ಸರ್ಕಾರಿ ಕಾಲೇಜುಗಳ ಉದಾಸೀನ ಸಲ್ಲದು: ಭಾಗ್ಯಲಕ್ಷ್ಮಿ
ಎಚ್.ಡಿ. ಕೋಟೆ: ಇಲ್ಲಿನ ಸರ್ಕಾರಿ ಪದವಿಪೂರ್ವ ಬಾಲಕರ ಕಾಲೇಜಿನಲ್ಲಿ ಶುಕ್ರವಾರ ನಡೆದ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ ಕ್ರೀಡಾ ಚಟುವಟಿಕೆಯ ಸಮಾರೋಪ ಸಮಾರಂಭವನ್ನು ಜಿಪಂ ಸದಸ್ಯೆ ಭಾಗ್ಯಲಕ್ಷ್ಮಿ ನಿಂಗರಾಜು ಉದ್ಘಾಟಿಸಿದರು.
ನಂತರ ಅವರು ಮಾತನಾಡಿ, ಇಂದಿನ ದಿನಗಳಲ್ಲಿ ಸರ್ಕಾರಿ ಕಾಲೇಜುಗಳನ್ನು ಉದಾಸೀನದಿಂದ ನೋಡುತ್ತಾರೆ. ಈ ಕಾಲೇಜುಗಳಲ್ಲಿ ಬಡತನ ರೇಖೆಗಿಂತ ಕೆಳಗೆ ಇರುವವರು ಈ ಕಾಲೇಜುಗಳಲ್ಲಿ ಓದುವುದನ್ನು ಕಾಣಬಹುದಾಗಿದೆ. ಪೋಷಕರು ತಮ್ಮ ಮಕ್ಕಳು ಉತ್ತಮ ಕಾಲೇಜುಗಳಲ್ಲಿ ವ್ಯಾಸಂಗ ಮಾಡಲು ಬಯಸುತ್ತಿರುವುದು ಸಾಮಾನ್ಯವಾಗಿದೆ. ಕಳೆದ ಸಾಲಿನಲ್ಲಿ ಶೇ.74 ರಷ್ಟು ಫಲಿತಾಂಶ ಬಂದಿರುವುದು ಹೆಮ್ಮೆಯ ವಿಷಯವಾಗಿದೆ. ಇಂತಹ ಕಾಲೇಜುಗಳಲ್ಲಿ ಉಪನ್ಯಾಸಕರು ಮಕ್ಕಳ ಹಿತವನ್ನು ಗಮನದಲ್ಲಿ ಇಟ್ಟುಕೊಂಡು ಉತ್ತಮ ಸೇವೆ ಸಲ್ಲಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ತಿಳಿಸಿದರು. ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕ ಕೆ.ಎಂ. ಪುಟ್ಟು, ಎಸ್ಐ ಶಿವಮಾದಯ್ಯ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಶಂಕರಲಿಂಗೇಗೌಡ, ಪಪಂ ಸದಸ್ಯ ಎಚ್.ಸಿ. ನರಸಿಂಹಮೂರ್ತಿ, ಪ್ರಾಂಶುಪಾಲ ಸಂಘದ ಅಧ್ಯಕ್ಷ ವಾಸು, ಮಹಾರಾಜ ಕಾಲೇಜು ಪ್ರಾಂಶುಪಾಲ ನಾಗರಾಜು, ಕಾಲೇಜು ಸಮಿತಿ ಸದಸ್ಯ ದೇವನಾಯಕ, ಇಂತಿಯಾಜ್ಅಹಮದ್, ಸಾವಿತ್ರಮ್ಮ, ಪ್ರಾಂಶುಪಾಲ ಚಲುವಯ್ಯ, ಉಪನ್ಯಾಸಕರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

