ತುರ್ತು ಚಿಕಿತ್ಸೆಗೆ ಆದ್ಯತೆ
ಕೊಪ್ಪಳ: ರಾಜ್ಯಾದ್ಯಂತ ವಿವಿಧ ಬೇಡಿಕೆ ಈಡೇರಿಕೆಗಾಗಿ ವೈದ್ಯರು ನಡೆಸುತ್ತಿರುವ ಪ್ರತಿಭಟನೆ ಕೊಪ್ಪಳ ಜಿಲ್ಲೆಯಲ್ಲೂ ಮುಂದುವರಿದೆ. ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ಕೇವಲ ತುರ್ತು ಘಟಕದ ರೋಗಿಗಳಿಗೆ ಮಾತ್ರ ಚಿಕಿತ್ಸೆ ನೀಡಲಾಗುತ್ತಿದೆ. ನಗರದ ಜಿಲ್ಲಾಸ್ಪತ್ರೆಯಲ್ಲಿ ಕೇವಲ ಮೂವರೇ ವೈದ್ಯರು ಕಾರ್ಯ ನಿರ್ವಹಿಸುತ್ತಿದ್ದು, ನರ್ಸ್ಗಳೇ ಚಿಕಿತ್ಸೆ ನೀಡುತ್ತಿದ್ದಾರೆ. ಇನ್ನೊಂದೆಡೆ ಖಾಸಗಿ ಆಸ್ಪತ್ರೆಗಳು ರೋಗಿಗಳಿಂದ ತುಂಬಿ ತುಳುಕುತ್ತಿವೆ.
ಸೇತುವೆಯಿಂದಬಿದ್ದು ವ್ಯಕ್ತಿ ಸಾವು
ಯಲಬುರ್ಗಾ: ಸೇತುವೆಯಿಂದ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಭಾನುವಾರ ರಾತ್ರಿ ಪಟ್ಟಣದ ಕೊಪ್ಪಳ ರಸ್ತೆಗೆ ಹೊಂದಿಕೊಂಡಿರುವ ತಹಸೀಲ್ದಾರ್ ಕಚೇರಿ ಹತ್ತಿರ ನಡೆದಿದೆ. ಸಾವಿಗೀಡಾದ ವ್ಯಕ್ತಿಯನ್ನು ರೋಣ ತಾಲೂಕಿನ ತೋಟಗಂಟಿ ಗ್ರಾಮದ ನಿವಾಸಿ ರೇಣುಕನಗೌಡ ಯಲ್ಲಪ್ಪ ಬೂದಿಹಾಳ (60) ಎಂದು ಗುರುತಿಸಲಾಗಿದೆ. ಈತ ಕುಡಿದ ಅಮಲಿನಲ್ಲಿ ಸೇತುವೆ ಮೇಲೆ ಮಲಗಿದ್ದ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪಿಎಸ್ಐ ಎಸ್.ಎಚ್. ಸತೀಶ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ. ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೇವಪ್ಪ ಬಡಿಗೇರ ನಿಧನ
ಕುಕನೂರು: ಸ್ಥಳೀಯ ಗ್ರಾಪಂ ಸದಸ್ಯೆ ಅನ್ನಪೂರ್ಣಾ ಬಡಿಗೇರ ಅವರ ಮಾವ, ವಿಶ್ವಕರ್ಮ ಸಮಾಜದ ಮುಖಂಡ ದೇವಪ್ಪ ಬಸಪ್ಪ ಬಡಿಗೇರ (72) ಸೋಮವಾರ ನಿಧನರಾಗಿದ್ದಾರೆ. ಅವರಿಗೆ ಮೂವರು ಪುತ್ರರು, ಅಪಾರ ಬಂಧುಗಳು ಇದ್ದಾರೆ. ದೇವಪ್ಪ ಬಡಿಗೇರ ನಿಧನಕ್ಕೆ ಶಾಸಕ ಈಶಣ್ಣ ಗುಳಗಣ್ಣವರ, ವಿಧಾನಪರಿಷತ್ ಸದಸ್ಯ ಹಾಲಪ್ಪ ಆಚಾರ, ಜೆಡಿಎಸ್ ಮುಖಂಡ ಪಂಪಾಪತಿ, ಮುಖಂಡರಾದ ದ್ಯಾಮಣ್ಣ ಜಮಖಂಡಿ, ಸಂಗಪ್ಪ ಕಾಟ್ರಳ್ಳಿ,ಬಿಜೆಪಿ ನಗರ ಘಟಕದ ಅಧ್ಯಕ್ಷ ದೇವಪ್ಪ ಸೋಬಾನದ, ಗ್ರಾಪಂ ಅಧ್ಯಕ್ಷೆ ನಾಗರತ್ನಾ ನಾಗಪ್ಪ ಕಲ್ಮನಿ, ಉಪಾಧ್ಯಕ್ಷೆ ಶಾರದಾ ಸಂಗಪ್ಪ ದಿವಟರ, ಸದಸ್ಯರಾದ ಪ್ರಕಾಶ ಬೋರಣ್ಣವರ, ರಾಮಣ್ಣ ಯಡ್ಡೋಣಿ, ಶಿವಪ್ಪ ಸಂಧಿಮನಿ, ಗಂಗಾಧರ ನಾರಾಯಣಿ, ದೇವಮ್ಮ ರಾಟಿಮನಿ, ಕಸಾಪ ಗೌರವ ಕೋಶಾಧ್ಯಕ್ಷ ಮೇಘರಾಜ ಜಿಡಗಿ, ವಿಶ್ವಕರ್ಮ ಸಮಾಜದ ಮುಖಂಡರು ಸಂತಾಪ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

