1150 ಅಕ್ರಮ ಅಕ್ಕಿ ಮೂಟೆ ಜಪ್ತಿ
ಕೋಲಾರ: ಬೆಂಗಳೂರಿನಿಂದ ಬಂಗಾರಪೇಟೆ ಕಡೆಗೆ ಲಕ್ಷಾಂತರ ರು. ಬೆಲೆಬಾಳುವ ಪಡಿತರ ಅಕ್ಕಿಯನ್ನು ಅಕ್ರಮ ಸಾಗಾಣೆ ಮಾಡುತ್ತಿದ್ದ ಜಾಲವೊಂದನ್ನು ಆಹಾರ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಿ ಸುಮಾರು 1150 ಅಕ್ಕಿ ಮೂಟೆಗಳನ್ನು ಮೂರು ಲಾರಿಗಳ ಸಮೇತ ವಶಪಡಿಸಿಕೊಂಡಿದ್ದಾರೆ.
ಅಕ್ಕಿ ಅಕ್ರಮ ಸಾಗಾಣೆ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪನಿರ್ದೇಶಕಿ ಗಿರಿಜಾದೇವಿ ಹಾಗೂ ಸಿಬ್ಬಂದಿ ನಗರ ಹೊರವಲಯದ ಬಂಗಾರಪೇಟೆ ಬೈಪಾಸ್ ಬಳಿ ಹೊಂಚು ಹಾಕಿ ಅಕ್ಕಿ ತುಂಬಿದ್ದ ಮೂರು ಲಾರಿಗಳು ಒಂದರ ಹಿಂದೆ ಒಂದರಂತೆ ಬರುತ್ತಿದ್ದಾಗ ಲಾರಿಗಳನ್ನು ಅಡ್ಡಗಟ್ಟಿ ದಾಖಲೆಗಳನ್ನು ನೀಡುವಂತೆ ಚಾಲಕರನ್ನು ಕೇಳಿದ್ದಾರೆ. ಇದರಿಂದ ಗಾಬರಿಗೊಂಡ ಚಾಲಕರು ವಾಹನಗಳನ್ನು ಬಿಟ್ಟು ಪರಾರಿಯಾಗಿದ್ದಾರೆ.
ಈ ವಾಹನಗಳನ್ನು ತಪಾಸಣೆ ಮಾಡಲಾಗಿ ಅದರಲ್ಲಿ ಅಕ್ಕಿ ಮೂಟೆಗಳು ಕಂಡುಬಂದವು. ಇದಕ್ಕೆ ಸಂಬಂಧಿಸಿದ ದಾಖಲೆಗಳು ಇಲ್ಲದ ಕಾರಣ ಇವು ಪಡಿತರ ಅಕ್ಕಿ ಇರಬಹುದೆಂದು ಶಂಕಿಸಿ ಮಾಲು ಸಮೇತ ವಾಹನಗಳನ್ನು ವಶಕ್ಕೆ ಪಡೆದು ಪೊಲೀಸ್ ಬಂದೋಬಸ್ತ್ನಲ್ಲಿ ಆಹಾರ ಇಲಾಖಾ ಕಚೇರಿ ಮುಂದೆ ನಿಲ್ಲಿಸಿ ತನಿಖೆ ಮುಂದುವರೆಸಲಾಗಿದೆ. ಈ ಅಕ್ಕಿಯನ್ನು ಎಲ್ಲಿಂದ ಸಾಗಾಣೆ ಮಾಡಲಾಗಿತ್ತು, ಎಲ್ಲಿಗೆ ಕೊಂಡೊಯ್ಯಲಾಗುತ್ತಿತ್ತು ಎಂಬುದನ್ನು ತಿಳಿಯಲು ಇಲಾಖೆಯ ಅಧಿಕಾರಿಗಳು ಮತ್ತು ಪೊಲೀಸರು ತನಿಖೆ ಕೈಗೊಂಡಿದ್ದಾರೆಂದು ಆಹಾರ ಇಲಾಖೆಯ ಅಧಿಕಾರಿ ಗಿರಿಜಾದೇವಿ ತಿಳಿಸಿದ್ದಾರೆ.
ಈ ದಾಳಿಯಲ್ಲಿ ಆಹಾರ ನಿರೀಕ್ಷಕರಾದ ಸುಬ್ರಮಣಿ, ವೆಂಕಟಲಕ್ಷ್ಮೀ, ಶ್ರೀನಿವಾಸ್ ಹಾಗೂ ಶಿರಸ್ತೇದಾರ್ ನಾಗರಾಜ್ ಕೆಳಗಿನ ಮನೆ ಭಾಗವಹಿಸಿದ್ದರು.
ಅಕ್ಕಿ ಮೂಟೆಗಳ ವಿಚಾರದಲ್ಲಿ ಮತ್ತಷ್ಟು ತನಿಖೆ ನಡೆಸುವ ಅಗತ್ಯವಿದೆ ಎಂದು ಭಾವಿಸಿರುವ ಜಿಲ್ಲಾಧಿಕಾರಿ ಡಿ.ಕೆ.ರವಿ ಅವರು ಶುಕ್ರವಾರ ಸಂಜೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮುಂದಿನ ಕಾರ್ಯಾಚರಣೆ ಬಗ್ಗೆ ಮಾರ್ಗದರ್ಶನ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

