ಹೋರಾಟಕ್ಕೆ ಸಂದ ಜಯ

Updated on: 

ಕುಷ್ಟಗಿ: ಕೃಷ್ಣಾ ಬಿ ಸ್ಕೀಂ ಯೋಜನೆಗೆ ಸಂಬಂಧಿಸಿದಂತೆ ಕೊಪ್ಪಳ ಏತ ನೀರಾವರಿ ಯೋಜನೆ ಶಿಲಾನ್ಯಾಸವನ್ನು ರಾಜ್ಯದ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ನೇರವೇರಿಸಲಿದ್ದು, ಈ ಭಾಗದ ಹೋರಾಟ ಸಮಿತಿ ಹಾಗೂ ಜನತೆಯ ಹೋರಾಟಕ್ಕೆ ಸಿಕ್ಕ ಜಯವಾಗಿದೆ ಎಂದು ಮಾಜಿ ಶಾಸಕ ಕೆ.ಶರಣಪ್ಪ ಹಾಗೂ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಗಂಗಾಧರ ಕುಷ್ಟಗಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಈಗಾಗಲೇ ಟೆಂಡರ್ ಕರೆಯಲಾಗಿದ್ದು, ಈ ಭಾಗದ ರೈತರ ಬಹುದಿನಗಳ ಕನಸು ನನಸಾಗಿದೆ. ಶಿಲಾನ್ಯಾಸ ಕಾರ್ಯಕ್ರಮದಲ್ಲಿ ತಾಲೂಕಿನ ರೈತರು, ವಿವಿಧ ಸಂಘ ಸಂಸ್ಥೆಗಳ ಮುಖಂಡರು ಸ್ವಯಂ ಪ್ರೇರಣೆಯಿಂದ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com