ಮಂಡ್ಯ

ನಾಳೆ ಆರೋಗ್ಯ ತಪಾಸಣಾ ಶಿಬಿರ

Published On :

ಮಂಡ್ಯ: ಜಿಲ್ಲೆಯ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬಗಳಿಗೆ  ವಾಜಪೇಯಿ ಆರೋಗ್ಯ ಶ್ರೀ ಯೋಜನೆಯಡಿ ಫೆ. 3 ರಂದು ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಕಲ್ಲು ಕಟ್ಟಡ ಆವರಣದಲ್ಲಿ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ.
ವಾಜಪೇಯಿ ಆರೋಗ್ಯ ಶ್ರೀ ಯೋಜನೆಯಡಿ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬದವರಿಗೆ ಹೃದ್ರೋಗ, ಕ್ಯಾನ್ಸರ್, ನರರೋಗ, ಮೂತ್ರಪಿಂಡದ ತೊಂದರೆ ಸುಟ್ಟಗಾಯ, ಅಪಘಾತ ಹಾಗೂ ನವಜಾತ ಶಿಶುಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಉಚಿತ ಶಸ್ತ್ರಚಿಕಿತ್ಸೆ ಸೌಲಭ್ಯ ದೊರೆಯತ್ತದೆ. ಶಿಬಿರದಲ್ಲಿ ರೋಗವನ್ನು ಪತ್ತೆ ಹಚ್ಚುವುದರಿಂದ ಕಾಯಿಲೆ ಗುಣವಾಗುವವರೆಗೆ ಎಲ್ಲಾ ಪರೀಕ್ಷೆ, ಚಿಕಿತ್ಸೆ, ಶಸ್ತ್ರಚಿಕಿತ್ಸೆ ಹಾಗೂ ಔಷಧಿಯ ಖರ್ಚು ಸರ್ಕಾರವೇ ಭರಿಸುತ್ತದೆ. ಒಂದು ಬಿಪಿಎಲ್ ಕುಟುಂಬದ 5 ಜನರಿಗೆ ಒಂದು ವರ್ಷಕ್ಕೆ 1.50 ಲಕ್ಷ ಚಿಕಿತ್ಸಾ ಸೌಲಭ್ಯ ದೊರೆಯಲಿದೆ. ವಿಶೇಷ ಪ್ರಕರಣಗಳಲ್ಲಿ ಅಗತ್ಯತೆ ಪರಿಶೀಲಿಸಿ ಹೆಚ್ಚುವರಿ 50 ಸಾವಿರ ನೀಡಲಾಗುವುದು. ಈ ಮೊತ್ತವು  ಕುಟುಂಬದ 5 ಜನರಿಗೆ ಸಲ್ಲುತ್ತದೆ.
ಪೂರ್ವಭಾವಿ ಸಭೆ: ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ವಾಜಪೇಯಿ ಆರೋಗ್ಯ ಶ್ರೀ ಯೋಜನೆ ಅನುಷ್ಠಾನ ಕುರಿತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಆರೋಗ್ಯ ಮೇಳದಲ್ಲಿ ತಾಪಾಸಣೆ ನಡೆಸಲು ವಿಕ್ರಂ ಆಸ್ಪತ್ರೆ, ಬಿಜಿಎಸ್ ಆಸ್ಪತ್ರೆ , ಕಾವೇರಿ ಫೋರ್ಟಿಸ್ ಆಸ್ಪತ್ರೆ, ಭಾರತ್ ಕ್ಯಾನ್ಸರ್ ಆಸ್ಪತ್ರೆ, ಜೆಎಸ್‌ಎಸ್ ಆಸ್ಪತ್ರೆ, ಮಲ್ಯ ಆಸ್ಪತ್ರೆ, ಸಾಗರ್ ಹಾಗೂ ಮಂಡ್ಯ ಜಿಲ್ಲಾ ಆಸ್ಪತ್ರೆಯವರು ಆಗಮಿಸುತ್ತಿದ್ದಾರೆ. ಕಾಲೇಜು ಕಟ್ಟಡದಲ್ಲಿ ವೈದ್ಯರಿಗೆ ತಾಪಾಸಣೆಗೆ ಬೇಕಾಗುವ ಅನುಕೂಲತೆ ಮಾಡಿಕೊಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಎನ್. ಕೃಷ್ಣಯ್ಯ ತಿಳಿಸಿದರು. ತಾಲೂಕುವಾರು ತಾಪಾಸಣೆಗೆ ಒಳಪಡುವ ಬಿಪಿಎಲ್ ಕುಟುಂಬ ವರ್ಗದವರ ಸಂಖ್ಯೆಯ ಮಾಹಿತಿ ತಾಲೂಕು ವೈದ್ಯಾಧಿಕಾರಿಗಳಿಂದ ಪಡೆದ ಜಿಲ್ಲಾಧಿಕಾರಿಗಳು ಈ ಆರೋಗ್ಯ ಮೇಳದಲ್ಲಿ ಅಂದಾಜು 2 ರಿಂದ 2500 ಜನರು ತಪಾಸಣೆಗೆ ಒಳಾಗಾಗಬಹುದು. ತಪಾಸಣೆಯ ಸಂದರ್ಭದಲ್ಲಿ ಆರೋಗ್ಯ ಮಿತ್ರರು ತಪಾಸಣೆಗೆ ಒಳಪಡುವವರ ಹೆಸರುಗಳನ್ನು ನೋಂದಾಯಿಸಿಕೊಂಡು ಅವರಿಗೆ ಸರಿಯಾದ ಮಾರ್ಗದರ್ಶನ ನೀಡುವುದು. ಜಿಲ್ಲೆಯ ವಿವಿಧ ಸ್ಥಳಗಳಿಂದ ರೋಗಿಗಳು ತಪಾಸಣೆಗೆ ಆಗಮಿಸಲು ಬಸ್‌ಗಳ ವ್ಯವಸ್ಥೆ ಮಾಡಬೇಕು. ತಪಾಸಣೆ ನಡೆಯುವ ಸ್ಥಳದಲ್ಲಿ ಹೆಚ್ಚಿನ ಕೌಂಟರ್ ತೆರೆದು ಊಟದ ವ್ಯವಸ್ಥೆ ಮಾಡಬೇಕು. ತಾತ್ಕಾಲಿಕ ಶೌಚಾಲಯಗಳ ವ್ಯವಸ್ಥೆ ಮಾಡುವುದು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಯಿತು.
ಸಭೆಯಲ್ಲಿ ಜಿಪಂ ಸಿಇಒ ಪಿ.ಸಿ. ಜಯಣ್ಣ, ಡಿವೈಎಸ್ಪಿ ಶೋಭಾ ರಾಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮರೀಗೌಡ, ಆರೋಗ್ಯ ಇಲಾಖೆಯ ಡಾ.ರೋಚನ, ಡಾ.ಸೋಮಶೇಖರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.