ಕೊಪ್ಪಳ

ಅತ್ಯಾಚಾರ ಎದುರಿಸಲು ಒಗ್ಗಟ್ಟಾಗಿ: ಸಂಘಮಿತ್ರಾ

Published On :

ಕನ್ನಡಪ್ರಭ ವಾರ್ತೆ, ಕೊಪ್ಪಳ, ಫೆ. 13
ದೆಹಲಿ ಯುವತಿ ಮೇಲೆ ಈಚೆಗೆ ನಡೆದ ಸಾಮೂಹಿಕ ಅತ್ಯಾಚಾರದ ಬಳಿಕ ದೇಶಾದ್ಯಂತ ಅನೇಕ ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಇದು ಕೇವಲ ಮಹಿಳೆ ಸಮಸ್ಯೆಯಲ್ಲ. ಸಾಮೂಹಿಕ ಸಮಸ್ಯೆಯಾಗಿದ್ದು, ಜನತೆಯಲ್ಲಿ ಜಾಗೃತಿ ಮೂಡಿಸಲು ಸಮೂಹ ಸಾಮರ್ಥ್ಯದೊಂದಿಗೆ ಮಹಿಳಾ ಒಕ್ಕೂಟಗಳು ಅತ್ಯಾಚಾರ ವಿರೋಧಿಸಿ ಜನತೆಯಲ್ಲಿ ಜಾಗೃತಿ ಮೂಡಿಸಲು ಎಳಿ ಎದ್ದೇಳಿ ಕುಣಿಯಿರಿ, ನಲಿಯಿರಿ ಎನ್ನುವ ವಾಕ್ಯದಿಂದ ಜಾಗೃತಿ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಸಮೂಹ ಸಾಮರ್ಥ್ಯದ ಮುಖ್ಯಸ್ಥೆ ಸಂಘಮಿತ್ರಾ ಹೇಳಿದರು.
ಕೊಪ್ಪಳ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ 13 ಸಾವಿರ ಸ್ಥಳಗಳಲ್ಲಿ ಬುಧವಾರ ಮಹಿಳೆಯರು ಸೇರಿ ಜಾಗೃತಿ ಮೂಡಿಸಲಾಗುತ್ತಿದೆ.
ಕುಣಿಯಿರಿ, ನಲಿಯಿರಿ ಎನ್ನುತ ಅತ್ಯಾಚಾರದ ವಿರುದ್ಧ ಶಾಂತಿಯ ಜಾಗೃತಿ ಕಾರ್ಯಕ್ರಮ ನಡೆಯುತ್ತವೆ. ಅದರಲ್ಲೂ ಐದು ಜಿಲ್ಲೆಗಳಾದ ಕೊಪ್ಪಳ, ಉತ್ತರ ಕನ್ನಡ, ಗದಗ, ರಾಯಚೂರು ಹಾಗೂ ಬೆಂಗಳೂರು ಜಿಲ್ಲೆಗಳಲ್ಲಿ ಏಕಕಾಲಕ್ಕೆ ಬುಧವಾರ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಜಾಗೃತಿ ಕಾರ್ಯಕ್ರಮಗಳಲ್ಲಿ ಹಾಡು, ನೃತ್ಯ, ನಾಟಕ ಮಾಡುವ ಮೂಲಕ ಅತ್ಯಾಚಾರ ಸಾಮೂಹಿಕ ಸಮಸ್ಯೆ ಎಂದು ಜನತೆಯಲ್ಲಿ ಅರಿವು ಮೂಡಿಸಲು, ವಿನೂತನ ಕಾರ್ಯಕ್ಕೆ ಮುಂದಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ ಈಗ ಸಾವಿರ ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ ಎಂದರು.
ಅಲ್ಲದೇ, ದೇಶದಲ್ಲಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ 10ನೇ ಸ್ಥಾನದಲ್ಲಿದ್ದು, ಅದರಲ್ಲಿ ಬೆಂಗಳೂರು ರಾಜ್ಯದಲ್ಲಿ 2ನೇ ಸ್ಥಾನದಲ್ಲಿದೆ. ಹೀಗಾಗಿ, ರಾಜ್ಯದಲ್ಲಿ ಕಳೆದ ವರ್ಷ 2 ಲಕ್ಷಕ್ಕೂ ಹೆಚ್ಚು ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳು ದಾಖಲಾಗಿವೆ. ಅದರಲ್ಲಿಯೇ 2012ರ ಅಂಕಿ-ಅಂಶಗಳ ಪ್ರಕಾರ ಒಂಭತ್ತು ಸಾವಿರಕ್ಕೂ ಹೆಚ್ಚು ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣ ದಾಖಲಾಗಿವೆ ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಪದಾಧಿಕಾರಿಗಳಾದ ಲಕ್ಷ್ಮೀ, ಬಸವರಾಜ ಗುಡೂರು ಹಾಗೂ ಸೋಮಶೇಖರ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.