ಮಂಡ್ಯ

'ಜನಸೇವೆ ಮಾಡುವವರಿಗೆ ನೈತಿಕ ಬೆಂಬಲ ಅಗತ್ಯ'

Published On :

ಕೆ.ಆರ್. ನಗರ: ಪ್ರಾಮಾಣಿಕವಾಗಿ ಸಾರ್ವಜನಿಕರ ಸೇವೆ ಮಾಡುವ ಚುನಾಯಿತ ಜನಪ್ರತಿನಿಧಿಗಳಿಗೆ ಮತದಾರರ ನೈತಿಕ ಬೆಂಬಲ ಅಗತ್ಯವಾಗಿದ್ದು, ಎಲ್ಲ ರಾಜಕಾರಣಿಗಳನ್ನು ಒಂದೆ ಅಳತೆಗೋಲಿನಿಂದ ನೋಡುವ ಪ್ರವೃತ್ತಿ ದೂರವಾಗಬೇಕು ಎಂದು ಶಾಸಕ ಸಾ.ರಾ. ಮಹೇಶ್ ಹೇಳಿದರು.
ತಾಲೂಕಿನ ಗಂಧನಹಳ್ಳಿ ಗ್ರಾಮದಲ್ಲಿ ಸುವರ್ಣಗ್ರಾಮ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಅನಗತ್ಯವಾಗಿ ಟೀಕೆ ಮಾಡುವವರು ತಾಲೂಕಿನಲ್ಲಿ ನಾಲ್ಕೂವರೆ ವರ್ಷಗಳ ಅವಧಿಯಲ್ಲಿ ಆಗಿರುವ ಅಭಿವೃದ್ಧಿ ಕೆಲಸಗಳ ದಾಖಲೆ ಪರಿಶೀಲಿಸಲಿ. ಅದು ಬಿಟ್ಟು ತೀಟೆ ರಾಜಕಾರಣ ಮಾಡುವವರಿಗೆ ನಾನು ಕ್ಯಾರೆ ಎನ್ನುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮತದಾರರ ಹಿತಕ್ಕೆ ಅನುಗುಣವಾಗಿ ನಾನು ನನ್ನ ಅಧಿಕಾರವನ್ನು ಸದುಪಯೋಗ ಪಡಿಸಿಕೊಂಡಿದ್ದೇನೆ. ನನ್ನ ಶಾಸಕತ್ವದ ಅವಧಿಯಲ್ಲಿ ಯಾರಿಂದಲೂ ನಯ್ಯಾ ಪೈಸೆ ಹಣ ಮುಟ್ಟಿಲ್ಲ. ಯಾರು ಏನೇ ಅಪ ಪ್ರಚಾರ ಮತ್ತು ಅನಗತ್ಯ ಟೀಕೆ ಮಾಡಿದರೂ ತಾಲೂಕಿನ ಮತದಾರರು ತಮ್ಮ ಕೈಹಿಡಿಯಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಶಾಸಕರು, ನಮ್ಮ ಪಕ್ಷದ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿ ಇಲ್ಲದಿದ್ದರೂ ಶಕ್ತಿ ಮೀರಿ ಅನುದಾನ ತಂದು ಕೆಲಸ ನಿರ್ವಹಿಸಿದ ತೃಪ್ತಿ ಇದೆ ಎಂದು ಅವರು ತಿಳಿಸಿದರು.
ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಮಾಡಲು ರಾಜಕೀಯ ಸಲ್ಲದು. ಚುನಾವಣಾ ಸಮಯದಲ್ಲಿ ಯಾರು ಯಾರಿಗೆ ಬೇಕಾದರೂ ಮತ ಹಾಕಬಹುದು. ಆದರೆ ಅಭಿವೃದ್ಧಿ ವಿಚಾರ ಬಂದಾಗ ಚುನಾಯಿತ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಪರಸ್ಪರ ಚರ್ಚಿಸಿ ಗ್ರಾಮಗಳಿಗೆ ಅಗತ್ಯವಿರುವ ಕಾಮಗಾರಿಗಳನ್ನು ಮಾಡಿಸಿಕೊಳ್ಳುವ ಜಾಣ್ಮೆಯನ್ನು ಬೆಳೆಸಿಕೊಳ್ಳಬೇಕೆಂದು ಸಾ.ರಾ. ಮಹೇಶ್ ಕಿವಿ ಮಾತು ಹೇಳಿದರು.
ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಜೆ. ದ್ವಾರಕೀಶ್, ತಾಪಂ ಸದಸ್ಯರಾದ ಭಾರತಿ ಮಹದೇವ್, ಮಹದೇವಸ್ವಾಮಿ, ಮೈಮುಲ್ ಮಾಜಿ ಅಧ್ಯಕ್ಷ ಎ.ಟಿ. ಸೋಮಶೇಖರ್, ಗ್ರಾಪಂ ಅಧ್ಯಕ್ಷೆ ಭಾಗ್ಯಮ್ಮ ರಾಮಕೃಷ್ಣೇಗೌಡ, ಉಪಾಧ್ಯಕ್ಷೆ ಸವಿತಾ ಮಹೇಶ್, ಶಿವಮ್ಮ, ಪ್ರಕಾಶ್, ಯೋಗರಾಜ್, ಚಿಕ್ಕೇಗೌಡ,  ಹೇಮಂತ್, ಮಂಜು, ನಂಜುಂಡೇಗೌಡ, ಜಯರಾಮಾಚಾರಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.