೆಗೆ ನಗರದ ಪ್ರವಾಸಿ ಮಂದಿರದಿಂದ ಮೆರವಣಿಗೆ ಪ್ರಾರಂಭವಾಗಲಿದೆ. ಮೆರವಣಿಗೆಯಲ್ಲಿ ಪಲ್ಲಕ್ಕಿಗಳು, ಸ್ಥಬ್ದ ಚಿತ್ರಗಳು, ಜಾನಪದ ಕಲಾ ಪ್ರಕಾರಗಳು ಭಾಗವಹಿಸಲಿವೆ. ರಾಜ ಬೀದಿಗಳಲ್ಲಿ ಡೊಳ್ಳು ಕುಣಿತ, ವಾದ್ಯ, ತಮಟೆ, ಮೇಳಗಳೊಂದಿಗೆ ಮೆರವಣಿಗೆ ನಡೆಸಿ ಕೆಂಪೇಗೌಡರ ಜಯಂತೋತ್ಸ ಆಚರಿಸಲಾಗುವುದು ಎಂದರು. ಅಂದು ಸಂಜೆ 4.30ಕ್ಕೆ ನಗರದ ಟಿ.ಚೆನ್ನಯ್ಯ ರಂಗಮಂದಿರದಲ್ಲಿ ಸಮಾವೇಶ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆಯಲಿದೆ. ಪಕ್ಷಭೇದ ಮರೆತು ಎಲ್ಲ ಮುಖಂಡರು ಭಾಗವಹಿಸಲಿದ್ದಾರೆ.
ವಿಶೇಷವಾಗಿ ಬೆಂಗಳೂರಿನ ರಾಜ್ಯ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ಮುಖ್ಯ ಅತಿಥಿಗಳನ್ನಾಗಿ ಆಹ್ವಾನಿಸಲಾಗಿದೆ. ನೂತನವಾಗಿ ರಾಜ್ಯ ಒಕ್ಕಲಿಗರ ಸಂಘಕ್ಕೆ ನಿರ್ದೇಶಕರಾಗಿ ಆಯ್ಕೆಯಾಗಿರುವ ವಕ್ಕಲೇರಿ ರಾಮು, ಯಲುವಳ್ಳಿ ರಮೇಶ್ ಹಾಗೂ ಡಾ. ಸತೀಶ್ ಅವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು. ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಶ್ರೀ ನಿರ್ಮಲಾನಂದನಾಥಸ್ವಾಮಿಅವರು ತಾಲೂಕಿನ ಸೀಸಂದ್ರದಲ್ಲಿ ಜೂ.3ರ ಬೆಳಿಗ್ಗೆ 9 ಗಂಟೆಗೆ ಒಕ್ಕಲಿಗ ಸಮುದಾಯದ ಶಿಕ್ಷಣ ಸಂಸ್ಥೆಗೆ ಶಿಲಾನ್ಯಾಸ ನೆರವೇರಿಸುವರು ಎಂದರು.
ಬಿಸ್ಸೇಗೌಡ, ವೆಂಕಟರಾಮೇಗೌಡ, ಡಾ. ಮೌನಿ, ಡಾ. ವೆಂಕಟಚಲ, ಕೃಷ್ಣರೆಡ್ಡಿ, ಕೃಷ್ಣಪ್ಪ, ಕೆ.ವಿ.ನಾರಾಯಣಸ್ವಾಮಿ, ಎಚ್.ರಾಮಚಂದ್ರಪ್ಪ, ಹೊದಲವಾಡಿ ವೆಂಕಟೇಶಪ್ಪ, ಮುರಳಿಗೌಡ, ಮುನಿವೆಂಕಟಪ್ಪ, ವೀರಾವೆಂಕಟಪ್ಪ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

