ಮಳವಳ್ಳಿ: ವಿವಿಧ ಕ್ಷೇತ್ರಗಳಲ್ಲಿ ಕನ್ನಡ ನಾಡು- ನುಡಿಗೆ ಸೇವೆ ಸಲ್ಲಿಸಿದ ಹಿರಿಯ ಸಾಹಿತಿ ಮ. ಸಿ. ನಾರಾಯಣ್ ಅವರನ್ನು ಫೆ. 11 ರಂದು ಬಿಜಾಪುರದಲ್ಲಿ ನಡೆಯಲಿರುವ 79ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸನ್ಮಾನಕ್ಕೆ ಆಯ್ಕೆಯಾಗಿದ್ದಾರೆಂದು ಕಸಾಪ ಅಧ್ಯಕ್ಷ ಪುಂಡಲೀಕ ಹಾಲಂಬಿ ತಿಳಿಸಿದ್ದಾರೆ. ಪಟ್ಟಣದ ಹಿರಿಯ ಸಾಹಿತಿಗಳನ್ನು ಗುರುತಿಸಿ ಸನ್ಮಾನಕ್ಕೆ ಆಯ್ಕೆ ಮಾಡಿರುವುದನ್ನು ಪಟ್ಟಣದ ಪುರಸಭಾ ಮಾಜಿ ಅಧ್ಯಕ್ಷ ದೊಡ್ಡಯ್ಯ, ಸದಸ್ಯರಾದ ಭವಾನಿ, ಜಿಪಂ ಮಾಜಿ ಸದಸ್ಯ ಜಯರಾಜ್ ಸೇರಿದಂತೆ ಹಲವು ಮುಖಂಡರು ಅಭಿನಂದನೆ ಸಲ್ಲಿಸಿದ್ದಾರೆ.