ಕೊಪ್ಪಳ

ಸ್ತ್ರೀಗೆ ಸಮಾನ ಸ್ಥಾನ ನೀಡಿ

Published On :

ಯಲಬುರ್ಗಾ: ಸಬಲೆಯಾದ ಮಹಿಳೆ ಎಲ್ಲ ಕ್ಷೇತ್ರದಲ್ಲಿ ಸಮಾನ ಸ್ಥಾನ ಪಡೆಯಲು ಅರ್ಹಳಾಗಿದ್ದು, ಅದಕ್ಕೆ ಪೂರಕ ವಾತಾರಣ ನಿರ್ಮಿಸುವ ಹೊಣೆ ಸಮಾಜದ್ದು ಎಂದು ಸಾಹಿತಿ ಮುನಿಯಪ್ಪ ಹುಬ್ಬಳ್ಳಿ ಹೇಳಿದರು.
ನಗರದ ಕಿತ್ತೂರು ರಾಣಿ ಚನ್ನಮ್ಮ ಮಹಿಳಾ ಕಾಲೇಜಿನಲ್ಲಿ ಬುಧವಾರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸಿದ್ದ ಉಪನ್ಯಾಸ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸ್ತ್ರೀ ಅಡುಗೆ ಮನೆಗೆ ಸೀಮಿತವಲ್ಲ; ಸಮಾಜದ ಮುಖ್ಯವಾಹಿನಿಯ ಪ್ರಧಾನ ಬಿಂದು ಎಂದರು.
ಪ್ರಸ್ತುತ ಮಹಿಳೆಯನ್ನು ಕೀಳರಿಮೆಯಿಂದ ಕಾಣಲಾಗುತ್ತದೆ. ಅವಳನ್ನು ಯಂತ್ರದಂತೆ ದುಡಿಸಿಕೊಳ್ಳುವುದು, ಮಾನಸಿಕ, ದೈಹಿಕವಾಗಿ ಕಿರುಕುಳ ನೀಡುವುದು ನಡೆಯುತ್ತಲೇ ಇದೆ. ಅತ್ಯಾಚಾರ ಮಾಡಿ ಹತ್ಯೆಗೈಯ್ಯುವ ಹೀನಕೃತ್ಯಕ್ಕೆ ಅಸಂಖ್ಯಾತ ಮಹಿಳೆಯರು ಬಲಿಯಾಗುತ್ತಿರುವುದು ಪ್ರಜ್ಞಾವಂತ ಸಮಾಜ ತಲೆತಗ್ಗಿಸುವಂತಾಗಿದೆ. ಕಲೆ, ಸಂಗೀತ, ಸಾಹಿತ್ಯ ಮುಂತಾದ ರಂಗಗಳಲ್ಲಿ ಪುರುಷನಂತೆ ಮಹಿಳೆಯೂ ಸರಿಸಮಾನ ಸ್ಥಾನಮಾನ ಪಡೆಯುವ ಮೂಲಕ ಮಾದರಿಯಾಗಿದ್ದಾಳೆ ಎಂದರು.
ಉಪನ್ಯಾಸ ನೀಡಿದ ನಿಡಗುಂದಿ ಅನ್ನದಾನೇಶ್ವರ ಪ್ರೌಢಶಾಲೆ ವಿಜ್ಞಾನ ಶಿಕ್ಷಕ ಎಸ್.ವಿ. ಹಳ್ಳಿಕೇರಿ ಮಾತನಾಡಿ, ಗ್ರಾಮೀಣ ಪ್ರದೇಶದ ಮಹಿಳೆಯರು ತಮ್ಮನ್ನು ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಉನ್ನತ ಸಾಧನೆ ಮಾಡಿದ್ದಾರೆ. ಅವರ ತತ್ವಾದರ್ಶಗಳು ವಿದ್ಯಾರ್ಥಿನಿಯರು ಪಾಲಿಸಿ ಸಾಧನೆ ಮಾಡಲು ಪ್ರಯತ್ನಿಸಬೇಕೆಂದರು.
ಸನ್ಮಾನ ಸ್ವೀಕರಿಸಿದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ. ಶಿವರಾಜ ಗುರಿಕಾರ ಮಾತನಾಡಿ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಎಲೆಮರೆ ಕಾಯಿಯಾಗಿ ಉಳಿದ ಅನೇಕ ಸಾಧಕರನ್ನು ಜಿಲ್ಲಾ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕದವರು ಗುರುತಿಸಿ ಗೌರವಿಸುತ್ತಿರುವುದು ಶ್ಲಾಘನೀಯ. ಮಹಿಳೆಯರಿಗೆ ಉನ್ನತ ಶಿಕ್ಷಣ ದೊರಕಿಸಿಕೊಡುವಲ್ಲಿ ಸಮಾಜದ ಪ್ರಜ್ಞಾವಂತ ನಾಗರಿಕರು ಮುಂದೆ ಬರಬೇಕಿದೆ ಎಂದರು.
ಸಂಸ್ಥೆ ಆಡಳಿತ ಮಂಡಳಿ ನಿರ್ದೇಶಕ ಬಸವಲಿಂಗಪ್ಪ ಭೂತೆ ಅಧ್ಯಕ್ಷತೆ ವಹಿಸಿದ್ದರು. ರುದ್ರಪ್ಪ ಭಂಡಾರಿ, ಶರಣಪ್ಪ ಪಾಟೀಲ, ಕಸಾಪ ಜಿಲ್ಲಾಧ್ಯಕ್ಷ ವೀರಣ್ಣ ನಿಂಗೋಜಿ, ಪ್ರಾಚಾರ್ಯೆ ಸುಮಾ ಹುಲಿಕಂತಿಮಠ, ವೀರಣ್ಣ ತಮ್ಮಿನಾಳ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.