ಕೊಪ್ಪಳ

ಜನಪರ ಯೋಜನೆ ರದ್ದಾಗಿಸುವ ಹುನ್ನಾರ

Published On :

ಗಂಗಾವತಿ: ಸರ್ಕಾರ ಜನಪರ ಕಾರ್ಯಕ್ರಮಗಳನ್ನು ರದ್ದು ಮಾಡುವ ಹುನ್ನಾರ ನಡೆಸಿದೆ ಎಂದು ಅಖಿಲ ಭಾರತ ಕೃಷಿ ಕೂಲಿಕಾರರ ಸಂಘದ ರಾಜ್ಯಾಧ್ಯಕ್ಷ ಪಿ. ರಾಮಯ್ಯ ಹೇಳಿದರು.
ನಗರದ ಬಸ್ ನಿಲ್ದಾಣ ಸಮೀಪದ ವೃತ್ತದಲ್ಲಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ 5ನೇ ರಾಜ್ಯ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದರು.
ಪ್ರಸ್ತುತ ಸರ್ಕಾರ ಜನಪರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸದೇ ರದ್ದು ಮಾಡಲು ಹೊರಟಿದ್ದು, ಇದಕ್ಕೆ ಪ್ರತಿಯಾಗಿ ಹೊಸ ಆರ್ಥಿಕ ಸುಧಾರಣೆ ನೀತಿ ಜಾರಿ ಮಾಡುವ ಯತ್ನದಲ್ಲಿದೆ ಎಂದು ದೂರಿದರು.
ಗ್ರಾಮೀಣ ಪ್ರದೇಶದಲ್ಲಿ ರೈತ, ಕಾರ್ಮಿಕ ವರ್ಗಕ್ಕೆ ಮೂಲಭೂತ ಸೌಕರ್ಯಗಳಿಗಾಗಿ ಕಮ್ಯೂನಿಷ್ಟ ಪಕ್ಷ ಸತತ ಹೋರಾಟ ನಡೆಸುತ್ತಿದೆ ಎಂದರು.
ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅಖಿಲ ಭಾರತ ಕೃಷಿ ಕೂಲಿಕಾರರ ಸಂಘದ ಪ್ರಧಾನ ಕಾರ್ಯದರ್ಶಿ ಎ. ವಿಜಯರಾಘವನ್,  ಕೇಂದ್ರ ಸರ್ಕಾರ ಹೊಸ ಆರ್ಥಿಕ ನೀತಿ ತರಲು ಸಿದ್ಧತೆ ನಡೆಸಿದೆ. ಇದರಿಂದ ಗ್ರಾಮೀಣ ಜನರಿಗೆ ತೊಂದರೆಯಾಗುತ್ತದೆ. ರಾಹುಲ್ ಗಾಂಧಿ ಪ್ರಧಾನಿಯಾಗಲು ಹೊರಟಿದ್ದಾರೆ. ಇದು ಅಸಾಧ್ಯ ಎಂದರು.
ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಉಪಾಧ್ಯಕ್ಷ ಜಿ.ಎನ್. ನಾಗರಾಜ ಮಾತನಾಡಿ, ಪ್ರಸ್ತುತ ಸರ್ಕಾರದಲ್ಲಿರುವ ಮಂತ್ರಿಗಳು ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸದೇ ಕುರ್ಚಿಗಾಗಿ ಕಿತ್ತಾಡುತ್ತಿದ್ದಾರೆ. ಅವರಿಗೆ ಕಾರ್ಮಿಕರ ಹಿತಕ್ಕಿಂತ ಅಧಿಕಾರವೇ ಮುಖ್ಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಕುಡಿಯುವ ನೀರು, ವಿದ್ಯುತ್ ಸಮಸ್ಯೆ ತಾಂಡವವಾಡುತ್ತಿರುವ ಸಂದರ್ಭದಲ್ಲಿ ಸರ್ಕಾರ ಕಾಳಜಿ ವಹಿಸಿದೇ ಕಣ್ಣುಮುಚ್ಚಿ ಕುಳಿತುಕೊಂಡಿದೆ ಎಂದರು.
ಮೆರವಣಿಗೆ: ಗಂಗಾವತಿಯಲ್ಲಿ ರಾಜ್ಯ ಕೃಷಿ ಕೂಲಿಕಾರರ 5ನೇ ರಾಜ್ಯ ಸಮ್ಮೇಳನದ ಅಂಗವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಬೃಹತ್ ಮೆರವಣಿಗೆ ಜರುಗಿತು. ಸಿಬಿಎಸ್ ವೃತ್ತದಿಂದ ಆರಂಭಗೊಂಡ ಮೆರವಣಿಗೆ ಬಸ್ ನಿಲ್ದಾಣದವರೆಗೆ ಜರುಗಿತು. ರಾಜ್ಯದ ವಿವಿಧ ಜಿಲ್ಲೆಗಳ ನೂರಾರು ಕಾರ್ಮಿಕರು ಭಾಗವಹಿಸಿದ್ದರು.
 ಚಂದ್ರಪ್ಪ ಹೊಸಕೇರಾ, ಕೆ.ಹುಸನಪ್ಪ ಇದ್ದರು. ಸಂಘದ ಅಧ್ಯಕ್ಷ ನಿತ್ಯಾನಂದಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಜಿ. ನಾಗರಾಜ್ ಸ್ವಾಗತಿಸಿದರು, ಕೆ. ಹುಸೇನಪ್ಪ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.