ಖಾತ್ರಿ ಅಕ್ರಮ ತನಿಖೆಗೆ ಒತ್ತಾಯಿಸಿ ಪ್ರತಿಭಟನೆ
ಕೊಪ್ಪಳ: ತಾಲೂಕಿನ ಬಹದ್ದೂರು ಬಂಡಿ ಗ್ರಾಮ ಪಂಚಾಯ್ತಿ ಖಾತ್ರಿ ಕೆಲಸ ತನಿಖೆ ವಿಳಂಬ ಖಂಡಿಸಿ ಮತ್ತು ಗ್ರಾಮಕ್ಕೆ ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಒತ್ತಾಯಿಸಿ ಉದ್ಯೋಗ ಖಾತ್ರಿ ಹಾಗೂ ಬರ ಪರಿಹಾರ ಹೋರಾಟ ಸಮಿತಿ ಕೊಪ್ಪಳ ಘಟಕ ಗುರುವಾರ ನಗರದ ಅಶೋಕ ವೃತ್ತದಿಂದ ಜಿಲ್ಲಾಡಳಿತ ಭವನದ ವರಗೆ ಪ್ರತಿಭಟನಾ ಮೆರವಣಿಗೆ ನಡೆಸಿತು. ಜಿಲ್ಲೆಯಲ್ಲಿ ನಡೆಯುತ್ತಿರುವ ಉದ್ಯೋಗ ಖಾತ್ರಿ ಕಾಮಗಾರಿಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ. ಈ ಬಗ್ಗೆ ಹೋರಾಟ ಸಮಿತಿ ಈಗಾಗಲೇ ಅನೇಕ ಬಾರಿ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಹೋರಾಟ ನಡೆಸಿ ಡಿಸಿ ಅವರಿಗೆ ಮನವಿ ಮಾಡಿದೆ. ಆದರೆ, ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮೂರು ವರ್ಷದ ಖಾತ್ರಿ ಅಕ್ರಮವನ್ನು ಶೀಘ್ರ ತನಿಖೆ ನಡೆಸಬೇಕು. ಉದ್ಯೋಗ ಖಾತ್ರಿಯಲ್ಲಿ ಕೆಲಸ ಮಾಡಿದ ಎಲ್ಲರಿಗೂ ಕಾಲ ಕಾಲಕ್ಕೆ ವೇತನ ಪಾವತಿ ಮಾಡಬೇಕು ಎಂದು ಒತ್ತಾಯ ಮಾಡಿದರು. ಕೂಡಲೇ ಕುಡಿಯುವ ನೀರು ಪೂರೈಕೆ, ಗ್ರಾಮ ಸಭೆ ನಡೆಸಿ ವಸತಿ ಯೋಜನೆಗೆ ಫಲಾನುಭವಿಗಳನ್ನು ಆಯ್ಕೆ ಮಾಡಬೇಕು. ಇಲ್ಲವಾದರೆ ಹೋರಾಟ ಮಾಡಲಾಗುವುದು ಎಂದರು. ಕೆ.ಬಿ. ಗೋನಾಳ, ಬಸವರಾಜ ಕುರಿ, ಹನುಮೇಶ ಕವಿತಾಳ, ಬಸವರಾಜ ಬುನ್ನಟ್ಟಿ ಇತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

