ಬಾಲ ಕಾರ್ಮಿಕ ಪದ್ಧತಿ ತಡೆಗೆ ಜಾಗೃತಿ

Updated on: 

ಕುಷ್ಟಗಿ: ಬಾಲ ಕಾರ್ಮಿಕ ಪದ್ಧತಿ ತಡೆಯಲು ಸಾರ್ವಜನಿಕರ ಸಹಕಾರ ಹಾಗೂ ಜಾಗೃತಿ ಅಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಯಶವಂತ ಆರ್. ತಾವರೆ ಹೇಳಿದರು.
ಗುರುವಾರ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಅಂಗವಾಗಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಕಾರ್ಮಿಕ ಇಲಾಖೆ, ಪೊಲೀಸ್, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ, ಮಕ್ಕಳ ಸಂರಕ್ಷಣಾ ಇಲಾಖೆ ಹಾಗೂ ಯುನಿಸೆಫ್ ಕೊಪ್ಪಳ ಸಂಯುಕ್ತಾಶ್ರಯದಲ್ಲಿ ನಡೆದ ಕಾನೂನು ಸಾಕ್ಷರತಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರಧಾನ ಸಿವಿಲ್ ನ್ಯಾಯಾಧೀಶ ಆರ್. ನಟೇಶ ಮಾತನಾಡಿ, ಬಾಲ ಕಾರ್ಮಿಕ ಪದ್ಧತಿ ಬರಿ ದಿನಾಚರಣೆಗೆ ಮಾತ್ರ ಸಿಮೀತವಾಗದೆ ಕಾರ್ಯ ರೂಪಕ್ಕೆ ಬರುವಂತಾಗಬೇಕು ಎಂದು ಹೇಳಿದರು.
ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಮಹಾಲಿಂಗಪ್ಪ ದೋಟಿಹಾಳ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಹಸೀಲ್ದಾರ್ ಟಿ.ಜಿ. ಚಂದ್ರಶೇಖರ, ಶಿಶು ಅಭಿವೃದ್ಧಿ ಅಧಿಕಾರಿ ಶಿವರುದ್ರಯ್ಯ, ಸಿಪಿಐ ಆರ್.ಎಸ್. ಉಜ್ಜನಕೊಪ್ಪ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಕುರಿತು ಮಾತನಾಡಿದರು. ಹಿರಿಯ ನ್ಯಾಯವಾದಿ ಆರ್.ಕೆ. ದೇಸಾಯಿ ಬಾಲ ಕಾರ್ಮಿಕ ತಡೆ ಕಾಯ್ದೆ ಕುರಿತು ಮಾತನಾಡಿದರು.
ಸ್ಥಳೀಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ಮಾಲಾ ಪಡಸಾಲಿಮಠ ಬಾಲ ಕಾರ್ಮಿಕರ ಹಕ್ಕುಗಳು, ತಾಲೂಕು ಯುನಿಸೆಫ್ ಸಂಯೋಜಕ ಶರಣಪ್ಪ ಡಿ. ಮಾದರ ದುಡಿಯುವ ಮಹಿಳೆ ಮತ್ತು ಬಾಲ ಕಾರ್ಮಿಕರು ಎನ್ನುವ ವಿಷಯದ ಕುರಿತು ಉಪನ್ಯಾಸ ಮಂಡಿಸಿದರು. ಸಿ.ಎನ್. ಉಪ್ಪಿನ ನಿರೂಪಿಸಿದರು.
ಎಸ್.ಎಸ್. ಪಾಟೀಲ ಸ್ವಾಗತಿಸಿದರು. ಡಿ.ಎಸ್. ಪಾಟೀಲ ವಂದಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com