ಎಬಿವಿಪಿ ಮೇಲಿನ ಹಲ್ಲೆ: ಪ್ರತಿಭಟನೆ

Updated on: 

ಕೊಪ್ಪಳ: ಬಳ್ಳಾರಿಯ ಕಾಲೇಜೊಂದರ ವಿದ್ಯಾರ್ಥಿ ವಸತಿ ನಿಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಖಂಡಿಸಿ ಎಬಿವಿಪಿ ಬಳ್ಳಾರಿ ಬಂದ್‌ಗೆ ಕರೆ ನೀಡಿ ಪ್ರತಿಭಟನೆ ಮಾಡುವ ವೇಳೆ ಪೊಲೀಸರು ಕಾರ್ಯಕರ್ತರನ್ನು ಹಿಗ್ಗಾಮುಗ್ಗ ಥಳಿಸಿದ್ದಲ್ಲದೆ ಹಲ್ಲೆ ಮಾಡಿದ್ದಾರೆ. ಕೂಡಲೇ ಹಲ್ಲೆ ಮಾಡಿದ ಪೊಲೀಸರನ್ನು ಸೇವೆಯಿಂದ ಅಮಾನತು ಮಾಡಬೇಕು ಎಂದು ಒತ್ತಾಯಿಸಿ ಕೊಪ್ಪಳ ನಗರದ ಎಬಿವಿಪಿ ಶನಿವಾರ ಪ್ರತಿಭಟನೆ ನಡೆಸಿತು.
ಪ್ರತಿಭಟನೆಯಲ್ಲಿ ಎಬಿವಿಪಿ ಕಾರ್ಯಕರ್ತರು ಸೇರಿದಂತೆ ಐಟಿಐ ಕಾಲೇಜು ವಿದ್ಯಾರ್ಥಿಗಳು ಭಾಗಿವಹಿಸಿದ್ದರು. ಈ ವೇಳೆ ಮಾತನಾಡಿದ ಹಲವರು, ಎಬಿವಿಪಿ ಕಾರ್ಯಕರ್ತರನ್ನು ಹಿಗ್ಗಾಮುಗ್ಗ ಥಳಿಸಿ ಕೆಲ ಕಾರ್ಯಕರ್ತರ ಮೇಲೆ ಮೊಕದ್ದಮೆ ದಾಖಲಿಸಿದ್ದಾರೆ. ಇದು ಪ್ರಜಾಪ್ರಭುತ್ವವನ್ನು ಹತ್ತಿಕ್ಕಿದಂತೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಳ್ಳಾರಿ ಎಸ್‌ಪಿ ಆದೇಶದ ಮೇರೆಗೆ ಪೊಲೀಸ್ ಸಿಬ್ಬಂದಿ ಪ್ರತಿಭಟನಾ ನಿರತ ಕಾರ್ಯಕರ್ತರನ್ನು ಥಳಿಸಿದ್ದಾರೆ. ಇದಕ್ಕೆ ನೇರವಾಗಿ ಎಸ್‌ಪಿ ಅವರೇ ಹೊಣೆಯಾಗಿದ್ದಾರೆ. ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ ಪೋಲಿಸರನ್ನು ಈ ಕೂಡಲೇ ಅಮಾನತು ಮಾಡಬೇಕೆಂದು ಆಗ್ರಹಿಸಿದರು.
ಅಮಿತ್ ಕಾಂಬ್ಳೆಕರ್, ನರೇಂದ್ರ ಕುಲಕರ್ಣಿ, ಶ್ರೀಕಾಂತ, ಗವಿ ಜಂತಗಲ್, ಶ್ರೀಕಾಂತ ಪಾಟೀಲ್, ಮೌನೇಶ ಕಮ್ಮಾರ, ನಗರ ಕಾರ್ಯದರ್ಶಿ ರಾಕೇಶ ಪಾನಂಘಂಟಿ ಮತ್ತಿತರು ಭಾಗವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com