ಕೊಪ್ಪಳ

ಸಮುದಾಯ ಭವನ ಪೂರ್ಣಗೊಳಿಸಿ

Published On :

ಯಲಬುರ್ಗಾ: ತಾಲೂಕಿನ ಹಿರೇವಡ್ರಕಲ್ ಗ್ರಾಮದಲ್ಲಿ ಅರ್ಧಕ್ಕೆ ನಿಂತಿರುವ ಸಮುದಾಯ ಭವನ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಬಳಕೆಗೆ ಒದಗಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಸುವರ್ಣ ಗ್ರಾಮೋದಯ ಯೋಜನೆ ಅಡಿ ಮಂಜೂರಾಗಿರುವ ಈ ಸಮುದಾಯ ಭವಟ್ದ ಕಾಮಗಾರಿ ಬೇಸ್‌ಮೆಂಟ್ ವರೆಗೆ ಮಾತ್ರ ಆಗಿದೆ. ಅದೂ ಕಳಪೆಯಾಗಿದೆ. ಸರ್ಕಾರ ನಿಗದಿಪಡಿಸಿದ ಗುಣಮಟ್ಟದಲ್ಲಿ ಸಿದ್ಧಗೊಳ್ಳದೆ ಕಾಟಾಚಾರದ ಕೆಲಸ ಮಾಡಲಾಗುತ್ತಿದೆ. ಬಳಸಿರುವ ಇಟ್ಟಿಗೆಗಳು ನೀರಿನಲ್ಲಿ ಕರಗಿ ಹೋಗುತ್ತಿದ್ದು, ಕಳಪೆಯಾಗಿವೆ. ಇದರಿಂದ ಸಮುದಾಯ ಭವನದ ಗೋಡೆ ಗಟ್ಟಿಯಾಗಲ್ಲ. ಬೇಗನೆ ಬಿರುಕು ಬಿಟ್ಟು ಅವನತಿಗೆ ಕಾರಣವಾಗುತ್ತದೆ. ಅಧಿಕಾರಿಗಳು ಗಮನ ಹರಿಸಬೇಕೆಂದು ಆಗ್ರಹಿಸಿದ್ದಾರೆ.
ನಾಲ್ಕನೇ ಹಂತದಲ್ಲಿ ಮಂಜೂರಾಗಿದ್ದ ಸಮುದಾಯ ಭವನ ಮತ್ತೊಂದು ಹಂತದ ಅನುಷ್ಠಾನಕ್ಕೆ ಸಿದ್ಧತೆ ನಡೆದಿದೆ. ಆದರೆ ಹಳೆಯ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳು ಮುಂದೆ ಬರುತ್ತಿಲ್ಲ. ಜನಪ್ರತಿನಿಧಿಗಳ ನಿರ್ಲಕ್ಷ್ಯವೂ ವಿಳಂಬಕ್ಕೆ ಕಾರಣ ಎಂದು ದೂರಿದ್ದಾರೆ. ಇನ್ನಾದರೂ ಬೇಗನೆ ಕಾಮಗಾರಿ ಮುಗಿಸಬೇಕೆಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.